ಬೆಳಗಾವಿ: ಮಾರ್ಚ್ 14 ರಂದು ಭಾರತರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 129ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಆಡಳಿತ ವತಿಯಿಂದ ಆಚರಿಸುವ ಕುರಿತು ಮಾರ್ಚ 18 ರಂದು ಸಾಯಂಕಾಲ 3.30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ 2 ನೇ ಮಹಡಿಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಾಗೂ ಇತರೆ ವರ್ಗಗಳ ಸಮುದಾಯದ ಮುಖಂಡರು ಪದಾಧಿಕಾರಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.