Breaking News

ಮೂಡಲಗಿ

ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಪರೀಕ್ಷೆಗೆ ಹಾಜರಾಗಿರುವದು ಸರ್ವಕಾಲಿಕ ದಾಖಲೆ

ಮೂಡಲಗಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಕೌಶಲಗಳನ್ನು ರೂಪಿಸುವ ನಿಟ್ಟಿನಲ್ಲಿ ಶಿಷ್ಯವೇತನಕ್ಕಾಗಿ ನಡೆಯುವ ನ್ಯಾಶನಲ್ ಮೀನ್ಸ್ ಕಮ್ ಮೇರಿಟ್ ಸ್ಕಾಲರಶೀಫ್ (ಎನ್‌ಎಮ್‌ಎಮ್‌ಎಸ್) ಸ್ಪರ್ಧಾತ್ಮಕ ಪರೀಕ್ಷೆಗಳು ಮನೊಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಹಾಯಕವಾಗುತ್ತವೆ ಎಂದು ಚಿಕ್ಕೋಡಿ ಡೈಟ್ ಪ್ರಾಚಾರ್ಯ ಮೋಹನ ಜೀರಗ್ಯಾಳ ಹೇಳಿದರು. ಅವರು ರವಿವಾರ ಪಟ್ಟಣದಲ್ಲಿ ಜರುಗಿದ ಎನ್‌ಎಮ್‌ಎಮ್‌ಎಸ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಭಿಪ್ರಾಯ ವ್ಯಕ್ತಪಡಿಸಿ, ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಪರೀಕ್ಷೆಗೆ ಹಾಜರಾಗಿರುವದು ಸರ್ವಕಾಲಿಕ ದಾಖಲೆಯಾಗಿರುತ್ತದೆ. ಇಲ್ಲಿಯ …

Read More »

ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮತದಾರರಿಗೆ ಮುಟ್ಟಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ

ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಶನಿವಾರದಂದು ಬಿಜೆಪಿ ಅರಭಾವಿ ಮಂಡಲ ಏರ್ಪಡಿಸಿದ್ದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ …

Read More »

ಕನ್ನಡ ಭಾಷೆಯ ಮಕ್ಕಳಿಗೆ ಹೆಚ್ಚು ಪ್ರಾಶಸ್ತ್ಯ ಸಿಕ್ಕಂತಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ(ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆ): ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ ರಾಜ್ಯದ ಅಭ್ಯರ್ಥಿಗಳಿಗೆ ಉದ್ಯೋಗಗಳು ಸೃಷ್ಠಿಯಾಗಲಿವೆ. ಜೊತೆಗೆ ಕನ್ನಡ ಭಾಷೆಯ ಮಕ್ಕಳಿಗೆ ಹೆಚ್ಚು ಪ್ರಾಶಸ್ತ್ಯ ಸಿಕ್ಕಂತಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ ತಾಲೂಕು …

Read More »

ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್

ಮೂಡಲಗಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವದ ವೀರ ಜ್ಯೋತಿಯು ಇಂದು ಮಧ್ಯಾಹ್ನ 2:30ಕ್ಕೆ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತದೆ ಎಂದು ತಹಶೀಲ್ದಾರ್ ಡಿ ಜೆ ಮಹಾತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೀರ ಜ್ಯೋತಿಯು ಕಂಕಣವಾಡಿ ಗುರ್ಲಾಪೂರ ಮಾರ್ಗವಾಗಿ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತಿರುವುದರಿಂದ ವೀರ ಜ್ಯೋತಿಗೆ ಗೌರವಪೂರಕವಾಗಿ ಬರಮಾಡಿಕೊಂಡು ಪೂಜೆ ಸಲ್ಲಿಸಿ, ಪಟ್ಟಣದೊಳಗೆ ಬರಮಾಡಿಕೊಳ್ಳಲಾಗುವುದೆಂದು ತಿಳಿಸಿದ್ದಾರೆ. ತಾಲೂಕಿನ ಸಮುದಾಯ ಬಂದುಗಳು, ತಾಲೂಕ ಮಟ್ಟದ ಅಧಿಕಾರಿಗಳು, ತಾಲೂಕಿನ ಕನ್ನಡಪರ ಹಾಗೂ …

Read More »

ಜಾನಪದ ಕಲಾ ಸಂಭ್ರಮ ಕಾರ್ಯಕ್ರಮವನ್ನು ಡೋಳ್ಳು ಬಾರಿಸುವ ಮೂಲಕ ಉದ್ಘಾಟಿಸಿದ ಸರ್ವೋತ್ತಮ ಜಾರಕಿಹೊಳಿ.

ಮೂಡಲಗಿ: ಗ್ರಾಮೀಣ ಭಾಗಗಳಲ್ಲಿ ಜಾನಪದ ಕಲೆಗಳು ಕಲಾಸಕ್ತರಿಂದ ಪೋಷಿಸಲ್ಪಟ್ಟು ಉಳಿಸಿಕೊಂಡಿವೆ. ಯಾವ ಕಾಲಘಟ್ಟದಲ್ಲೂ ಜಾನಪದ ಕಲೆಗಳು ನಾಶವಾಗಿಲ್ಲ. ಆದರೆ ಅವುಗಳ ಸಂರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶನಿವಾರದಂದು ತಾಲೂಕಿನ ಜೋಕಾನಟ್ಟಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು, ಶ್ರೀ ಶಿವಾನಂದ ಭಾರತಿಸ್ವಾಮಿ ಜಾನಪದ ಕಲಾ ಯುವ ಸಂಘ, ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ, …

Read More »

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …

Read More »

ಉಪ್ಪಾರ ಅಂತರಾಷ್ಟ್ರೀಯ ವಧು ವರರ ಸಮಾವೇಶ ಅರ್ಜಿ ಆಹ್ವಾನ

ಮೂಡಲಗಿ : ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ಜ 8 ರಂದು ಭಾನುವಾರ ಬೆಳಗಾವಿಯ ಪ್ರತಿಷ್ಠಿತ ಹೋಟೆಲ್ ಸಂಕಮ್ ರೆಸಿಡೆನ್ಸಿನಲ್ಲಿ ಅಂತರ ರಾಷ್ಟ್ರಮಟ್ಟದ ಉಪ್ಪಾರರ ವಧು-ವರ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಉಪ್ಪಾರ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳು …

Read More »

ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿದ!! ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು ಒಳ್ಳೆಯದನ್ನು …

Read More »

ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ ೨೪ನೇ ಸತ್ಸಂಗ ಮಹೋತ್ಸವ ಉದ್ಘಾಟನೆ

ಮೂಡಲಗಿ: ಕಷ್ಟದಲ್ಲಿರುವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಭಾನುವಾರದಂದು ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ ೨೪ನೇ ಸತ್ಸಂಗ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. ಮನುಷ್ಯ ಜೀವಂತ ಇದ್ದಲ್ಲಿ ವಯೋವೃದ್ದರಿಗೆ, ವಿದ್ಯಾರ್ಥಿಗಳಿಗೆ, ರೋಗಿಗಳಿಗೆ ಅಲ್ಲದೇ ಕಷ್ಟದಲ್ಲಿರುವ ಜನರಿಗೆ ಸಹಾಯ …

Read More »

ವೈದ್ಯರು ದೈವಸ್ವರೂಪಿಗಳು-ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ವೆಂಕಟೇಶ ಆಸ್ಪತ್ರೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಕೊವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು. ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ ದಿ.ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ವೆಂಕಟೇಶ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು …

Read More »