Breaking News

ಬೆಳಗಾವಿ ಲೋಕಸಭೆ ಉಪ ಚುನಾವಣೆ ಕಾಂಗ್ರೆಸ್​ ಅಭ್ಯರ್ಥಿ ಹೆಸರು ಘೋಷಣೆ

Spread the love

ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಯನ್ನು ಇಂದು ಘೋಷಣೆ ಮಾಡಲಾಗಿದೆ.

ಆ ಪ್ರಕಾರ ಯಮಕನಮರಡಿ ಶಾಸಕ, ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ದಿನೇಶ್ ಗುಂಡೂರಾವ್ , ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ಮರಣದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿತ್ತು. ರಾಜ್ಯ ಕಾಂಗ್ರೆಸ್ ನಾಯಕರು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಉಪ ಚುನಾವಣೆಗೆ ಸೂಚಿಸಿತ್ತು.

ಕಡೆಗೂ ಸತೀಶ್ ಜಾರಕಿಹೊಳಿ ಅವರನ್ನು ಮನವೊಲಿಸಲು ಕಾಂಗ್ರೆಸ್ ಯಶಸ್ವಿಯಾಗಿದೆ.

ಏಪ್ರೀಲ್ 17 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿಯಲ್ಲಿ ಇನ್ನು ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಒಂದು ಡಜನ್​ಗೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಬಿಜೆಪಿಯಲ್ಲಿದ್ದಾರೆ.


Spread the love

About Ad9 News

Check Also

ಅಧಿಕಾರದ ಹಸಿವು ಮತ್ತು ಭ್ರಷ್ಟ ಆಂತರಿಕ ಶತ್ರುಗಳಿಂದ ರಾಷ್ಟ್ರವನ್ನು ರಕ್ಷಿಸಲು ಹೋಸ ಪಕ್ಷ

Spread the love ಬೆಂಗಳೂರು : ಕರ್ನಾಟಕ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇವೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತಾರೂಢ …