ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಜನತಾ ಕರ್ಫ್ಯೂಗೆ ಸಂಕೇಶ್ವರ ನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಒಂದು ದಿನ ರವಿವಾರ ಬೆಳಗ್ಗೆ ಯಿಂದ ಸಾಯಂಕಾಲದವರೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ನೀಡಿದ ಜನತಾ ಕರ್ಫ್ಯೂಗೆ ಸಂಕೇಶ್ವರ ಜನತೆ ಸಂಪೂರ್ಣವಾಗಿ ಬೆಂಬಲಿಸಿದೆ.
ನಗರದ ಪ್ರಮುಖ ಬೀದಿಗಳು ಜನರಿಲ್ಲದೆ ಶಾಂತವಾಗಿತ್ತು. ಬಸ್ ಸಂಚಾರ, ಅಟೋ, ಖಾಸಗಿ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದವು ಪ್ರಯಾಣಿಕರಿಲ್ಲದೇ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ದಿನನಿತ್ಯದ ಅಂಗಡಿ, ಹೊಟೇಲ್, ಬೀದಿ ಬದಿ ವ್ಯಾಪಾರಸ್ಥರು ಜನತಾ ಕರ್ಫ್ಯೂಗೆ ಬೆಂಬಲಿಸಿ ಅಂಗಡಿಗಳನ್ನು ಬಂದ್ ಮಾಡಿದ ದೃಶ್ಯ ಕಂಡು ಬಂದವು.
ಇದಕ್ಕೆ ಸಂಬಂಧಿಸಿದಂತೆ ನಿನ್ನೆಯೇ ನಿಡಸೋಸಿಯ ಶ್ರೀ ಶಿವಲಿಂಗೆಶ್ವರ ಸ್ವಾಮಿಜಿ ಹಾಗೂ ಮಾಜಿ ಸಂಸದ ರಮೇಶ ಕತ್ತಿ ಅವರು ಕೂಡಾ ವಿಡಿಯೋ ಮುಖಾಂತರ ಸಾರ್ವಜನಿಕರಲ್ಲಿ ಈ ಜನತಾ ಕರ್ಫ್ಯೂಗೆ ಬೆಂಬಲಿಸಿ ಮತ್ತು ಆರೋಗ್ಯದ ದೃಷ್ಟಿಯಿಂದ ಒಂದು ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಯಾರೂ ಮನೆಯಿಂದ ಹೊರಗೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ವರದಿ: ಸಚೀನ ಕಾಂಬಳೆ