Breaking News
Home / ಮೂಡಲಗಿ / ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

*ಮೂಡಲಗಿ* : ಮೇ 10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಬುಧವಾರದಂದು ತಮ್ಮ ನಾಮಪತ್ರ ಸಲ್ಲಿಸಿದ ಬಳಿಕ ಪಟ್ಟಣದ ಶಿವಬೋಧರಂಗ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರ ಆಶೀರ್ವಾದದಿಂದ ಈ ಚುನಾವಣೆಯಲ್ಲಿ ನಮ್ಮ ಗೆಲುವು ಖಚಿತವೆಂದು ತಿಳಿಸಿದರು.
ಬೇಸಿಗೆಯ ಅರ್ಭಟಕ್ಕೆ ಜನರು ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣದಿಂದ ಜನರಿಗೆ ತೊಂದರೆಯಾಗಬಾರದು ಎನ್ನುವ ಉದ್ಧೇಶದಿಂದ ಇಂದು ಬಿಜೆಪಿಯಿಂದ ನಾಮಪತ್ರವನ್ನು ಸರಳವಾಗಿ ಸಲ್ಲಿಸಿದ್ದೇನೆ. ಕೇವಲ ಸೂಚಕರನ್ನು ಕರೆದುಕೊಂಡು ನಾಮಪತ್ರ ಸಲ್ಲಿಸಿದ್ದೇನೆ. ಎಪ್ರೀಲ್ 21 ರಿಂದ ಅರಭಾವಿ ಕ್ಷೇತ್ರಾಧ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಲಾಗುವುದು. ಪ್ರತಿ ಮತಗಟ್ಟೆಗಳಿಂದ ಚುನಾವಣಾ ಪ್ರಚಾರವನ್ನು ನಡೆಸಲು ಉದ್ಧೇಶಿಸಲಾಗಿದೆ ಎಂದು ಹೇಳಿದರು.
ಜನರಿಗೆ ಏನು ಬೇಕು ಅದನ್ನು ನಾವು ಮಾಡೋಣ. ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸೋಣ. ಅದನ್ನು ಬಿಟ್ಟು ವಿರೋಧಿಗಳು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರೂ ಅವುಗಳಿಗೆ ಪ್ರತಿಕ್ರಿಯೆ ನೀಡಬೇಡಿ. ನಮ್ಮ ಕೆಲಸ ಏನಿದ್ದರೂ ಅದು ಅಭಿವೃದ್ಧಿಯೊಂದೇ. ಅರಭಾವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಮುಂದೆಯೂ ಸಹ ಜನರ ಆಶೀರ್ವಾದದಿಂದ ಬಿಜೆಪಿ ಮತ್ತೇ ಅಧಿಕಾರಕ್ಕೆ ಬರಲಿದೆ. ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಬೇಸಿಗೆಯ ಬರದಲ್ಲಿ ಜನರಿಗೆ ಕುಡಿಯುವ ನೀರಿನ ಆಹಾಕಾರ ತಪ್ಪಿಸುವ ಉದ್ಧೇಶದಿಂದ ಈಗಾಗಲೇ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಹಿಡಕಲ್ ಜಲಾಶಯದಿಂದ ನೀರನ್ನು ಹರಿಸುವಂತೆ ಮನವಿ ಮಾಡಿಕೊಂಡಿದ್ದೇನೆ. ಜನರ ಸಮಸ್ಯೆಗಳ ಪರಿಹಾರವೇ ನಮ್ಮ ಮುಖ್ಯ ಧ್ಯೇಯವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.


Spread the love

About Ad9 Haberleri

Check Also

ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love *ಮೂಡಲಗಿ*- ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಆದರ್ಶ …

Leave a Reply

Your email address will not be published. Required fields are marked *