Breaking News

ಮಹಾರಾಷ್ಟ್ರದಲ್ಲಿ ಕರ್ನಾಟಕದ 10 ಸಾರಿಗೆ ಬಸ್ ಗಳಿಗೆ ಬೆಂಕಿ

Spread the love

ಬೆಳಗಾವಿ : ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕದ 10 ಸಾರಿಗೆ ಬಸ್ ಗಳಿಗೆ ಬೆಂಕಿ ಹಚ್ಚಲಾಗಿದೆ.

ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ಸೇರಿದ 10 ಬಸ್ಸಿಗೆ ಬೆಂಕಿ ಹಚ್ಚಲಾಗಿದ್ದು, 20 ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಧುಳೆ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದಗಿದ್ದ ಹೋರಾಟಗಾರರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಇದರಿಂದ ಕೋಪಗೊಂಡ ಹೋರಾಟಗಾರರು ಹೆದ್ದಾರಿಯಲ್ಲಿ ಸಿಕ್ಕ ಸಿಕ್ಕ ಬಸ್ಸುಗಳಿಗೆ ಕಲ್ಲು ತೂರಿದ್ದಾರೆ. ಪ್ರಯಾಣಿಕರು ಬಸ್ಸಿನಲ್ಲಿ ಇರುವಾಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಲಘು ಲಾಠಿ ಪ್ರಹಾರ ನಡೆಸಿ ಹಾಗೂ ಆಶ್ರವಾಯು ಸಿಡಿಸಿದ್ದಾರೆ. ಅಲ್ಲದೇ ಗಾಳಿಯಲ್ಲಿ ಕೆಲ ಸುತ್ತಿನ ಗುಂಡುಗಳನ್ನೂ ಹಾರಿಸಲಾಗಿದೆ. ಜನರು ಶಾಂತಿ ಕಾಪಾಡುವಂತೆ ಸಿಎಂ ಏಕನಾಥ ಶಿಂಧೆ ಮನವಿ ಮಾಡಿದ್ದಾರೆ.


Spread the love

About Ad9 News

Check Also

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ: ಡಾ. ಭೀಮಾಶಂಕರ ಎಸ್ ಗುಳೇದ

Spread the love  ರಾಯಬಾಗ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸುವುದರ ಮೂಲಕ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಿ ಎಂದು ಬೆಳಗಾವಿ ಎಸ್ …

Leave a Reply

Your email address will not be published. Required fields are marked *