*ಗೋಕಾಕ*: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರ ಹಸು ಮೃತಪಟ್ಟರೇ ಅದಕ್ಕೆ 50ಸಾವಿರ ರೂಗಳ …
Read More »ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ* *ಘಟಪ್ರಭಾ* : ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ ಪೀಠಾರೋಹಣ ಕಾರ್ಯಕ್ರಮವನ್ನು ಬರುವ ದಿ. 20 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಗೆ ಸಮೀಪದ ಅರಭಾವಿ ಮಠದ ಸಭಾ ಭವನದಲ್ಲಿ ಶನಿವಾರದಂದು ನೂತನ ಪೀಠಾಧಿಪತಿಗಳ ಪೀಠಾರೋಹಣ ಕಾರ್ಯಕ್ರಮದ ಪೂರ್ವಭಾವಿ …
Read More »ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಬೆಟಗೇರಿ ಗ್ರಾಮದ ಸಾರ್ವಜನಿಕರ ಬೇಡಿಕೆಗಳಿಗೆ ತಕ್ಷಣವೇ …
Read More »ಬರುವ ರವಿವಾರದಿಂದಲೇ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳನ್ನು ಆರಂಭಿಸಿ – ಶಾಸಕ ಬಾಲಚಂದ್ರ ಜಾರಕಿಹೋಳಿ
*ಗೋಕಾಕ*- ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ಎರಡೂ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಕಮೀಟಿಗೆ ಸೂಚನೆ ನೀಡಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲ ಕೆಲಸ- ಕಾರ್ಯಗಳನ್ನು ಮಾಡುವಂತೆ ಸೂಚಿಸಿದರು. ಬರುವ 2025 ಕ್ಕೆ ಮಹಾಲಕ್ಷ್ಮೀ ದೇವಿಯ ಜಾತ್ರೆಯು ನಿಗದಿಯಾಗಿದೆ. ಅತೀ …
Read More »ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್
*ಗೋಕಾಕ* : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರ ಸಂಜೆ ಇಲ್ಲಿಯ ಮಹಾಲಕ್ಷ್ಮೀ ಸಭಾ ಭವನದಲ್ಲಿ ಆಯೋಜನೆಗೊಂಡಿದ್ದ ಮಹಾಲಕ್ಷ್ಮೀ ಉಭಯ ದೇವಸ್ಥಾನಗಳ ಜೀರ್ಣೋದ್ಧಾರ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …
Read More »ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ತಮ್ಮ ಗೃಹ ಕಛೇರಿಯಲ್ಲಿ ಬಿಸಿಯೂಟ ಸಿಬ್ಬಂದಿಯನ್ನುದ್ಧೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನ್ನುದ್ಧೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲ ಹೋರಾಟಗಳಿಗೆ ನಮ್ಮ …
Read More »ಡಕಾಯಿತರ ಗ್ಯಾಂಗ್ ಬಂಧಿಸಿದ ಗೋಕಾಕ್ ಪೊಲೀಸರು
ಗೋಕಾಕ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಗೋಕಾಕ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಗೋಕಾಕ ಶಹರ, ಅಂಕಲಗಿ, ಗೋಕಾಕ ಗ್ರಾಮೀಣ ಭಾಗಗಳಲ್ಲಿ ದರೋಡೆ, ಸುಲಿಗೆ, ಬೈಕ್ ಹಾಗೂ ಜಾನುವಾರು ಕಳ್ಳತನ ಮಾಡುತ್ತಿದ್ದರು. ಗುರುನಾಥ ವಿರೂಪಾಕ್ಷ ಬಡಿಗೇರ ಎಂಬುವವರು ಆ.14ರಂದು ತಮ್ಮ ಬೈಕ್ ಅಡ್ಡಗಟ್ಟಿ ದರೋಡೆಕೋರರು ಚಿನ್ನದ ಚೈನ್, ಉಂಗುರ ಕದ್ದು ಪರಾರಿಯಾಗಿದ್ದಾಗಿ ಗೋಕಾಕ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಭೀಮಾಶಂಕರ …
Read More »ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಗೋಕಾಕ*: ಅಂಗವಿಕಲರು ಮುಖ್ಯ ವಾಹಿನಿಗೆ ಬರಲು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಅಂಗವಿಕಲರ ಕೆಲಸ ಕಾರ್ಯಗಳಿಗಾಗಿ ಅನುಕೂಲವಾಗಲು ಟ್ರೈಸಿಕಲ್ ವಿತರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಆವರಣದಲ್ಲಿ 2022-23ನೇ ಸಾಲಿನಲ್ಲಿ ಅಂಗವಿಕಲ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯಿಂದ ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ಇನ್ನೂ ಅರಭಾವಿ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ನೀಡುವುದು ಬಾಕಿ ಇವೆ. …
Read More »ಡೇರಿಗಳಿಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ ವಸತಿ ನಿಲಯ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಗೋಕಾಕ* : ಕಹಾಮ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಬೆಳಗಾವಿಯಲ್ಲಿ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ನಿಲಯವನ್ನು ನಿರ್ಮಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಕೆ ಮಾಡುವ ರೈತರ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಹಾಮ ನಿರ್ದೇಶಕ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಜರುಗಿದ ವಿವಿಧ ಫಲಾನುಭವಿಗಳಿಗೆ 6.40 ಲಕ್ಷ ರೂ.ಗಳ ಚೆಕ್‍ಗಳನ್ನು …
Read More »ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆ …
Read More »