ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು.
ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಶಾಸಕರ ಜನಪರ ಕಾಳಜಿಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಸಿದ್ಧಾಪೂರ, ಸದಸ್ಯರಾದ ರಂಗಪ್ಪ ಪುಗಶೆಟ್ಟಿ, ಉಮಾ ಮಠದ, ಮಹಾದೇವಿ ದೊಡಗೌಡರ, ಶಾರವ್ವ ಲಗಳಿ, ದುರಗಪ್ಪ ಹಡಗಿನಾಳ, ಪ್ರಮುಖರಾದ ಪಾಂಡಪ್ಪ ಹೆಗಡೆ, ಭೀಮಪ್ಪ ಗೊಡಚಿ, ಸಿದ್ದಪ್ಪ ಹೆಗಡೆ, ಮಹಾದೇವ ದೊಡಗೌಡರ, ಶರೀಫ ನದಾಫ, ಬಸಪ್ಪ ಪುಗಶೆಟ್ಟಿ, ಹನಮಂತ ಹೆಗಡೆ, ಪರಮೇಶ್ವರ ಹೆಗಡೆ, ಸೋಮಪ್ಪ ಗಂಗರಡ್ಡಿ, ಯಲ್ಲಪ್ಪ ಆಲಕನೂರ, ಬಸಪ್ಪ ಹೆಗಡೆ, ಯಲ್ಲಪ್ಪ ದೊಡಗೌಡರ, ರಮೇಶ ಸಣ್ಣಕ್ಕಿ, ಬಸವರಾಜ ತೆಗ್ಗಿ, ಬಸವರಾಜ ಗಂಗರಡ್ಡಿ, ಬಸವರಾಜ ಪುಗಶೆಟ್ಟಿ, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಫೋಟೋ ಕ್ಯಾಪ್ಷನ್ : ಮೂಡಲಗಿ 1 : ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ಜರುಗಿತು. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.
Home / ಮೂಡಲಗಿ / ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹೊನಕುಪ್ಪಿ ರಸ್ತೆ 2.50 ಕೋಟಿ ರೂ. ಅನುದಾನ ಬಿಡುಗಡೆ
Check Also
ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
Spread the love *ಮೂಡಲಗಿ*- ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಆದರ್ಶ …