Breaking News

Ad9 News

ನಮ್ಮ ದೇಶದ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ : ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ವಿಶ್ವದ ಏಕಮೇವ ರಾಷ್ಟ್ರವಾಗಿದೆ. ನೂರಾರು ಜಾತಿ-ಧರ್ಮಗಳಿದ್ದರೂ ಆಚರಣೆಗಳು ಮಾತ್ರ ಒಂದೇ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಗೆ ಸಮೀಪದ ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಭಾರತೀಯ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ಹೇಳಿದರು. ಅರಭಾವಿ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಸಂಗನಕೇರಿ ಪಟ್ಟಣದ ಅಭಿವೃದ್ಧಿಗೆ …

Read More »

ಆತಿಥೇಯ ಟೀಂ ಇಂಡಿಯಾಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ವಿಜಯೀಭವ ಭಾರತ* ಗೋಕಾಕ್- ಗುಜರಾತ್ ನ ಅಹ್ಮದಾಬಾದ್ ನಲ್ಲಿಂದು ನಡೆಯುವ ವಿಶ್ವಕಪ್ ಅಂತಿಮ‌ ಪಂದ್ಯದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಕ್ರಿಕೆಟ್ ಪ್ರೇಮಿಯೂ ಆಗಿರುವ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದಿನ ಭಾನುವಾರದ ಹೈ ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಆಡಿರುವ ಎಲ್ಲ ೧೦ ಪಂದ್ಯಗಳನ್ನು ಗೆದ್ದು ಅಜೇಯ ವಾಗಿರುವ ನಮ್ಮ ಟೀಂ ಇಂಡಿಯಾ ೧೩ನೇ ಆವೃತ್ತಿಯ …

Read More »

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ Chief Minister of Karnataka ಅವರೊಂದಿಗೆ ಭಾಗವಹಿಸಿ, ಇಂದಿರಾ ಕ್ಯಾಂಟೀನ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್, ಪೌರಾಡಳಿತ ಸಚಿವರಾದ ಶ್ರೀ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ  ನಸೀರ್ ಅಹಮ್ಮದ್,  ಗೋವಿಂದರಾಜುರವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More »

ಮೂಡಲಗಿ-ಧರ್ಮಸ್ಥಳ ನೂತನ ಬಸ್ಸ್ ಸೇವೆ ಆರಂಭ

ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮೂಡಲಗಿ-ಧರ್ಮಸ್ಥಳ ಬಸ್ಸ್ ಸೇವಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಸಕ್ತಿಯಿಂದ ಆರಂಭವಾದ ಬಸ್ಸ್ ಸೇವೆಗೆ ಮೂಡಲಗಿ ತಾಲೂಕಾ ಕಾನಿಪ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಪೂಜೆಸಲ್ಲಿಸಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಾರಿಗೆ ಇಲಾಖೆಯ ಗೋಕಾಕ ಘಟಕದ ವ್ಯವಸ್ಥಾಪಕ ಅಪ್ಪಣ್ಣ ಛಬ್ಬಿ ಮಾತನಾಡಿ, ಪ್ರತಿ ದಿನ ಮೂಡಲಗಿಯಿಂದ ಮಧ್ಯಾಹ್ನ 3-15 ಗಂಟೆಗೆ ಮೂಡಲಗಿ ಹೊರಟು ಮುಂಜಾನೆ 6-30ಕ್ಕೆ ಧರ್ಮಸ್ಥಳ ತಲುಪಿ …

Read More »

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ*: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರ ಹಸು ಮೃತಪಟ್ಟರೇ ಅದಕ್ಕೆ 50ಸಾವಿರ ರೂಗಳ …

Read More »

ಯಾದವಾಡದಲ್ಲಿ ನ.7 ರಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭ

ಯಾದವಾಡ : ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ ಬೆಂಗಳೂರು ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭವು ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಶ್ರೀ ಹರಳಯ್ಯ ಕಲ್ಯಾಣ ಮಂಟಪದಲ್ಲಿ ದಿ.7ರಂದು ಜರುಗಲಿದೆ ಎಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘದ ಸದಸ್ಯ ಶಂಕರೆಪ್ಪ ಬೆಳಗಲಿ ಹೇಳಿದರು. ಅವರು ರವಿವಾರದಂದು ಯಾದವಾಡ ಗ್ರಾಮದ ಶ್ರೀ ಹರಳಯ್ಯ ಕಲ್ಯಾಣ ಮಂಟಪದ ಕಾರ್ಯಾಲಯದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆ …

Read More »

ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ

*̊ಮೂಡಲಗಿ*̊: ತಾಲೂಕಿನ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ಗುರುವಾರದಂದು ತಾಲೂಕಿನ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮಾರ್ಪಾಡಾಗಲಿವೆ ಎಂದು ಹೇಳಿದರು. ಕುಲಗೋಡ ಮತ್ತು ಯಾದವಾಡ ಗ್ರಾಮಗಳು ಸುತ್ತಮುತ್ತಲಿನ …

Read More »

ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ* *ಘಟಪ್ರಭಾ* : ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ ಪೀಠಾರೋಹಣ ಕಾರ್ಯಕ್ರಮವನ್ನು ಬರುವ ದಿ. 20 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಗೆ ಸಮೀಪದ ಅರಭಾವಿ ಮಠದ ಸಭಾ ಭವನದಲ್ಲಿ ಶನಿವಾರದಂದು ನೂತನ ಪೀಠಾಧಿಪತಿಗಳ ಪೀಠಾರೋಹಣ ಕಾರ್ಯಕ್ರಮದ ಪೂರ್ವಭಾವಿ …

Read More »

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ* : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಮ್ಮ ತಾಲೂಕುಗಳಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲವೆಂಬ ರೈತರಿಂದ ದೂರುಗಳು ಬರುತ್ತಿವೆ. ಕೃಷಿ ಬೆಳೆಗಳಿಗಾಗಿ ರೈತರಿಗೆ ನಾವು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕಾಗಿದೆ. …

Read More »

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಬೆಟಗೇರಿ ಗ್ರಾಮದ ಸಾರ್ವಜನಿಕರ ಬೇಡಿಕೆಗಳಿಗೆ ತಕ್ಷಣವೇ …

Read More »