ಗೋಕಾಕ್- ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಯಾಗಿದ್ದ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.
ಅಂಕಲಗಿ ಮಠವು ಬೆಳಗಾವಿ ನಾಡಿನಲ್ಲಿ ವಿಶಿಷ್ಟ ಇತಿಹಾಸ, ಭವ್ಯ ಪರಂಪರೆಯನ್ನು ಹೊಂದಿದೆ. ಮಠದ ಸರ್ವತೋಮುಖ ಬೆಳವಣಿಗೆಗಳಲ್ಲಿ ಶ್ರೀ ಗಳ ಪಾತ್ರ ಗಣನೀಯವಾಗಿತ್ತು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆಯನ್ನು ಸಲ್ಲಿಸಿದ್ದರು. ಭಕ್ತರ ಪಾಲಿಗೆ ಪೂಜ್ಯನೀಯವಾಗಿತ್ತು. ಅನೇಕ ಪವಾಡಗಳಿಗೆ ಶ್ರೀ ಮಠವು ಹೆಸರುವಾಸಿಯಾಗಿದೆ. ಪೂಜ್ಯ ಶ್ರೀ ಗಳನ್ನು ಭಕ್ತರು ನಡೆದಾಡುವ ದೇವರು ಕರೆಯುತ್ತಿದ್ದರು. ಶ್ರೀ ಗಳ ನಿಧನದಿಂದ ಇಡೀ ನಾಡೇ ಬಡವಾಗಿದೆ. ಅಸಂಖ್ಯಾತ ಭಕ್ತರಿಗೆ ಶ್ರೀ ಗಳ ನಿಧನದ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ. ಶ್ರೀ ಗಳ ದಿವ್ಯಾತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.
Check Also
ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿದ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ
Spread the love ಗೋಕಾಕ- ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಭೇಟಿ ಮಾಡಿ ಸಂತ್ರಸ್ತರಿಗೆ …