ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.
ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ರೀಗಳ ನಿಧನದಿಂದ ಇಡೀ ನಾಡೇ ಬಡವಾಗಿದೆ. ಇವರ ಆತ್ಮಕ್ಕೆ ಆ ಭಗವಂತನು ಚಿರ ಶಾಂತಿಯನ್ನು ಕರುಣಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.
Check Also
ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್
Spread the love ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ …