Breaking News

ಮಹಾಲಕ್ಷ್ಮೀ ತಳವಾರ ಮರು ಮೌಲ್ಯಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ : ರಾಜ್ಯಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾಳೆ ಕಹಾಮ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

Spread the love

ಮೂಡಲಗಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಕೌಜಲಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ
ಮಹಾಲಕ್ಷ್ಮೀ ತಳವಾರ ಮರು ಮೌಲ್ಯಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಅರಭಾಂವಿ ಕ್ಷೇತ್ರದ ಶೈಕ್ಷಣಿಕ
ಸಾಧನೆಯನ್ನು ರಾಜ್ಯಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾಳೆಂದು ಕಹಾಮ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷವ್ಯಕ್ತಪಡಿಸಿದ್ದಾರೆ.
ಮೂಡಲಗಿ ವಲಯವು ಶೈಕ್ಷಣಿಕವಾಗಿ ಎಲ್ಲ ಕಾರ್ಯಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದೆ.
ಗುಣಾತ್ಮಕ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಹಾಗೂ ಸದ್ಯ 625 ಕ್ಕೆ 625 ಅಂಕ ಪಡೆಯುವ ಮೂಲಕ ಸಾಭಿತಾಗಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ ಬಿಇಒ ಅಜಿತ ಮನ್ನಿಕೇರಿ, ಮುಖ್ಯೋಪಾಧ್ಯಾಯ ಸುಭಾಸ ವಲ್ಯಾಪೂರ, ಎಸ್.ಡಿ.ಎಮ್.ಸಿ
ಪದಾಧಿಕಾರಿಗಳು, ಶಿಕ್ಷಕ ಸಿಬ್ಬಂದಿ, ಶಿಕ್ಷಣ ಪ್ರೇಮಿಗಳು, ಪಾಲಕ ಪೋಷಕರ ಹಾಗೂ ಗ್ರಾಮಸ್ಥರ ಶೈಕ್ಷಣಿಕ ಕಾಳಜಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About Ad9 News

Check Also

ಕೇಂದ್ರ ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ರಾ.ಸ.ಸ.ಕಾ.ಮ ಮಂಡಳಿ ನಿರ್ದೇಶಕ ಅಶೋಕ ಪಾಟೀಲ

Spread the love ಗೋಕಾಕ- ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ …

Leave a Reply

Your email address will not be published. Required fields are marked *