Breaking News
Home / ಮೂಡಲಗಿ / ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲನೆ

ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲನೆ

Spread the love

 


ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು.


ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ ಕಚೇರಿ ಆರಂಭ ಮಾಡಲಾಗುವುದು ಎಂದು ಹೇಳಿದರು.


ಅರಭಾವಿ ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲವಾಗಿ ಮೂಡಲಗಿಯಲ್ಲಿ ಹೊಸ ಕಚೇರಿ ಆರಂಭವಾಗಲಿದೆ. ಮೂಡಲಗಿ ತಾಲೂಕಿನ ಸಾರ್ವಜನಿಕರ ಹಿತದೃಷ್ಟಿಯಿಂದ ಗೋಕಾಕದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನೇ ಇಲ್ಲಿ ತಾತ್ಕಾಲಿಕವಾಗಿ ನಿಯೋಜನೆ ಮಾಡಲಾಗುತ್ತದೆ.‌ನಾಗರೀಕರು ಹಾಗೂ ರೈತರಿಗೆ ಎಲ್ಲ ರೀತಿಯ ಅನುಕೂಲ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ಬೈಲಹೊಂಗಲ ಉಪ-ವಿಭಾಗಾಧಿಕಾರಿ ಡಾ. ಶಶಿಧರ ಬಗಲಿ, ತಹಶಿಲ್ದಾರ ಡಿ.ಜೆ ಮಹಾತ, ಗೋಕಾಕ ಉಪ ನೋಂದಣಿ ಅಧಿಕಾರಿ ರವಿ ಸಂಕನಗೌಡ್ರ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಮರೇಪ್ಪ ಮರೇಪ್ಪಗೋಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.


Spread the love

About Ad9 Haberleri

Check Also

ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? :ಬಾಲಚಂದ್ರ ಜಾರಕಿಹೊಳಿ

Spread the love ಮೂಡಲಗಿ – ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. …