Breaking News

Ad9 News

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮೂಡಲಗಿ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ರಾಯಬಾಗ ತಾಲೂಕುಗಳ ಬಹುಗ್ರಾಮ ಕುಡಿಯುವ ನೀರು ಸರಬುರಾಜು …

Read More »

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಅರಭಾವಿ ಮಠ(ತಾ.ಮೂಡಲಗಿ)- ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ ಮೂಲಕ ಯುಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅರಭಾವಿ ನೆಲದ ಶೃತಿ …

Read More »

ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು. ಅರಭಾವಿಯಿಂದ ಸತತ 6ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಪುರುಷೋತ್ತಮಾನಂದ ಮಹಾಸ್ವಾಮಿಗಳು, …

Read More »

ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಅಧಿಕಾರಿಗಳಿಗೆ:ಅಧಿಕಾರಿಗಳಿಗೆ ಸೂಚನೆ ನೀಡಿದ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಪ್ರತಿ ಗ್ರಾ.ಪಂ ವ್ಯಾಪ್ತಿಯ …

Read More »

ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಆಯ್ಕೆಗೆ ಶ್ರಮಿಸಿದ್ದಾರೆ. ಯಾವ ಆಮೀಷಕ್ಕೂ ಒಳಗಾಗದೇ ನಾನು ಮನೆಯಲ್ಲಿದ್ದರೂ ದಾಖಲೆಯ ಮತಗಳ ವಿಜಯಕ್ಕೆ ಕಾರಣೀಕರ್ತರಾಗಿದ್ದಾರೆ. ಇಂತಹ ಕಾರ್ಯಕರ್ತರನ್ನು ಪಡೆದಿರುವುದು ನಾನು ಧನ್ಯನಾಗಿದ್ದೇನೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರ ಸಂಜೆ ತಾಲೂಕಿನ ನಾಗನೂರ ಪಟ್ಟಣದ …

Read More »

ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ

*ಗೋಕಾಕ್*- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಭೀಮಪ್ಪ ಗಡಾದ ಅವರನ್ನು 74700 ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ಬಾಲಚಂದ್ರ ಜಾರಕಿಹೊಳಿಯವರು “ಡಬಲ್ ಹ್ಯಾಟ್ರಿಕ್” ಸಾಧನೆ ಮಾಡಿದ್ದಾರೆ. ಅಲ್ಲದೇ ಆಡಳಿತಾರೂಢ ಬಿಜೆಪಿಯಿಂದ ರಾಜ್ಯದಲ್ಲಿಯೇ ಅತೀ ಹೆಚ್ಚಿನ ಮತಗಳಿಂದ ಆಯ್ಕೆಯಾದ ಕೀರ್ತಿಗೆ …

Read More »

ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ

——- *ಗೋಕಾಕ:* ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊಸಪೇಟ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ‌೩ ಮತಗಟ್ಟೆ ೧೩೧ ರಲ್ಲಿ ಬುಧವಾರ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬೊಮ್ಮಾಯಿ ಅವರು ಈಗಾಗಲೇ …

Read More »

ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ : ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದಿರಿ. ನಾನು ಅದಕ್ಕೆ ಆಭಾರಿಯಾಗಿದ್ದೇನೆ. ತಾವೆಲ್ಲ ೨ನೇ ಸ್ಥಾನದವರ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಮೊದಲ ಸ್ಥಾನದಲ್ಲಿದ್ದವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕೆಂದು ಅರಬಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ …

Read More »

.ಎಸ್.ಎಲ್.ಸಿ ಫಲಿತಾಂಶದಲ್ಲಿ ಗುಣಮಟ್ಟದ ಫಲಿತಾಂಶ ಪಡೆಯುವಲ್ಲಿ ಯಶಸ್ವಿ: ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಲಗಿ ಶೈಕ್ಷಣಿಕ ವಲಯದ 7175 ವಿದ್ಯಾರ್ಥಿಗಳ ಪೈಕಿ 6916 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 96.39 ಫಲಿತಾಂಶದೊಂದಿಗೆ ಶೈಕ್ಷಣಿಕ ವಲಯವು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಎಮ್.ಡಿ.ಆರ್.ಎಸ್ ಕಲ್ಲೋಳ್ಳಿ ವಸತಿ ಶಾಲೆಯ ಪೂಜಾ ಗಂಗನ್ನವರ 622 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಪ್ರಕಟಗೊಂಡ ಎಸ್.ಎಸ್.ಎಲ್.ಸಿ ಪಲಿತಾಂಶದಲ್ಲಿ ಮೂಡಲಗಿ ಶೈಕ್ಷಣಿಕ …

Read More »

ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ರೈತ ಸಂಘದಿಂದ ಬೆಂಬಲ

*ಗೋಕಾಕ:* ಅರಭಾವಿ ಮತಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು, ರೈತರ ಪರವಾದ ಯೋಜನೆಗಳು ಸೇರಿದಂತೆ ರೈತರ ಬಹುಬೇಡಿಕೆಗಳ ಹೋರಾಟಕ್ಕೆ ಅವರ ಸ್ಪಂದನೆ ಮೆಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸಿದೆ. ರೈತರ ಮಹತ್ವಾಕಾಂಕ್ಷಿ ಯೋಜನೆಗಳಾದ ಕಲ್ಮಡಿ ಏತ ನೀರಾವರಿ, ರಾಮಲಿಂಗೇಶ್ವರ ಏತ ನೀರಾವರಿ ಜಾರಿಗೆ ತರುವಲ್ಲಿ ಬಾಲಚಂದ್ರ ಅವರ ಪಾತ್ರ ಬಹುದೊಡ್ಡದು. ಜತೆಗೆ ಘಟಪ್ರಭಾ ಎಡದಂಡೆ, …

Read More »