Breaking News

ಮೂಡಲಗಿ

20 ರಂದು ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ

ಮೂಡಲಗಿ ಸೆ.19 : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2023-24ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ದಿನಾಂಕ 20ನೇ ಸೆಪ್ಟೆಂಬರ 2023 ರಂದು ಮೂಡಲಗಿ ತಾಲೂಕಿನ ಮೂಡಲಗಿ ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದೆ. ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ದಿ.20ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ. ಸ್ಪರ್ಧೆಗಳ ವಿವರ ಅಥ್ಲೆಟಿಕ್ಸ್ (ಪುಷರಿಗಾಗಿ) …

Read More »

ಐರನ್ ಮ್ಯಾನ್ ಪ್ರಶಸ್ತಿಪಡೆದ ಸಿಪಿಐ ಶ್ರೀಶೈಲ್ ಬ್ಯಾಕೂಡ ಅವರಿಗೆ ಸನ್ಮಾನ

ಮೂಡಲಗಿ : ಸಮಾಜದಲ್ಲಿ ಉತ್ತಮ ಆರೋಗ್ಯವಿದ್ದಾಗ ಮಾತ್ರ ಸಕಲವನ್ನು ಸಾಧಿಸಲು ಸಾಧ್ಯವಾಗುವದು. ಆರೋಗ್ಯ ಕಡೆ ನಿಷ್ಕಾಳಜಿ ಹೊಂದಿ ಮಾನಸಿಕ, ದೈಹಿಕ ವಿವಿಧ ಕಸರತ್ತುಗಳನ್ನು ಮರೆತಾಗ ಜೀವನದಲ್ಲಿ ದೊಡ್ಡ ಮಟ್ಟದ ದಂಡ ಕಟ್ಟುವ ಅನಿವಾರ್ಯತೆಯಾಗುವದು ಎಂದು ಅಂತರಾಷ್ಟ್ರೀಯ ಐರನ್ ಮ್ಯಾನ್ ಪ್ರಶಸ್ತಿ ವಿಜೇತ ಸಿಪಿಐ ಶ್ರೀಶೈಲ್ ಬ್ಯಾಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರದಂದು ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಸಾಧಕರ ಸನ್ಮಾನ ಹಾಗೂ ಐರನ್ ಮ್ಯಾನ್ ಪ್ರಶಸ್ತಿಪಡೆದ ಪ್ರಯುಕ್ತ ಸನ್ಮಾನ ಸ್ವೀಕರಸಿ …

Read More »

ಮೂಡಲಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ವೇಳೆ ಗೈರಾದ ಅಧಿಕಾರಿಗಳು

ಮೂಡಲಗಿ : ಶುಕ್ರವಾರದಂದು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ, ತಾಲೂಕು ಆಡಳಿತ, ತಾಲೂಕ ಪಂಚಾಯತ ಮೂಡಲಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಗೋಕಾಕ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ವೇಳೆ ತಾಲೂಕು ಮಟ್ಟದ ಹಲವಾರು ಅಧಿಕಾರಿಗಳು ಗೈರಾಗಿದ್ದಾರೆ. ದಲಿತರ ಕುಂದುಕೊರತೆ ಸಭೆಯಲ್ಲಿ ಕೂಡ ಅನೇಕ ತಾಲ್ಲೂಕು ಮಟ್ಟದ ಅಧಿಕಾರಿಗಳು ಬರದೆ ಕೇವಲ ಹೆಸರಿಗಷ್ಟೇ, ತಮ್ಮ ಕೆಳ ಸಿಬ್ಬಂದಿಯನ್ನು ಕಳುಹಿಸಿ ಕುಂದು ಕೊರತೆಗಳ ಸಭೆಗೆ ಹಾಜರಾಗಲು ಹೇಳಿರುತ್ತಾರೆ. ಪ್ರಜೆಗಳಿಂದ ಪ್ರಜೆಗಳಿಗಾಗಿ …

Read More »

ಮೂಡಲಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಮೂಡಲಗಿ : ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಭಾರತದ ಸಂವಿಧಾನ, ದೇಶದ ಪ್ರತಿಯೊಬ್ಬ ನಾಗರೀಕನಿಗೆ ಪವಿತ್ರ ಗ್ರಂಥವಿದ್ದಂತೆ ಎಂದು ತಹಶೀಲ್ದಾರ್ ಶಿವಾನಂದ ಬಬಲಿ ಅಭಿಪ್ರಾಯಪಟ್ಟರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಮೂಡಲಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಗೋಕಾಕ್ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಅವರಿಂದ ರಚಿತ ಭಾರತದ ಸಂವಿಧಾನ ಅಡಿಯಲ್ಲಿ ಪ್ರತಿಯೊಬ್ಬರಿಗೂ …

Read More »

ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ* : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಮೃತ-2 ಯೋಜನೆಯಡಿ ಈ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು. ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣಗಳಿಗೆ ತಲಾ …

Read More »

ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಇಷ್ಟರಲ್ಲೇ ಸರ್ಕಾರದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. ಪಟ್ಟಣದ ತಹಶೀಲ್ದಾರ ಕಛೇರಿ ಹತ್ತಿರ ಇದಕ್ಕಾಗಿ 2.04 ಎಕರೆ ನಿವೇಶನವನ್ನು ಗುರುತಿಸಲಾಗಿದ್ದು, ಸುಮಾರು …

Read More »

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದೆ ಮಂಗಲಾ ಅಂಗಡಿ* *ಮೂಡಲಗಿ* : ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಇಡೀ ಪ್ರಪಂಚವೇ ನಮ್ಮ ಭಾರತದತ್ತ ಕಣ್ತೆರೆದು ನೋಡುತ್ತಿದೆ. ಮೋದಿ ಅವರ ಜನಪ್ರೀಯ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ …

Read More »

ಕುಲಗೋಡಕ್ಕೆ ನಾಡ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ : ಕುಲಗೋಡ ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿರುವ ನಾಡ ಕಛೇರಿಯನ್ನು ಕುಲಗೋಡದಲ್ಲಿ ಆರಂಭಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು. ಕುಲಗೋಡ ಗ್ರಾಮದ ಬಲಭೀಮ ದೇವಸ್ಥಾನದಲ್ಲಿ ಗ್ರಾಮಸ್ಥರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕುಲಗೋಡ ಗ್ರಾಮವು ಈಗಾಗಲೇ ಅರಭಾವಿ ನಾಡ ಕಛೇರಿಗೆ ಒಳಪಟ್ಟಿದ್ದರಿಂದ ಇಲ್ಲಿನ ಸಾರ್ವಜನಿಕರಿಗೆ ಅರಭಾವಿ ದೂರವಾಗುತ್ತಿರುವುದರಿಂದ ಕುಲಗೋಡದಲ್ಲಿಯೇ ಈ ಕಛೇರಿಯನ್ನು ಆರಂಭಿಸಲಿಕ್ಕೆ ಕಂದಾಯ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೇಸ್ …

Read More »

ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

*ಮೂಡಲಗಿ* : ಮೂಡಲಗಿ ವಲಯವು ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿನ ಹಾಜರಾತಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆ ಮಟ್ಟದ ಫಲಿತಾಂಶದ ಜೊತೆಗೆ ಉತ್ತಮ ಗುಣಮಟ್ಟದ ಕಲಿಕೆಯನ್ನು ಅರಿತು ದೇಶದಲ್ಲಿಯೇ ಉತ್ತಮ ಸಾಧನೆ ಮಾಡಿ ಹೆಮ್ಮರವಾಗಿ ಬೆಳೆಯುತ್ತಿದೆ. ಇದಕ್ಕೆ ವಲಯದಲ್ಲಿರುವ ಎಲ್ಲ ಶಿಕ್ಷಕ ಸಮುದಾಯದ ಪರಿಶ್ರಮವೇ ಕಾರಣವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ಲಾಘನೆ ವ್ಯಕ್ತಪಡಿಸಿದರು. ಮಂಗಳವಾರದಂದು ಮೂಡಲಗಿ ತಾಲೂಕಿನ ವಡೇರಹಟ್ಟಿಯ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ/ಅರಭಾವಿ ಬಸವೇಶ್ವರ ಸಭಾ …

Read More »

ಸೆ. 5 ರಂದು ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ

  ಮೂಡಲಗಿ: ಜಿ.ಪಂ, ಶಾಲಾ ಶಿಕ್ಷಣ ಇಲಾಖೆ, ಮೂಡಲಗಿ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಸೆ. 5 ರಂದು ಮಂಗಳವಾರ ಮುಂಜಾನೆ 11 ಗಂಟೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ-2023 ನಿಮಿತ್ಯ ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಸಾಧಕ ಶಿಕ್ಷಕರಿಗೆ ಅಭಿನಂದನಾ ಸಮಾರಂಭವು ವಡೇರಹಟ್ಟಿಯ ಸರಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದೆ ಎಂದು ಬಿಇಒ ಅಜಿತ ಮನ್ನಿಕೇರಿ …

Read More »