ಬೆಂಗಳೂರು : ರಾಜ್ಯ ಸರ್ಕಾರವು ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಉಪನ್ಯಾಸಕರ ವೇತನಕ್ಕಾಗಿ ರಾಜ್ಯ ಸರ್ಕಾರವು ನಾಲ್ಕನೇ ತ್ರೈಮಾಸಿಕ ಅನುದಾನ 148.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ರಾಜ್ಯದ ಸುಮಾರು 655 ಪದವಿಪೂರ್ವ ಕಾಲೇಜುಗಳ ಹತ್ತು ಸಾವಿರ ಉಪನ್ಯಾಸಕರಿಗೆ ಕಳೆದ ಎರಡು ತಿಂಗಳಿಂದ ವೇತನ ಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ 148.50 ಕೋಟಿ ರೂ.ಗಳನ್ನು ವಿತರಣೆ ಮಾಡಿದೆ. ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕೋರಿಕೆ ಮೇರೆಗೆ ಅನುದಾನ ಬಿಡುಗಡೆ ಮಾಡಲಾಗಿದೆ.
ಇನ್ನು ಮೂರನೇ ತ್ರೈಮಾಸಿಕ ವೇತನದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಮೊದಲ ಆದ್ಯತೆ ನೀಡಿ ವರ್ಷಾಂತ್ಯದ ಬಿಲ್ಲುಗಳನ್ನು ಪೂರ್ಣಗೊಳಿಸಲು ಪಿಯು ಇಲಾಖೆ ನಿರ್ಧರಿಸಿದೆ.