Breaking News
Home / ಮೂಡಲಗಿ / ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

*ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಇಷ್ಟರಲ್ಲೇ ಸರ್ಕಾರದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು.
ಪಟ್ಟಣದ ತಹಶೀಲ್ದಾರ ಕಛೇರಿ ಹತ್ತಿರ ಇದಕ್ಕಾಗಿ 2.04 ಎಕರೆ ನಿವೇಶನವನ್ನು ಗುರುತಿಸಲಾಗಿದ್ದು, ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಮೂಡಲಗಿಯಲ್ಲಿ ಮಿನಿ ವಿಧಾನ ಸೌಧ ತಲೆ ಎತ್ತಲಿದೆ ಎಂದು ಹೇಳಿದರು.
ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೂ ಪಟ್ಟಣದ ಎಪಿಎಂಸಿ ಬಳಿ ನಿವೇಶನ ನೀಡಲಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದು ಕೂಡ ಮಂಜೂರಾಗಲಿದೆ ಎಂದು ತಿಳಿಸಿದರು.
ಪಟ್ಟಣದ ಸೌಂದರ್ಯಿಕರಣಕ್ಕೆ ಹೆಚ್ಚಿನ ಒತ್ತು ನೀಡಲು ಉದ್ಧೇಶದಿಂದ ಪುರಸಭೆಗೆ ಆದಾಯವನ್ನು ಹೆಚ್ಚಿಸುವ ದೃಷ್ಟಿಯಿಂದ ಮನೆಗಳ ನಿರ್ಮಾಣಕ್ಕಾಗಿ ಕೃಷಿ ಜಮೀನುಗಳನ್ನು ಗುಂಟೆ ಖರೀದಿ ಮಾಡುತ್ತಿದ್ದು, ಇದನ್ನು ಸ್ಥಗಿತಗೊಳಿಸಿ, ಕೃಷಿಯೇತರ(ಎನ್‍ಎ) ಜಮೀನುಗಳನ್ನಾಗಿ ಪರಿವರ್ತಿಸಿ ಮನೆಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪುರಸಭೆ ವ್ಯಾಪ್ತಿಯಲ್ಲಿ ನೋಂದಣಿಯಾಗಿದ ಅನಧೀಕೃತ ಸುಮಾರು 3200 ಕ್ಕೂ ಅಧಿಕ ಮನೆಗಳ ನೋಂದಣಿಗಾಗಿ ಪುರಸಭೆಗೆ ಅಭಿವೃದ್ಧಿ ನಿಧಿಯನ್ನು ಪಡೆದುಕೊಳ್ಳುವಂತೆ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದರು.
ಈಗಾಗಲೇ ಪಟ್ಟಣದ ವ್ಯಾಪ್ತಿಯಲ್ಲಿ ಅನೇಕ ರಸ್ತೆಗಳನ್ನು ಸುಧಾರಣೆ ಮಾಡಲಾಗಿದೆ. ಚುನಾವಣೆಯ ಸಂದರ್ಭದಲ್ಲಿ ನೀಡಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸಲಿಕ್ಕೆ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಇದರ ಜೊತೆಗೆ ಕೆಲವು ಸಮಾಜಗಳಿಗೆ ಅನುಕೂಲವಾಗಲು ಭವನಗಳ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಹುಸೇನಸಾಬ ಶೇಖ, ಸುಭಾಸ ಸಣ್ಣಕ್ಕಿ, ಜಯಾನಂದ ಪಾಟೀಲ, ಆನಂದ ಟಪಾಲ, ಶಿವು ಸಣ್ಣಕ್ಕಿ, ಅನ್ವರ ನದಾಫ, ಬಸು ಝಂಡೇಕುರುಬರ, ರಾಜು ಪೂಜೇರಿ, ಪ್ರಕಾಶ ಮುಗಳಖೋಡ, ನನ್ನುಸಾಬ ಶೇಖ, ಮುಖ್ಯಾಧಿಕಾರಿ ದೀಪಕ ಹರ್ದಿ ಪಾಲ್ಗೊಂಡಿದ್ದರು.


Spread the love

About Ad9 Haberleri

Check Also

ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love *ಮೂಡಲಗಿ*- ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಆದರ್ಶ …

Leave a Reply

Your email address will not be published. Required fields are marked *