Breaking News

Ad9 News

ಮಹಾರಾಷ್ಟ್ರದಲ್ಲಿ ಕರ್ನಾಟಕದ 10 ಸಾರಿಗೆ ಬಸ್ ಗಳಿಗೆ ಬೆಂಕಿ

ಬೆಳಗಾವಿ : ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕದ 10 ಸಾರಿಗೆ ಬಸ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ಸೇರಿದ 10 ಬಸ್ಸಿಗೆ ಬೆಂಕಿ ಹಚ್ಚಲಾಗಿದ್ದು, 20 ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಧುಳೆ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದಗಿದ್ದ ಹೋರಾಟಗಾರರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ …

Read More »

ಪ್ರಭಾಶುಗರ್ಸ್ ಕಾರ್ಖಾನೆಯ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ

ಗೋಕಾಕ: ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಸದಾ ಬದ್ಧನಿರುವೆ. ರೈತರು ಹಾಗೂ ಕಾರ್ಮಿಕರ ಏಳ್ಗೆಗಾಗಿ ಶ್ರಮಿಸಲು ನಾವು ಸಿದ್ಧರಿದ್ದೇವೆ. ಕಾರ್ಖಾನೆಯ ಅಭಿವೃದ್ಧಿಯಲ್ಲಿ ರೈತರ ಸಹಕಾರ ಅಗತ್ಯವಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಈ ಕಾರ್ಖಾನೆಯನ್ನು ಮಾದರಿಯನ್ನಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆ ಹೊಂದಿರುವುದಾಗಿ …

Read More »

ಶಿವ ಶರಣ ನೂಲಿ ಚಂದಯ್ಯ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

  ಮೂಡಲಗಿ : ವೈಚಾರಿಕ ಕ್ರಾಂತಿಯ ಹರಿಕಾರರು, ಶಿವ ಶರಣರಾದ ನೂಲಿ ಚಂದಯ್ಯರವರ ಹಾಗೂ ಸಾಮಾಜಿಕ ಬದಲಾವಣೆಯ ಹರಿಕಾರರಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರಳ ರೀತಿಯಲ್ಲಿ ಹಾಗೂ ಅಥ೯ಪೂಣ೯ವಾಗಿ ತಹಶೀಲ್ದಾರ ಕಚೇರಿಯಲ್ಲಿ ಆಚರಿಸಲಾಯಿತು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಹಶೀಲ್ದಾರರ ಶಿವಾನಂದ ಎ ಬಬಲಿ ಅವರು ನೂಲಿಯ ಚಂದಯ್ಯನವರು 12 ನೇ ಶತಮಾನದ ಅಣ್ಣ ಬಸವಣ್ಣನವರ ಸಮಕಾಲಿನವರಾಗಿ, ಶ್ರೇಷ್ಠ ಶಿವಶರಣರಾಗಿ, ತಮ್ಮ ಬಾಳಿನುದ್ದಕ್ಕೂ ಪ್ರಾಮಾಣಿಕತೆಯನ್ನು ಮೆರೆದು ಕಾಯಕವೇ …

Read More »

ಬರದ ಛಾಯೆ ನಡುವೆ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಆರಂಭದಿಂದಲೂ ಕಣ್ಣ ಮುಚ್ಚಾಲೆ ಆಡುತ್ತಿರುವ ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಳೆದು ನಿಂತ ಬೆಳೆಗೆ ಅಗತ್ಯವಾಗಿದ್ದ ಮಳೆ ಇಲ್ಲದೆ ಬರದ ಛಾಯೆ ಆವರಿಸಿದೆ. ರಾಜ್ಯದಲ್ಲಿ ಮಳೆ ಕೊರತೆ ನಡುವೆ ಹವಾಮಾನ ಇಲಾಖೆ ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ ನೀಡಿದೆ ಸೆಪ್ಟಂಬರ್ ನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 2ರ ನಂತರ ರಾಜ್ಯವೂ ಸೇರಿದಂತೆ ದೇಶಾದ್ಯಂತ ಮುಂಗಾರು ಮಾರುತಗಳ ಸ್ಥಿತಿ ಸುಧಾರಿಸಲಿದ್ದು …

Read More »

ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ

*ಗೋಕಾಕ* : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ …

Read More »

ಆ.25 ರಂದು 31ನೇ ವಾರ್ಷಿಕ ಸರ್ವಸಾಧಾರಣ ಸಭೆ

ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ 31ನೇ ಸನ್ 2022-23 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯು ಸಂಘದ ಸಭಾ ಭವನದಲ್ಲಿ ಶುಕ್ರವಾರ ಆ.25 ರಂದು ಮುಂಜಾನೆ 10 ಗಂಟೆಗೆ ಸಂಘದ ಅಧ್ಯಕ್ಷ ಮಲ್ಲಪ್ಪ ಗಾಣಿಗೇರ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕ ಚನ್ನಬಸು ಬಗನಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ವಿಜ್ಞಾನಿಗಳ ಶ್ರಮಕ್ಕೆ ಪ್ರತಿಫಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಚಂದ್ರಯಾನ-೦೩ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವ ಮೂಲಕ ಜಗತ್ತಿನಲ್ಲಿಯೇ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ದೇಶ ಭಾರತವೆಂದು ಗರ್ವದಿಂದ ಹೇಳಬಹುದು. ದೇಶದ ವಿಜ್ಞಾನಿಗಳ ಸತತ ಪರಿಶ್ರಮಕ್ಕೆ ಇಂದು ಫಲ ನೀಡಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಅಭಿನಂದನೆಗಳು. *-ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ನಿಕಟ ಪೂರ್ವ ಅಧ್ಯಕ್ಷರು, ಅರಭಾವಿ ಶಾಸಕರು.*

Read More »

ಮೂಡಲಗಿಯಲ್ಲಿ “ಸೈನಿಕ ಭವನ” ನಿರ್ಮಾಣಕ್ಕೆ ಅಸ್ತು ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ* : ಮಾಜಿ ಸೈನಿಕರ ಕನಸಿನ ಸೈನಿಕ ಭವನವನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ತಾಲೂಕಿನ ನಾಗನೂರ ಪಟ್ಟಣದಲ್ಲಿ ಮಾಜಿ ಸೈನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೂಡಲಗಿಯಲ್ಲಿ ಸೈನಿಕ ಭವನ ನಿರ್ಮಾಣ ಕುರಿತಂತೆ ನಿವೇಶನವನ್ನು ಗುರುತಿಸುವಂತೆ ಈಗಾಗಲೇ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಕಳೆದ ಮೇ ತಿಂಗಳಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ನನ್ನ ಗೆಲುವಿನಲ್ಲಿ ಮಾಜಿ ಸೈನಿಕರು ಸಹ ಸಾಕಷ್ಟು ಶ್ರಮಿಸಿದ್ದಾರೆ. ದೇಶದ …

Read More »

ಹೈನುಗಾರಿಕೆ ದೃಷ್ಟಿಯಿಂದ ರೈತರಿಗೆ 50 ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಬೆಳಗಾವಿಯಲ್ಲಿ ಜರುಗಿದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳಿಗೆ ಒಟ್ಟು 70 ಲಕ್ಷ ರೂ.ಗಳ ಬಡ್ಡಿ ರಹಿತ ಸಾಲ ವಿತರಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ* : ಜಿಲ್ಲೆಯಲ್ಲಿ ಹಾಲಿನ ಉತ್ಪನ್ನಗಳನ್ನು ಹೆಚ್ಚು ಮಾಡುವ ಉದ್ಧೇಶದಿಂದ ಹೈನುಗಾರಿಕೆ ಮಾಡುವ ರೈತರಿಗೆ 50 ಸಾವಿರ ರೂ.ಗಳವರೆಗೆ ಬಡ್ಡಿ ರಹಿತ ಸಾಲ ನೀಡಲು ಜಿಲ್ಲಾ ಹಾಲು ಒಕ್ಕೂಟದಿಂದ ನಿರ್ಧರಿಸಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು …

Read More »

ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ* : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಕೌಜಲಗಿಯ ವಿಠ್ಠಲ-ಬೀರದೇವರ ದೇವಸ್ಥಾನದ ಆವರಣದಲ್ಲಿ ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಭಾಗದಿಂದ ಅತ್ಯಧಿಕ ಮತಗಳ ಮುನ್ನಡೆ ನೀಡಿದ್ದಕ್ಕಾಗಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ರಸ್ತೆಗಳ …

Read More »