Breaking News
Home / ಬೆಳಗಾವಿ / ಸಚಿವ ಸ್ಥಾನದಿಂದ ವಂಚಿತರಾಗಿರುವ ಮಹೇಶ ಕುಮಟಳ್ಳಿ ಅವರಿಗೆ ನನ್ನಿಂದ ಏನಾದರೂ ಅನ್ಯಾಯವಾದಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದೇನೆಯೇ ಹೊರತು ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಯೊಡ್ಡಿಲ್ಲವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ

ಸಚಿವ ಸ್ಥಾನದಿಂದ ವಂಚಿತರಾಗಿರುವ ಮಹೇಶ ಕುಮಟಳ್ಳಿ ಅವರಿಗೆ ನನ್ನಿಂದ ಏನಾದರೂ ಅನ್ಯಾಯವಾದಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದೇನೆಯೇ ಹೊರತು ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಯೊಡ್ಡಿಲ್ಲವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ

Spread the love

ಗೋಕಾಕ : ಸಚಿವ ಸ್ಥಾನದಿಂದ ವಂಚಿತರಾಗಿರುವ ಮಹೇಶ ಕುಮಟಳ್ಳಿ ಅವರಿಗೆ ನನ್ನಿಂದ ಏನಾದರೂ ಅನ್ಯಾಯವಾದಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದೇನೆಯೇ ಹೊರತು ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಯೊಡ್ಡಿಲ್ಲವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಶನಿವಾರ ಸಂಜೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ಹೇಳಿಕೆ ಪ್ರಕಟಗೊಂಡಿದೆ.

    ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಶಾಸಕ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಧ್ಯಮಗಳಲ್ಲಿ ಹೇಳಿಕೆ ಪ್ರಕಟಗೊಂಡಿದೆ. ಆದರೆ ಮಹೇಶ ಕುಮಟಳ್ಳಿ ಅವರಿಗೆ ನನ್ನಿಂದ ಅನ್ಯಾಯವಾದಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದೇನೆ. ರಮೇಶ ಜಾರಕಿಹೊಳಿ ಅವರಿಂದ ನನಗೆ ಸಚಿವ ಸ್ಥಾನ ಕೈ ತಪ್ಪಿದೆ ಎಂದು ಕುಮಟಳ್ಳಿ ಅವರ ಬಾಯಿಂದ ಬಂದಲ್ಲಿ ನಾನು ಕೂಡಲೇ ಶಾಸಕ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದೇನೆಯೇ ಹೊರತು ಇದನ್ನು ಬೇರೆ ರೀತಿಯಾದ ಅಪಾರ್ಥ ಕಲ್ಪಿಸಿಕೊಡುವ ಅಗತ್ಯವಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ಕುಮಟಳ್ಳಿ ಸೇರಿದಂತೆ ಹಲವರ ಪಾತ್ರವಿದೆ. ಆದರೆ ಎಲ್ಲರೂ ಮಂತ್ರಿಯಾದರೂ ಕುಮಟಳ್ಳಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಮುಂದಿನ ದಿನಗಳಲ್ಲಿ ಕುಮಟಳ್ಳಿಯವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ನಮಗೆ ಬಿ.ಎಸ್. ಯಡಿಯೂರಪ್ಪನವರು ಹಾಗೂ ಕೇಂದ್ರ ಸರ್ಕಾರದ ಮೇಲೆ ಅಪಾರ ನಂಬಿಕೆ ಇದೆ.

ನಮ್ಮ ಬೇಡಿಕೆಯನ್ನು ಹೈ ಕಮಾಂಡ ಈಡೇರಿಸುವ ಭರವಸೆ ಇದೆ ಎಂದು ಸಚಿವ ರಮೇಶ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

About Ad9 Haberleri

Check Also

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ

Spread the loveಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ …