Breaking News

ರಾಜ್ಯ>ಬೆಳಗಾವಿ

ಭಾರತೀಯ ಕೃಷಿ ಸಮಾಜಕ್ಕೆ ಬಸವರಾಜ ಪಾಟೀಲ, ನೇಮಕ

  ಮೂಡಲಗಿ -ಭಾರತೀಯ ಕೃಷಿಕ ಸಮಾಜದ ಮೂಡಲಗಿ ತಾಲೂಕಾ ಅಧ್ಯಕ್ಷರನ್ನಾಗಿ ಪಂಚಮಸಾಲಿ ಮುಖಂಡರಾದ ಬಸವರಾಜ ಈರನಗೌಡ ಪಾಟೀಲ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ.ಕಿಶನಕುಮಾರ ಚೌಧರಿ ಆದೇಶ ಹೊರಡಿಸಿದ್ದಾರೆ. ಪ್ರಕಟಣೆಯೊಂದರಲ್ಲಿ ಈ ವಿಷಯ ತಿಳಿಸಿರುವ ಅವರು, ತಕ್ಷಣವೇ ಪಾಟೀಲ ಅವರು ಮೂಡಲಗಿ ತಾಲೂಕಾ ಅಧ್ಯಕ್ಷ ಪದಗ್ರಹಣ ಮಾಡಿ, ರೈತರು, ಕೃಷಿ ಮಹಿಳೆಯರು ಹಾಗೂ ಕೃಷಿ ಕಾರ್ಮಿಕರನ್ನು ಸಂಘಟಿಸಿ ಅವರ ಬಲವರ್ಧನೆಗೆ ಕ್ರಮ ಕೈಗೊಳ್ಳಲು ಶ್ರಮಿಸಬೇಕು ಎಂದು ಹೇಳಿದ್ದಾರೆ.

Read More »

ನಿಂಬೆಹಣ್ಣು ಹಿಡಿದು ನಾಮಪತ್ರ ಸಲ್ಲಿಸಿದ ನಗರಸಭೆ ಅಭ್ಯರ್ಥಿ.!

ಗೋಕಾಕ: ನಿಂಬೆಹಣ್ಣು ಎಂದರೆ, ಹೆಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ರೇವಣ್ಣ ತಮ್ಮ ಕೈಯಲ್ಲಿ, ಜೇಬಿನಲ್ಲಿ ನಿಂಬೆಹಣ್ಣು ಹಿಡಿದುಕೊಂಡು ಓಡಾಡುವುದು ಸಹಜ. ಆದರೆ ಇಲ್ಲೊಬ್ಬ ನಗರಸಭೆ ಉಪಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿ ನಿಂಬೆಹಣ್ಣು ಕೈಯಲ್ಲಿ ಹಿಡಿದು ನಾಮಪತ್ರ ಸಲ್ಲಿಸಿ, ನಗರದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಮಾಜಿ ನಗರಸಭೆ ಸದಸ್ಯ ಗಿರೀಶ ಖೋತ ಅವರ ಅಕಾಲಿಕ ನಿಧನದಿಂದ ತೆರವಾದ ನಗರಸಭೆ ವಾರ್ಡ ನಂ13 ರ ಉಪಚುನಾವಣೆಗೆ ಸ್ಪರ್ಧಿಸಲು ನಾಮಪತ್ರ …

Read More »

ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ-ಸತೀಶ ಜಾರಕಿಹೊಳಿ

  ಮೂಡಲಗಿ: ಪಟ್ಟಣ ಹಾಗೂ ಸುತ್ತಮುತ್ತಲಿನ ಜನತೆಗೆ ಸಿಟಿ ಸ್ಕ್ಯಾನ್ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆಗಾಗಿ , ನೂರಿತ ವೈದ್ಯರ ಸಲುವಾಗಿ ಜಿಲ್ಲಾ ಕೇಂದ್ರ ಹಾಗೂ ಬೇರೆ ಬೇರೆ ಪಟ್ಟಣಗಳಿಗೆ ಚಿಕಿತ್ಸೆ ಹಾಗೂ ವೈಧ್ಯಕೀಯ ಪರೀಕ್ಷೆಗಳಿಗೆ ತೆರಳಬೇಕಿತ್ತು. ಈ ಸಮಸ್ಯೆ ತಪ್ಪಿಸಲು ಹಾಗೂ ಜನತೆಗೆ ಅನಕೂಲುವಾಗುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿದ ಈ ಆಸ್ಪತ್ರೆಗಳು ಹಾಗೂ ಸಿಟಿ ಸ್ಕ್ಯಾನ ಸೆಂಟರ್‍ನ ಸದುಪಯೋಗ ಪಡೆಯಬೇಕು ಎಂದು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಯಮಕಣಮರಡಿ ಶಾಸಕ ಸತೀಶ …

Read More »

ಶಾಸಕ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ನಗರದಲ್ಲಿ ಪ್ರತಿಭಟನೆ

ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಹಿಂದೆ ಇರುವವರನ್ನು ಪತ್ತೆಹಚ್ಚಿ ಕೂಡಲೇ ಬಂಧಿಸುವಂತೆ ಆಗ್ರಹಿಸಿ ರಮೇಶ ಜಾರಕಿಹೊಳಿ ಅಭಿಮಾನಿಗಳು ರವಿವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮುಖಂಡ ಭೀಮಶಿ ಭರಮಣ್ಣವರ ಮಾತನಾಡಿ, ಸಾಹುಕಾರ್ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಿರುವವನು ಮಹಾನಾಯಕ ಅಲ್ಲ ಅವನು ಕಳನಾಯಕ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಅವರು …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಜಾರಕಿಹೊಳಿ ಅವರ ವಿರುದ್ದ ಷಡ್ಯಂತ್ರ ಖಂಡಿಸಿ ಖಾನಟ್ಟಿಯಲ್ಲಿ ಪ್ರತಿಭಟನೆ

ಮೂಡಲಗಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ಖಂಡಿಸಿ ತಾಲೂಕಿನ ಖಾನಟ್ಟಿ ಗ್ರಾಮದಲ್ಲಿ ಗುರುವಾರದಂದು ಟೈಯರಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿ ರಮೇಶ ಜಾರಕಿಹೊಳಿ ಅವರನ್ನು ಕೂಡಲೇ ಸಚಿವರನ್ನಾಗಿ ಮಾಡಬೇಕೆಂದು ಆಗ್ರಹಿಸಿ ಗ್ರಾ.ಪಂ ಪಿಡಿಒ ಹಣಮಂತ ಬಸಗುಂದಿ ಅವರ ಮೂಲಕ ಸರಕಾರಕ್ಕೆ ಮನವಿಸಲ್ಲಿಸಿದರು. ಈ ಸಂಧರ್ಭದಲ್ಲಿ ಶಿವನಪ್ಪ ಗುದಗನ್ನವರ, ವೆಂಕನಗೌಡ ಪಾಟೀಲ, ಬಸಲಿಂಗ ನಿಂಗನ್ನೂರ, ಚೇತನ ರಡ್ಡೇರಹಟ್ಟಿ, ಸುಭಾಸ ತುಪ್ಪದ, ಶಿವಬಸು ತುಪ್ಪದ, ರಾಮಪ್ಪ ಕುಂದರಗಿ, ರಮೇಶ ಮೇತ್ರಿ, …

Read More »

ಮೂಡಲಗಿ, ಪಂಚಮಸಾಲಿ ಸಮಾಜ ಬಾಂದವರು 2ಎ ಮಿಸಲಾತಿ ನೀಡುವಂತೆ ತಹಶೀಲದಾರ ಡಿ ಜೆ ಮಹಾತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ ಮಹಾತ …

Read More »

ಉತ್ತರ ಕರ್ನಾಟಕದ ಜನರ ಕಲೆಯ ಪ್ರೋತ್ಸಾಹ ಅನನ್ಯವಾಗಿದೆ

ಮೂಡಲಗಿ: ‘ಕಲಾಭೀಮಾನಿಗಳ ಪ್ರೀತಿ, ಪ್ರೋತ್ಸಾಹ ಇರುವವರೆಗೆ ಕಲಾವಿದರು ಬೆಳೆಯುತ್ತಾರೆ. ಉತ್ತರ ಕರ್ನಾಟಕದ ಜನರು ಕಲೆಗೆ ಕೊಡುವ ಪ್ರೋತ್ಸಾಹವು ಅನನ್ಯವಾಗಿದೆ’ ಎಂದು ಧಾರಾವಾಹಿ ನಟಿ ಮೋಕ್ಷಿತಾಗ ಪೈ (ಪಾರು) ಹೇಳಿದರು. ಅವರು ಮೂಡಲಗಿ ಪಟ್ಟಣದ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಶನಿವಾರ ರಾತ್ರಿ ಜರುಗಿದ ನಾಟ್ಯ ರಾಣ ಜ್ಯೋತಿ ಬಳ್ಳಾರಿಯವರ ಶ್ರೀ ದುರ್ಗಾಶಕ್ತಿ ನಾಟ್ಯ ಸಂಸ್ಥೆ ಕಲಾವಿದರ ಸಹಾಯಾರ್ಥವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮದಲ್ಲಿ ಮಾತನಾಡಿ, ಮೂಡಲಗಿ ಜನತೆ ಇಷ್ಟೊಂದು ಪ್ರೀತಿ ವಿಶ್ವಾಸ ತೋರಿಸದಕ್ಕೆ …

Read More »

ಜಾರಕಿಹೊಳಿ ಅಭಿಮಾನಿ ಬಳಗದಿಂದ ಪ್ರತಿಭಟನೆ | ಬಾಲಚಂದ್ರ ಜಾರಕಿಹೊಳಿಯವರಿಗೆ ಸಚಿವಸ್ಥಾನ ನೀಡಿ ಸಿಡಿ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಮೂಡಲಗಿ : ರಮೇಶ ಜಾರಕಿಹೊಳಿಯವರ ನಕಲಿ ವಿಡಿಯೋ ಖಂಡಿಸಿ ಮೂಡಲಗಿ ತಾಲೂಕಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಟೈಯರ್‍ಗೆ ಬೆಂಕಿ ಹಚ್ಚಿ ರಮೇಶ ಜಾರಕಿಹೊಳಿ ವಿರುದ್ಧದ ಷಡ್ಯಂತ್ರ ಖಂಡಿಸಿ ಪ್ರತಿಭಟನೆ ನಡೆಸಿದರು. ಬಿಡುಗಡೆಗೊಳಿಸಿರುವ ಸಿಡಿ ಫೇಕ್ ತಂತ್ರಜ್ಞಾನದಿಂದ ಕೂಡಿದ ರಾಸಲೀಲೆ ವಿಡಿಯೋ ಹರಿಬಿಟ್ಟಿದ್ದು, ಇದು ಜಾರಕಿಹೊಳಿ ಕುಟುಂಬದ ವಿರುದ್ಧ ಮಾಡಿರುವ ರಾಜಕೀಯ ವಿರೋಧಿಗಳ ಹುನ್ನಾರ-ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಡಿ ಬಗ್ಗೆ ಸಮಗ್ರ ತನಿಖೆ ನಡೆಸಲು …

Read More »

ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳುವುದು ಅಗತ್ಯ: ರಮೇಶ ಗೊಂಗಡಿ

ತುಕ್ಕಾನಟ್ಟಿ: ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ,ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿಪ್ರಿಯತೆ,ಪರೋಪಕಾರ ಬುದ್ಧಿ,ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು.ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂಬುದು ಅರ್ಥವಾಗುತ್ತದೆ. ಹೂವಿಗೆ ಪರಿಮಳವಿದ್ದಂತೆ ,ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ, ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ. ವ್ಯಕ್ತಿತ್ವವೆಂಬುದು ಹುಟ್ಟಿನಿಂದ …

Read More »