Breaking News

ಕಂಗ್ರಾಳಿ ಬಿ ಕೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 131ನೇ ಜಯಂತಿ

Spread the love

 

ಬೆಳಗಾವಿ: ಕಂಗ್ರಾಳಿ ಬಿ ಕೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 131ನೇ ಜಯಂತಿಯ ನಿಮಿತ್ಯವಾಗಿ ಅವರ ಜೀವನ ಮತ್ತು ವಿಚಾರಧಾರೆಯ ವಿಶೇಷ ಉಪನ್ಯಾಸದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯ ಸ್ಥಾನವನ್ನು ಅಲಂಕರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀಹೆಬ್ಬಾಳಕರ್ ದಲಿತರ ಶೋಷಿತರ ಸಮುದಾಯದ ಏಳ್ಗೆಗಾಗಿ ಬಾಬಾಸಾಹೇಬರ ಹೋರಾಟದ ಬದುಕು ಸದಾ ಸ್ಮರಣೀಯ, ಅಂಬೇಡ್ಕರ್ ಅವರ ವಿಶ್ವಮಟ್ಟದ ಸಾಧನೆಗೆ ಇಡೀ ಜಗತ್ತೇ ತಲೆ ಬಾಗಿದೆ, ಯಾಕೆಂದರೆ ಛಲ ಹಠ ಸಾಧನೆಗೆ ಮತ್ತೊಂದು ಹೆಸರೆಂದರೆ ಡಾ.ಬಿ ಆರ್. ಅಂಬೇಡ್ಕರ್. ಭಾರತ ಮಾತ್ರವಲ್ಲದೇ ಸುಮಾರು 143ಕ್ಕಿಂತ ಹೆಚ್ಚು ರಾಷ್ಟ್ರಗಳು ಅಂಬೇಡ್ಕರ್ ಅವರ ಜನ್ಮ ಜಯಂತಿಯನ್ನು ಪ್ರತಿವರ್ಷ ಆಚರಿಸುತ್ತಿರುವುದು ಭಾರತೀಯರಿಗೆಲ್ಲ ಹೆಮ್ಮೆಯ ವಿಷಯ.

ಸುಡು ಬಿಸಿಲು, ಬೆವರು ಬಡತನದಲ್ಲಿ ಅರಳಿದ ಪ್ರತಿಭೆಯಾಗಿರುವ ಬಾಬಾಸಹೇಬರು ಅತ್ಯಂತ ಕಡು ಬಡುತನ ಮತ್ತು ಅಸ್ಪಶ್ಯತೆಯ ಬೆಂಕಿಯ ಕುಲುಮೆಯಲ್ಲಿ ಬೆಂದರು ಸಹ ಕಷ್ಟಗಳಿಗೆ ಯಾವತ್ತು ಬಾಗದೇ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಪ್ರಪಂಚದಲ್ಲಿ ಅತಿ ಹೆಚ್ಚು ಡಿಗ್ರಿಗಳನ್ನು ಪಡೆದಿರುವ ವಿಶ್ವದ ಮೊದಲ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ವಿದೇಶದಲ್ಲಿ ಪಿ.ಎಚ್.ಡಿ ಮುಗಿಸಿ ಡಾಕ್ಟರೇಟ್ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಇವರದೇ ಆಗಿದೆ. ಸಂವಿಧಾನವನ್ನು ರಚಿಸಿ ಕೋಟ್ಯಂತರ ಜನರ ಹಣೆಬರಹವನ್ನೆ ಬದಲಾಯಿಸಿದ ಮಹಾ ಶಿಲ್ಪಿ ಮಹಾನಾಯಕ ಅಂಬೇಡ್ಕರ್ ಅವರ ಬದುಕು ಇಡೀ ಜಗತ್ತಿಗೆ ಸ್ಪೂರ್ತಿದಾಯಕ ಮತ್ತು ಸರ್ವಕಾಲಕ್ಕೂ ಶ್ರೇಷ್ಠ.

ಯಾರು ಶಿಕ್ಷಣವೆಂಬ ಹಾಲನ್ನು ಕುಡಿಯುತ್ತಾರೆ, ಅವರು ಸಿಂಹದಂತೆ ಘರ್ಜಿಸುತ್ತಾರೆ ಎಂಬ ಬಾಬಾಸಾಹೇಬರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡು ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕಲ್ಪಿಸೋಣ ಎಂದರು

ಈ ಸಂದರ್ಭದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಗಲ್ಲಿಯ ನಿವಾಸಿಗಳು, ಮಲ್ಲೇಶ ಚೌಗುಲೆ, ಸಿದ್ದಪ್ಪ ಕಾಂಬಳೆ, ಸುಧೀರ ಚೌಹಾನ್, ಸಂಧ್ಯಾ ಚೌಗುಲೆ, ಬಾಳೇಶ ದಾಸನಟ್ಟಿ, ರೇಖಾ ಇಂಡಿಕರ್, ಬೆಟಗೇರಿ ಸರ್, ಗ್ರಾಮ ಪಂಚಾಯತಿಯ ಪದಾಧಿಕಾರಿಗಳು, ಡಾ. ಬಾಬಾಸಾಹೇಬ ಅಂಬೇಡ್ಕರ್ ಮಹಿಳಾ ಮಂಡಳ ಹಾಗೂ ಜೈಭೀಮ ಯುವಕ ಮಂಡಳದವರು ಉಪಸ್ಥಿತರಿದ್ದರು.

 


Spread the love

About Ad9 News

Check Also

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ: ಡಾ. ಭೀಮಾಶಂಕರ ಎಸ್ ಗುಳೇದ

Spread the love  ರಾಯಬಾಗ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸುವುದರ ಮೂಲಕ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಿ ಎಂದು ಬೆಳಗಾವಿ ಎಸ್ …

Leave a Reply

Your email address will not be published. Required fields are marked *