Breaking News
Home / ಗೋಕಾಕ (page 5)

ಗೋಕಾಕ

ಪ್ರಭಾಶುಗರ್ಸ್ ಕಾರ್ಖಾನೆಯ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ

ಗೋಕಾಕ: ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಸದಾ ಬದ್ಧನಿರುವೆ. ರೈತರು ಹಾಗೂ ಕಾರ್ಮಿಕರ ಏಳ್ಗೆಗಾಗಿ ಶ್ರಮಿಸಲು ನಾವು ಸಿದ್ಧರಿದ್ದೇವೆ. ಕಾರ್ಖಾನೆಯ ಅಭಿವೃದ್ಧಿಯಲ್ಲಿ ರೈತರ ಸಹಕಾರ ಅಗತ್ಯವಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಈ ಕಾರ್ಖಾನೆಯನ್ನು ಮಾದರಿಯನ್ನಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆ ಹೊಂದಿರುವುದಾಗಿ …

Read More »

ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ

*ಗೋಕಾಕ* : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ …

Read More »

ವಿಜ್ಞಾನಿಗಳ ಶ್ರಮಕ್ಕೆ ಪ್ರತಿಫಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಚಂದ್ರಯಾನ-೦೩ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವ ಮೂಲಕ ಜಗತ್ತಿನಲ್ಲಿಯೇ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ದೇಶ ಭಾರತವೆಂದು ಗರ್ವದಿಂದ ಹೇಳಬಹುದು. ದೇಶದ ವಿಜ್ಞಾನಿಗಳ ಸತತ ಪರಿಶ್ರಮಕ್ಕೆ ಇಂದು ಫಲ ನೀಡಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಅಭಿನಂದನೆಗಳು. *-ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ನಿಕಟ ಪೂರ್ವ ಅಧ್ಯಕ್ಷರು, ಅರಭಾವಿ ಶಾಸಕರು.*

Read More »

ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ* : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಕೌಜಲಗಿಯ ವಿಠ್ಠಲ-ಬೀರದೇವರ ದೇವಸ್ಥಾನದ ಆವರಣದಲ್ಲಿ ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಭಾಗದಿಂದ ಅತ್ಯಧಿಕ ಮತಗಳ ಮುನ್ನಡೆ ನೀಡಿದ್ದಕ್ಕಾಗಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ರಸ್ತೆಗಳ …

Read More »

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

*ಗೋಕಾಕ* : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ಶಿಕ್ಷಕರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 29 ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸ್ಮರಣಿಕೆ ಹಾಗೂ ತಮ್ಮ ಅಭಿನಂದನಾ ಪತ್ರ ವಿತರಿಸಿ …

Read More »

ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ

ಗೋಕಾಕ : ದಿ.ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಈ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು …

Read More »

ರಾಯಣ್ಣನನ್ನು ಒಂದು ಸಮುದಾಯಕ್ಕೆ ಸಿಮೀತ ಮಾಡಬೇಡಿ: ಸರ್ವೊತ್ತಮ ಜಾರಕಿಹೊಳಿ

  ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ …

Read More »

ಸಮಾಜದಲ್ಲಿ ಶಾಂತಿ ಕದಡುವಂತಹ ಸ್ಟೇಟಸ್ ಹಾಕಿದರೆ ಮುಲಾಜಿಲ್ಲದೆ ಕೇಸ್ ಪೀಕ್ಸ್ : PSI ಕಿರಣ ಮೊಹಿತೆ

ಗೋಕಾಕ : ಮೊಬೈಲನಲ್ಲಿ ತಾವು ಹಾಕುವ ಒಂದು ಸ್ಟೇಟಸ್ಸಿನಿಂದ ಅನ್ಯ ದರ್ಮಕ್ಕಾಗಲಿ ಅಥವಾ ಯಾವುದೆ ವಕ್ತಿಗತ ಜೀವನಕ್ಕೆ ದಕ್ಕೆ ಉಂಟಾದಲ್ಲಿ ಮತ್ತು ಅದರಿಂದ ಸಮಾಜದಲ್ಲಿ ಅಶಾಂತಿ ಕದಡುವದಾಗಲಿ ಮಾಡಿದರೆ ಯಾವುದೆ ಮುಲಾಜಿಲ್ಲದೆ ಅಂತವರ ವಿರುದ್ಧIPC ಕಲಂ 153ಎ, 295,295ಎ,ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೋಕಾಕ ಗ್ರಾಮೀಣ ಪಿ,ಎಸ್,ಐ, ಕಿರಣ ಮೊಹಿತೆ ಯವರು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ನಡೆದ ಶಾಂತಿಸಭೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ …

Read More »

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮೂಡಲಗಿ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ರಾಯಬಾಗ ತಾಲೂಕುಗಳ ಬಹುಗ್ರಾಮ ಕುಡಿಯುವ ನೀರು ಸರಬುರಾಜು …

Read More »

ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು. ಅರಭಾವಿಯಿಂದ ಸತತ 6ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಪುರುಷೋತ್ತಮಾನಂದ ಮಹಾಸ್ವಾಮಿಗಳು, …

Read More »