Breaking News
Home / ಬೆಳಗಾವಿ / ಗ್ರಾಮೀಣ ಕ್ಷೇತ್ರದಲ್ಲಿ ಇನ್ನಷ್ಟು ರಸ್ತೆ ಕಾಮಗಾರಿಗೆ ಚಾಲನೆ

ಗ್ರಾಮೀಣ ಕ್ಷೇತ್ರದಲ್ಲಿ ಇನ್ನಷ್ಟು ರಸ್ತೆ ಕಾಮಗಾರಿಗೆ ಚಾಲನೆ

Spread the love

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಓಟ ಮುಂದುವರಿದಿದ್ದು, ನಿಲಜಿ ಮತ್ತು ಖನಗಾಂವ್ ಬಿಕೆ ಗ್ರಾಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು.

ನಿಲಜಿ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಆರಂಭಿಸಲಾಯಿತು. ಇದು ಗ್ರಾಮಸ್ಥರ ಬಹು ದಿನಗಳ ಬೇಡಿಕೆಯಾಗಿತ್ತು. ಡಾಂಬರೀಕರಣ ಕಾಮಗಾರಿ ಆರಂಭವಾಗುತ್ತಿದ್ದಂತೆ ಗ್ರಾಮಸ್ಥರಲ್ಲಿ ಸಂಭ್ರಮ ಮನೆಮಾಡಿತು.

ಖನಗಾಂವ್ ಗ್ರಾಮದಲ್ಲಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ ಬಿ ಕೆ ಗ್ರಾಮದಲ್ಲಿ ಅಲ್ಪಸಂಖ್ಯಾತರ ನಿಧಿಯಿಂದ ಕಾಂಕ್ರೀಟ್ ರಸ್ತೆಯ ಕಾಮಗಾರಿಗಳಿಗೆ ಚಾಲನೆಯನ್ನು ನೀಡಲಾಯಿತು.
ರಸ್ತೆ ಕಾಮಗಾರಿ ಆರಂಭಿಸಿರುವುದಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗೆ ಗ್ರಾಮಸ್ಥರು ಕೃತಜ್ಞತೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಮಲ್ಲೇಶ ಭಂಗ್ಯನ್ನವರ, ಫಕೀರಪ್ಪ ಸತ್ಯಪ್ಪಗೋಳ, ಹೊನ್ನಪ್ಪ ಪಾಟೀಲ, ಬಸಪ್ಪ ಅಗಸಗಿ, ಹಣಮಂತ, ಫಕೀರಪ್ಪ ಹೊಸಮನಿ, ಮಲಕಪ್ಪ ನಾಯ್ಕ, ಜಮಾದಾರ ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Ad9 Haberleri

Check Also

ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ ಬಸಗೌಡ ಪಾಟೀಲ, ಉಪಾಧ್ಯಕ್ಷರಾಗಿ ಸಂಜೀವ ಸೋನಪ್ಪನವರ ಅವಿರೋಧವಾಗಿ ಆಯ್ಕೆ

Spread the love*ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವ* *ಬೆಳಗಾವಿ*- ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ …