Breaking News

Ad9 News

*ನ.1ರಿಂದ ನ.5 ರವರಿಗೆ ಢವಳೇಶ್ವರದಲ್ಲಿ ವಿವಿಧ ದೇವಸ್ಥಾನಗಳ ಉದ್ಘಾಟನೆ ಕಾರ್ಯಕ್ರಮ ಹಾಗೂ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಜರುಗಲಿದೆ*

ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಉಳಿಮುಟ್ಟದ ರಂಗೇಶ್ವರ ಮತ್ತು ಶಿವ ದೇವಾಲಯ ಹಾಗೂ ಲಕ್ಷ್ಮೀ ದೇವಸ್ಥಾನಗಳ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭ ನ.1 ರಿಂದ 5 ರವರಿಗೆ ಮರೇಗುದ್ದಿಯ ಶ್ರೀ ನಿರುಪಾಧೀಶ್ವರ ಮಹಾಸ್ವಾಮೀಜಿ ಅಧ್ಯಕ್ಷತೆ ಮತ್ತು ಸುಣಧೋಳಿ ಶ್ರೀ ಶಿವಾನಂದ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಜರುಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ದೇವಸ್ಥಾನಗಳ ಉದ್ಘಾಟನೆಯ ಅಂಗವಾಗಿ ಪ್ರತಿದಿನ ರಬಕವಿಯ ಬೃಹ್ಮಾನಂದ ಮಠದ ಶ್ರೀ ಗುರುಸಿದ್ಧೇಶ್ವರ ಶ್ರೀಗಳು …

Read More »

ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ*: ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಭಕ್ತಿ ಸಂಜೀವನ ಕೂಟಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಹೊಂದಿರುವ ಧರ್ಮದ ಬಗ್ಗೆ ಪ್ರೀತಿ ಮಾಡಬೇಕು. ಜೊತೆಗೆ ಅನ್ಯ …

Read More »

“ಶಿಕ್ಷಕರಾದ ಹುಲ್ಲೆನ್ನವರ ಸಹೋದರರಿಗೆ ಶ್ರೀ ಗುರುಕುಲ ತಿಲಕ ಪುರಸ್ಕಾರ ಹಾಗೂ ಶಿಕ್ಷಕ ಸೇವಾ ರತ್ನ ಪುರಸ್ಕಾರದ ಗರಿ”

    ಬೆಳಗಾವಿ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ) ಬೆಳಗಾವಿ ವತಿಯಿಂದ ಆಯೋಜಿಸಿದ ವಿಶ್ವ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭವು ದಿನಾಂಕ: 15/10/2023 ರಂದು ನಡೆಯಿತು. ಈ ಸಮಾರಂಭದಲ್ಲಿ ಸರ್ಕಾರಿ ಪ್ರೌಢಶಾಲೆ ಸಾತ್ನಳ್ಳಿ ಹಳಿಯಾಳ ಉ ಕ ಈ ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಶೈಲ ಹುಲ್ಲೆನ್ನವರ ಇವರಿಗೆ”ಶ್ರೀ ಗುರುಕುಲ ತಿಲಕ ಪುರಸ್ಕಾರ”ಹಾಗೂ ಅಥಣಿ ವಿದ್ಯಾವರ್ಧಕ ಕನ್ನಡ ಮಾಧ್ಯಮ ಪ್ರೌಢಶಾಲೆ ಅಥಣಿಯಲ್ಲಿ ಹಿಂದಿ …

Read More »

ಶಿವನ ಪಾದ ಸೇರಿದ ಅರಭಾವಿ ದುರದುಂಡೀಶ್ವರ ಪೀಠದ ಶಿವಯೋಗಿ ಪರಮಪೂಜ್ಯರ ಅಗಲಿಕೆಗೆ ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ*- ಗೋಕಾವಿ ನೆಲದ ಪಂಚ- ಪೀಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಅರಭಾವಿ ದುರದುಂಡೀಶ್ವರ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು (೭೫) ರವಿವಾರ ರಾತ್ರಿ ಲಿಂಗೈಕ್ಯೆರಾಗಿದ್ದಾರೆ. ಪರಮ ಪೂಜ್ಯರ ಅಗಲಿಕೆಗೆ ಶಾಸಕರೂ ಆಗಿರುವ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಸದಾ ಸೌಮ್ಯ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ …

Read More »

ಬರುವ ರವಿವಾರದಿಂದಲೇ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳನ್ನು ಆರಂಭಿಸಿ – ಶಾಸಕ ಬಾಲಚಂದ್ರ ಜಾರಕಿಹೋಳಿ

*ಗೋಕಾಕ*- ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ಎರಡೂ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಕಮೀಟಿಗೆ ಸೂಚನೆ ನೀಡಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲ ಕೆಲಸ- ಕಾರ್ಯಗಳನ್ನು ಮಾಡುವಂತೆ ಸೂಚಿಸಿದರು. ಬರುವ 2025 ಕ್ಕೆ ಮಹಾಲಕ್ಷ್ಮೀ ದೇವಿಯ ಜಾತ್ರೆಯು ನಿಗದಿಯಾಗಿದೆ. ಅತೀ …

Read More »

ಹುಣಶ್ಯಾಳ ಪಿಜಿ : ನಿಜಗುಣ ದೇವರ ಷಷ್ಠಬ್ಧಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ

ಮೂಡಲಗಿ : ಎಲ್ಲರನ್ನು ಪ್ರೀತಿಸು. ಪ್ರೀತಿಯೇ ದೇವರು ಎಂಬ ತತ್ವವನ್ನು ಸಾರುತ್ತ, ಪಾದರಸದಂತೆ ಸದಾ ಓಡಾಡಿ ನಗುಮುಖದಿಂದಲೇ ತಮ್ಮ ಆತ್ಮೀಯ ವಲಯವೊಂದನ್ನು ಸೃಷ್ಟಿಸಿ ಹುಣಶ್ಯಾಳ ಪಿಜಿ ಕೀರ್ತಿಯನ್ನು ಎಲ್ಲೆಡೆ ಪಸರಿಸಿರುವ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮವನ್ನು ಅತೀ ವಿಜ್ರಂಭನೆಯಿಂದ ಆಚರಿಸಲು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ. ರವಿವಾರದಂದು ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯವನ್ನು …

Read More »

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್

*ಗೋಕಾಕ* : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರ ಸಂಜೆ ಇಲ್ಲಿಯ ಮಹಾಲಕ್ಷ್ಮೀ ಸಭಾ ಭವನದಲ್ಲಿ ಆಯೋಜನೆಗೊಂಡಿದ್ದ ಮಹಾಲಕ್ಷ್ಮೀ ಉಭಯ ದೇವಸ್ಥಾನಗಳ ಜೀರ್ಣೋದ್ಧಾರ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

Read More »

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಎನ್‍ಆರ್‍ಎಂಎಲ್ ಯೋಜನೆಯಡಿ 18 ಲಕ್ಷ ರೂ. ವೆಚ್ಚದ ಮಹಿಳಾ ಸಂಘಗಳ ಚಟುವಟಿಕೆಗಳಿಗಾಗಿ ನಿರ್ಮಾಣವಾಗಲಿರುವ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ …

Read More »

ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

*ರಾಮೇಶ್ವರ ಏತ ನೀರಾವರಿ ಯೋಜನೆಯ ವೆಂಕಟಾಪೂರ ಮುಖ್ಯ ಕಾಲುವೆಯನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ರಾಮೇಶ್ವರ ಏತ ನೀರಾವರಿ ಯೋಜನೆಯಡಿ ಇದುವರೆಗೂ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಭಾಗದ ರೈತರಿಗೆ ತಮ್ಮ ಜಮೀನುಗಳಿಗೆ ನೀರು ಪೂರೈಸಲು ಹೊಸ ಚೇಂಬರ್ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು …

Read More »

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ತಮ್ಮ ಗೃಹ ಕಛೇರಿಯಲ್ಲಿ ಬಿಸಿಯೂಟ ಸಿಬ್ಬಂದಿಯನ್ನುದ್ಧೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನ್ನುದ್ಧೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲ ಹೋರಾಟಗಳಿಗೆ ನಮ್ಮ …

Read More »