Breaking News

Ad9 News

ಒಕ್ಕಲುತನ ಹುಟ್ಟುವಳಿ ಸಂಘದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಬ್ಬೂರ್ ಆಯ್ಕೆ

  ಗೋಕಾಕ: ತಾಲ್ಲೂಕಿನ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ಗೋಕಾಕ, ಬೆಳಗಾವಿ ಜಿಲ್ಲೆ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಭೀಮಪ್ಪಾ ಕಣ್ಣೂರ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಮೂಡಲಗಿ ತಾಲೂಕಿನ ಗ್ರಾಮದ ರಂಗಾಪೂರ ಮಲ್ಲಿಕಾರ್ಜುನ ಭೀಮಪ್ಪಾ ಕಬ್ಬೂರ್ ಇವರನ್ನು ಅಧಿಕಾರೇತರ ಸದ್ಯಸರಾಗಿ ಆಯ್ಕೆ ಮಾಡಿ ಸರ್ಕಾರ ಆದೇಶಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಅವರ ಪ್ರಯತ್ನದಿಂದ ಒಕ್ಕಲುತನ ಹುಟ್ಟುವಳಿ ಸಂಘಕ್ಕೆ …

Read More »

ನಾಳೆ ಮಧ್ಯಾಹ್ನ 3 ಗಂಟೆಗೆ ‘ಲೋಕಸಭಾ’ ಚುನಾವಣೆ ದಿನಾಂಕ ಘೋಷಣೆ!

ನವದೆಹಲಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಅಂತ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ. ಈ ಪ್ರಕಟಣೆಯನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

Read More »

ಅರಭಾವಿ ಮತ ಕ್ಷೇತ್ರದ ಸ್ವೀಪ್ ಸಮೀತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ

ಮೂಡಲಗಿ: ಪಟ್ಟಣದ ತಾ.ಪಂ ಕಾರ್ಯಲಯದಲ್ಲಿ ಅರಭಾವಿ ಮತ ಕ್ಷೇತ್ರದ ಸ್ವೀಪ್ ಸಮೀತಿಯಿಂದ ಮತದಾನ ಜಾಗೃತಿಗೆ ಚಾಲನೆ ನೀಡಿದರು. ಸ್ವೀಪ್ ಸಮೀತಿಯ ಅಧ್ಯಕ್ಷ ಹಾಗೂ ತಾ.ಪಂ ಇಒ ನವೀನಪ್ರಸಾದ ಕಟ್ಟಿಮನಿ ಮತದಾನ ಜಾಗೃತಿಗೆ ಚಾಲನೆ ನೀಡಿ ಮಾತನಾಡಿ, ಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೋಬ್ಬರು ತಮ್ಮ ಮತ ನೀಡುವ ಮೂಲಕ ಹಕ್ಕು ಚಲಾಯಿಸಿ ತಮ್ಮ ಅಕ್ಕ ಪಕ್ಕದಲ್ಲಿರು ಅರ್ಹ ಮತದಾರಿಗೆ ಮತದಾನ ಮಾಡಲು ಜಾಗೃತಿ ಮೂಡಿಸಬೇಕೆಂದರು. ಈ ಸಮಯದಲ್ಲಿ ತಾ.ಪಂ ಸಹಾಯಕ ನಿರ್ದೇಶಕರಾದ …

Read More »

5, 8 ಮತ್ತು 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ ನೀಡಿದ ಹಿನ್ನೆಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಕಾವೇರಿ ಅವರು ಪರೀಕ್ಷೆ ಮಂದೂಡಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 11 ರಿಂದ 5, 8, 9ನೇ ತರಗತಿ ಮಕ್ಕಳಿಗೆ ರಾಜ್ಯಾದ್ಯಂತ ಮೌಲ್ಯಾಂಕನ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ

ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ *ಬೆಳಗಾವಿ:* ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಬೆಳಗಾವಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅರಭಾವಿ ಶಾಸಕ ಮತ್ತು ಕೆಎಂಎಫ್ ನಿಕಟಪೂರ್ವ ಅಧ್ಯಕ್ಷ, ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. …

Read More »

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷ! ವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ

ಗೋಕಾಕ ಮಾ 3 : ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಅಶೋಕ ನಾಯಿಕ ಹಾಗೂ ಉಪಾಧ್ಯಕ್ಷರಾಗಿ ವಿಠ್ಠಲ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿವಾರದಂದು ಸಂಘದ ಸಭಾ ಗೃಹದಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಖಲೆ ಪ್ರಕಟಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ …

Read More »

ಮೋದಿ ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಿ- ಅರವಿಂದ ಪಾಟೀಲ

*ಗೋಕಾಕ- ಅರಭಾವಿ ಮಂಡಲದ ಫಲಾನುಭವಿಗಳ ಸಂಪರ್ಕ ಅಭಿಯಾನ ಕಾರ್ಯಾಗಾರದ ಉದ್ಘಾಟನೆ* ಗೋಕಾಕ್- ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅರಭಾವಿ, ಗೋಕಾಕ್ ಮಂಡಲದವರು ಜಂಟಿಯಾಗಿ ಶುಕ್ರವಾರದಂದು ಹಮ್ಮಿಕೊಂಡಿದ್ದ ಫಲಾನುಭವಿಗಳ ಸಂಪರ್ಕ ಅಭಿಯಾನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ ಲೋಕಸಭಾ …

Read More »

ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

  ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. ಅದಕ್ಕೆ ನಾನು ಬದ್ಧಳಾಗಿದ್ದೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೋಮನಟ್ಟಿ ಗ್ರಾಮದ ಸರ್ಕಾರಿ‌ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು‌ ಸೋಮವಾರ ಉದ್ಘಾಟಿಸಿ ಅವರು ಮಾತನನಾಡಿದರು. ‘ಕಳೆದ ಅವಧಿಯಲ್ಲಿ …

Read More »

ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್

  ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್ ಪೇದೆಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪೇದೆಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ …

Read More »

ಲೋಕಸಭೆ ಚುನಾವಣೆಗೆ ಖರ್ಚಿನ ಮಿತಿ ಹೆಚ್ಚಳ.!

ದೆಹಲಿ :ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ವೆಚ್ಚದ ಮಿತಿ ಹೆಚ್ಚಿಸಲಾಗಿದೆ ಎಂದು ಭಾರತದ ಚುನಾವಣಾ ಆಯೋಗ (ECI) ಬಹಿರಂಗಪಡಿಸಿದೆ. ಪ್ರತಿ ಅಭ್ಯರ್ಥಿ ಗರಿಷ್ಠ ₹95 ಲಕ್ಷ ಖರ್ಚು ಮಾಡಬಹುದು. ಪ್ರತಿ ಕ್ಷೇತ್ರದಲ್ಲಿ ಪ್ರಚಾರ ವಾಹನಗಳ ಸಂಖ್ಯೆ 5-13ಕ್ಕೆ ಹೆಚ್ಚಿಸಲಾಗಿದೆ. ನಾಮಪತ್ರ ಸಲ್ಲಿಸಲು SC/ST ಅಭ್ಯರ್ಥಿಗಳು ₹12,500 ಮತ್ತು ಇತರರು ₹25,000 ಠೇವಣಿ ಪಾವತಿಸಬೇಕು. ಪ್ರಣಾಳಿಕೆ ಪ್ರತಿಗಳನ್ನು ECIಗೆ ಪ್ರಾದೇಶಿಕ ಭಾಷೆಯಲ್ಲಿ ಹಾಗೂ ಹಿಂದಿ & ಇಂಗ್ಲಿಷ್‌ನಲ್ಲಿ ಸಲ್ಲಿಸಬೇಕು ಎಂದು ಹೇಳಿದೆ.

Read More »