ಬೆಳಗಾವಿ: ವಿಧಾನ ಪರಿಷತ್ತಿನ ಚುನಾವಣೆಗೆ ಬೆಳಗಾವಿಯಲ್ಲಿ ಅಖಾಡಾ ರೆಡಿಯಾಗಿದ್ದು, ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಆಯ್ಕೆ ಮಾಡಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆದ ಮಹತ್ವದ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಹೆಸರು ಫೈನಲ್ ಆಗಿದೆ.
ಬೇರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕಿಯೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದು ಪರಿಷತ್ ಚುನಾವಣೆಯ ಎಲ್ಲ ಅಭ್ಯರ್ಥಿಗಳನ್ನು ಒಟ್ಟಿಗೆ ಘೋಷಣೆ ಮಾಡಲಿದ್ದಾರೆ. ಕಾಂಗ್ರೆಸ್ ನಾಯಕರು ಕೆಪಸಿಸಿ ಕಚೇರಿಯಲ್ಲಿ ಸರಣಿ ಸಭೆಗಳು ನಡೆಯುತ್ತಿವೆ.
ಚನ್ನರಾಜ ಹಟ್ಟಿಹೊಳಿ ಅವರು ಈಗಾಗಲೇ ಬೆಳಗಾವಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರಚಾರ ಮುಗಿಸಿದ್ದು ಅವರು ಪ್ರಚಾರ ನಡೆಸಿದ ಪ್ರದೇಶಗಳಲ್ಲಿ ಈಗಾಗಲೇ ಗ್ಯಾಸ್ ಒಲೆ ಉರಿದು ಚುನಾವಣೆಯ ಕಾವು ಹೆಚ್ವಿಸಿದೆ.
ಒಟ್ಟಾರೆ ಈ ಬಾರಿಯ ವಿಧಾನ ಪರಿಷತ್ತಿನ ಚುನಾವಣೆ ಬೆಳಗಾವಿ ಕ್ಷೇತ್ರದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು ಬಿಜೆಪಿಯಿಂದ ಮಹಾಂತೇಶ ಕವಟಗಿಮಠ,ಕಾಂಗ್ರೆಸ್ಸಿನಿಂದ ಚನ್ನರಾಜ ಹಟ್ಟಿಹೊಳಿ,ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಕಣಕ್ಕಿಳಿಯಲಿದ್ದು ,ಎರಡು ಸ್ಥಾನಗಳಿಗಾಗಿ ಮೂವರು ಪ್ರಬಲ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ದೆ ನಡೆಯುವದು ಸ್ಪಷ್ಟವಾಗಿದೆ.
Ad9 News Latest News In Kannada
