Breaking News

ಮೂಡಲಗಿ

ಮೋಬೈಲ ಯುಗದಲ್ಲಿ ಸಂಭಂದಗಳು ಮರೆತು ಹೋಗುತ್ತಿವೆ: ಶಿವಾನಂದ ಸ್ವಾಮಿಗಳು

ಕುಲಗೋಡ:ಮೊಬೈಲ್ ಯುಗದಲ್ಲಿ ಗುರು ಹಿರಿಯರ ನಾಮಸ್ಮರಣೆ ಮಾಡುವದು ಮರೆಯಾಗಿ ಹೊಗಿದೆ. 20 ವರ್ಷಗಳ ಬಳಿಕ ಸ್ನೇಹಿತರು ಸೇರಿ ಗುರುವಂದನೆ ಮಾಡಿದ್ದು ಅಪರೂಪ ಎಂದು ಮ.ನಿ.ಪ್ರ.ಸ್ವ ಶಿವಾನಂದ ಮಹಾಸ್ವಾಮಿಗಳು ಶ್ರೀ ಜಡಿಸಿದ್ದೇಶ್ವರ ಮಠ ಸುಣಧೋಳಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಎನ್.ಎಸ್.ಎಫ್ ಶಾಲೆಯಲ್ಲಿ 2002-03 ನೇ ಸಾಲಿನ ಹಳೆಯ ವಿಧ್ಯಾರ್ಥಿಗಳಿಂದ ಇಂದು ನಡೆದ ಗುರುವಂದನಾ ಹಾಗೂ ಸ್ನೇಹ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಂತ್ರಜ್ಞಾನ ಬೆಳೆದು ಮಾನವನ ಕೈಗೆ …

Read More »

ಮೂಡಲಗಿಯಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ! ವಿವಿಧಡೆ ಧ್ವಜರೋಹಣ

ಮೂಡಲಗಿ: ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ” ನಿಮಿತ್ಯ ಬೆಳಗಾವಿ ಜಿಲ್ಲೆಯ ತಾಲ್ಲೂಕಿನ ಮೂಡಲಗಿ ನಗರದಲ್ಲಿ ವಿವಿಧ ಸಂಘ ಸಂಸ್ಥೆ ಹಾಗೂ ಮನೆಗಳ ಮೇಲೆ ಧ್ವಜಾರೋಹಣ ಮಾಡಲಾಯಿತು. ನಗದಲ್ಲಿ ಶಾಲೆ ಕಾಲೇಜು ಗಳಲ್ಲಿ ಧ್ವಜಾರೋಹಣ ಮಾಡಿ ಮಕ್ಕಳ ವೇಷ ಭೂಷಣಧರಿಸಿ ತಮ್ಮ ಶಾಲೆಗಳಿಂದ ಮೂಡಲಗಿ ನಗರದ ತುಂಬಾ ಮೆರವಣಿಗೆ ಮೂಲಕ 75ನೇ ಸ್ವಾತಂತ್ರ್ಯ ದ ಅಮೃತ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ …

Read More »

ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂದ ಗೋಕಾಕದಿಂದ ಮೂಡಲಗಿವರೆಗೆ ಬೈಕ್‍ರ್ಯಾಲಿ

ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂದ ಗೋಕಾಕದಿಂದ ಮೂಡಲಗಿವರೆಗೆ ಬೈಕ್‍ರ್ಯಾಲಿ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ ಸಾವಿರಾರು ಕಾರ್ಯಕರ್ತರು. ಮೂಡಲಗಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಅರಭಾಂವಿ ಬಿಜೆಪಿ ಮಂಡಲ ಗುರುವಾರದಂದು ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸಮಾ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಕಲ್ಮೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಗೋಕಾಕ ಎನ್‍ಎಸ್‍ಎಫ್ ಅತಿಥಿ ಗೃಹದಿಂದ ಆರಂಭಗೊಂಡ …

Read More »

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ …

Read More »

ಮೂಡಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿಯವರಿಗೆ “ ಶಿಕ್ಷಣ ಸಾರಥಿ ಪ್ರಶಸ್ತಿ”

ಮೂಡಲಗಿ: ಮೂಡಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿಯವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಇವರು ರಾಜ್ಯ ಮಟ್ಟದ ಉತ್ತಮ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗೆ ನೀಡುವ “ ಶಿಕ್ಷಣ ಸಾರಥಿ ಪ್ರಶಸ್ತಿ” ಯನ್ನು ತುಮಕೂರಿನ ಉದ್ಧಾನೇಶ್ವರ ಕಲ್ಯಾಣ ಮಂಟಪ ಸಿದ್ಧಗಂಗಾ ಮಠದಲ್ಲಿ ಜರುಗಿದ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಕುಣಿಗಲ್ ಹಿತ್ತಲಹಳ್ಳಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹೊನಕುಪ್ಪಿ ರಸ್ತೆ 2.50 ಕೋಟಿ ರೂ. ಅನುದಾನ ಬಿಡುಗಡೆ

ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು …

Read More »

3 ಕೋಟಿ ರೂ. ವೆಚ್ಚದ ಲಕ್ಷ್ಮೇಶ್ವರ-ಭೈರನಟ್ಟಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ

  ಮೂಡಲಗಿ : ತಾಲೂಕಿನ ಲಕ್ಷ್ಮೇಶ್ವರ ಗ್ರಾಮದಿಂದ ಭೈರನಟ್ಟಿವರೆಗಿನ ರಸ್ತೆ ಕಾಮಗಾರಿಗೆ ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಇಮಾಮಸಾಬ ಮೋಮಿನ ಅವರು ರವಿವಾರದಂದು ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, ಹದಗೆಟ್ಟಿದ್ದ ಭೈರನಟ್ಟಿವರೆಗಿನ ರಸ್ತೆ ಕಾಮಗಾರಿ ಮುಂದಿನ ಕೆಲ ದಿನಗಳಲ್ಲಿ ಅಭಿವೃದ್ಧಿಯಾಗಲಿದ್ದು, ಈ ಕಾಮಗಾರಿಗೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ಅನುದಾನ ತಂದು ಗ್ರಾಮಸ್ಥರ …

Read More »

ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಹೃದಯವಂತ ಶಾಸಕರು : ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ

  ಮೂಡಲಗಿ : ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ಪಿವಾಯ್‍ದಿಂದ ಬೀಸನಕೊಪ್ಪವರೆಗಿನ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಹುಣಶ್ಯಾಳ ಪಿವಾಯ್ ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿವಾಯ್ ಗ್ರಾಮದಲ್ಲಿ ಜರುಗಿದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 4 ಕೋಟಿ ರೂ. ಮೊತ್ತದ ಹುಣಶ್ಯಾಳ ಪಿವಾಯ್-ಬೀಸನಕೊಪ್ಪ ರಸ್ತೆ ಸುಧಾರಣೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ

ಮೂಡಲಗಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಅವರಾದಿ ಗ್ರಾಪಂ ಅಧ್ಯಕ್ಷೆ ಸವಿತಾ ಚಂದ್ರಶೇಖರ ನಾಯಿಕ ತಿಳಿಸಿದರು. ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ …

Read More »

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ ಎಲ್ಲ ರೈತ ಭಾಂಧವರು ಇದರ …

Read More »