Breaking News
Home / ರಾಜ್ಯ

ರಾಜ್ಯ

ನಿಮಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ರೌಡಿಗಳಿಗೆ ಪೊಲೀಸ್ ಭಯ ಇರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು‌ IG ಮಟ್ಟದ …

Read More »

ಎನ್‍ಸಿಡಿಎಫ್‍ಆಯ್ ನಿರ್ದೇಶಕರಾಗಿ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಪುನರಾಯ್ಕೆ

  *ಅಧ್ಯಕ್ಷರಾಗಿ ಮೀನೇಶ್ ಷಾ ಅಧಿಕಾರ ಸ್ವೀಕಾರ* *ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿಯ ಚುನಾವಣೆ* ಬೆಂಗಳೂರು: ಕಹಾಮ ನಿರ್ದೇಶಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಷ್ಟ್ರೀಯ ಸಹಕಾರಿ ಡೈರಿ ಮಹಾ ಮಂಡಲ (ಎನ್‍ಸಿಡಿಎಫ್‍ಆಯ್)ದ ನಿರ್ದೇಶಕರಾಗಿ ಪುನ:ರಾಯ್ಕೆಯಾಗಿದ್ದಾರೆ. ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ಏ-4 ರಂದು ನಡೆದ ಮಹಾ ಮಂಡಲದ ಆಡಳಿತ ಮಂಡಳಿಯ ಚುನಾವಣೆಯಲ್ಲಿ …

Read More »

5, 8 ಮತ್ತು 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ ನೀಡಿದ ಹಿನ್ನೆಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಕಾವೇರಿ ಅವರು ಪರೀಕ್ಷೆ ಮಂದೂಡಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 11 ರಿಂದ 5, 8, 9ನೇ ತರಗತಿ ಮಕ್ಕಳಿಗೆ ರಾಜ್ಯಾದ್ಯಂತ ಮೌಲ್ಯಾಂಕನ …

Read More »

ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್

  ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್ ಪೇದೆಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪೇದೆಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ …

Read More »

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ Chief Minister of Karnataka ಅವರೊಂದಿಗೆ ಭಾಗವಹಿಸಿ, ಇಂದಿರಾ ಕ್ಯಾಂಟೀನ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್, ಪೌರಾಡಳಿತ ಸಚಿವರಾದ ಶ್ರೀ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ  ನಸೀರ್ ಅಹಮ್ಮದ್,  ಗೋವಿಂದರಾಜುರವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More »

ಗ್ರಾಮ ಒನ್ ಐಡಿ ರದ್ದುಗೊಳಿಸಿ ಕ್ರಮ : ಲಕ್ಷ್ಮೀ ಹೆಬ್ಬಾಳಕರ್

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ. ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …

Read More »

ಇಂದಿನಿಂದ ‘ಅನ್ನಭಾಗ್ಯ’ ಅಕ್ಕಿ ಬದಲು ಸಿಗುತ್ತೆ ಹಣ! ಯಾರಿಗೆ ಎಷ್ಟು ನಗದು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಇಂದಿನಿಂದ ಅನ್ನಭಾಗ್ಯ ಅಕ್ಕಿ ಖಾತರಿ ಯೋಜನೆಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನು ಪ್ರಾರಂಭಿಸಲಿದೆ. ಈ ಹಿಂದೆ ಕೇಂದ್ರ ಸರ್ಕಾರವು ಜೂನ್‌ ನಲ್ಲಿ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮತ್ತು ಗೋಧಿ ಸಾಗಾಟವನ್ನು ಸ್ಥಗಿತಗೊಳಿಸಿದ ಬಳಿಕ ಈ ನಿರ್ಧಾರವನ್ನು ಮಾಡಲಾಗಿದೆ. ಕರ್ನಾಟಕದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಿಸುವುದಾಗಿ ಆಶ್ವಾಸನೆ ನೀಡಿತ್ತು. ಅಂತೆಯೇ ಗೆಲುವು ಕಂಡಿದ್ದ ಕಾಂಗ್ರೆಸ್ …

Read More »

ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದು ದಿನಾಂಕ ನಿಗದಿ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ಗೃಹಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆಯಪ್ ಸಿದ್ಧಪಡಿಸಲಾಗಿದ್ದು, ಇದನ್ನು ಮುಖ್ಯಮಂತ್ರಿಗಳಿಗೆ ತೋರಿಸಿ ಅರ್ಜಿ ಸಲ್ಲಿಕೆಯ ದಿನಾಂಕ ನಿಗದಿಪಡಿಸಲಾಗುವುದು. ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಯಾವಾಗಿನಿಂದ ಜಾರಿಗೊಳಿಸಬೇಕು. ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಗೊಳಿಸಬೇಕು ಎಂಬುದರ ಬಗ್ಗೆ ಚರ್ಚೆ …

Read More »

ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 1 ವಾರದಲ್ಲಿ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾಗಿದ್ದೆಷ್ಟು?

ಬೆಂಗಳೂರು: ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಜಾರಿಗೆ ತಂದಿರುವ ಚುನಾವಣಾ ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಯಶಸ್ವಿಯಾಗಿ ಒಂದು ವಾರ ಪೂರೈಸಿದೆ. ಉಚಿತ ಪ್ರಯಾಣ ಘೋಷಣೆಯಾದ ಬೆನ್ನಲ್ಲೇ ಮಹಿಳೆಯರ ಓಡಾಟ ದ್ವಿಗುಣಗೊಂಡಿದೆ, ಯಾವುದೇ ಸರ್ಕಾರಿ ಬಸ್​ ನೋಡಿದರೂ ತುಂಬಿ ತುಳುಕುತ್ತಿದೆ. ರಾಜ್ಯದ ಪುಣ್ಯ ಕ್ಷೇತ್ರಗಳಲ್ಲಂತೂ ಮಹಿಳೆಯರೇ ಸಂಖ್ಯೆಯೇ ಹೆಚ್ಚಿದ್ದು, ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಶಕ್ತಿ ಯೋಜನೆ ಒಂದು ವಾರ ಪೂರ್ಣಗೊಳಿಸಿದ್ದು, ಒಂದು ವಾರದಲ್ಲಿ ಬರೊಬ್ಬರಿ 3 …

Read More »