Breaking News

ರಾಷ್ಟ್ರೀಯ

ನಾಳೆ ಮಧ್ಯಾಹ್ನ 3 ಗಂಟೆಗೆ ‘ಲೋಕಸಭಾ’ ಚುನಾವಣೆ ದಿನಾಂಕ ಘೋಷಣೆ!

ನವದೆಹಲಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಅಂತ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ. ಈ ಪ್ರಕಟಣೆಯನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

Read More »

ವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ ಮಾರ್ಚ್ 1 ರಿಂದ ಫೇಸ್ ರೇಕಗ್ನಿಷನ್ ವ್ಯವಸ್ಥೆ ಜಾರಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 1 ರಿಂದ ಫೇಶಿಯಲ್ ರೇಕಗ್ನಿಷನ್ ವ್ಯವಸ್ಥೆ ಜಾರಿಗೆ ತರಲು ಟಿಟಿಡಿ ಕ್ರಮಕೈಗೊಂಡಿದೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಟೋಕನ್ ವಿತರಣೆ, ಲಡ್ಡು ವಿತರಿಸುವ ಸ್ಥಳಗಳಲ್ಲಿ ಈ ವ್ಯವಸ್ಥೆ ಅಳವಡಿಸಲಾಗುವುದು. ಪ್ರತಿದಿನ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುತ್ತಾರೆ. ದೇವಾಲಯದಲ್ಲಿ ಟೋಕನ್ ಇಲ್ಲದೆ ದರ್ಶನ ಪಡೆಯುವ ಸ್ಥಳ, ಹೆಚ್ಚಿನ ಟೋಕನ್ ವಿತರಿಸುವ ಸ್ಥಳ, ಲಡ್ಡು ವಿತರಣೆ ಸ್ಥಳ, …

Read More »

ದೇಶದಲ್ಲಿ ಒಂದು ದಿನದಲ್ಲೇ 8,329 ಹೊಸ ಕೋವಿಡ್ ಪ್ರಕರಣ ಪತ್ತೆ

ನವದೆಹಲಿ – : ದೇಶದಲ್ಲಿ ಒಂದು ದಿನದಲ್ಲೇ 8,329 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಕಳೆದ 103 ದಿನಗಳಲ್ಲೇ ವರದಿಯಾದ ಅತಿ ಹೆಚ್ಚು ಪ್ರಕರಣಗಳು ಇವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶ ಶನಿವಾರ ಹೇಳಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 40,370 ಕ್ಕೆ ಏರಿಕೆಯಾಗಿದೆ ಈ ಮೂಲಕ ಭಾರತದಲ್ಲಿ ಕೋವಿಡ್ ಸೋಂಕು 4,32,13,435 ಆಗಿದೆ ಎಂದೂ ದತ್ತಾಂಶ ತಿಳಿಸಿದೆ. 10 ಕೋವಿಡ್ ಸಾವಿನೊಂದಿಗೆ ಮರಣ ಸಂಖ್ಯೆ 5,24,757ಕ್ಕೆ ತಲುಪಿದೆ. ಕೋವಿಡ್ …

Read More »

ದಿನಕ್ಕೊಂದರಂತೆ ವಂಚನೆಯ ಮೆಸೇಜ್‌ಗಳು

WhatsApp Tips and Tricks: ದಿನಕ್ಕೊಂದರಂತೆ ವಂಚನೆಯ ಮೆಸೇಜ್‌ಗಳು ವಾಟ್ಸ್‌ಆಯಪ್​ನಲ್ಲಿ ಹರಿದಾಡುತ್ತಿರುತ್ತದೆ. ಅನ್‌ಲಿಮಿಟೆಡ್ ಡೇಟಾ, ಉಚಿತ ರೀಚಾರ್ಜ್, ಫ್ರೀ ಮೊಬೈಲ್, ಪ್ರಸಿದ್ಧ ಇ ಕಾಮರ್ಸ್ ತಾಣಗಳ ಫೇಕ್ ಆಫರ್ ಹೀಗೆ ಈರೀತಿಯ ಅನೇಕ ಮೆಸೇಜ್​ಗಳು ವೈರಲ್ (Viral) ಆಗುತ್ತವೆ. ಮೆಟಾ (Meta) ಮಾಲೀಕತ್ವದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್‌ಆಯಪ್​ನಲ್ಲಿ ಈಗೀಗ ಸ್ಕ್ಯಾಮ್ ಮೆಸೇಜ್‌ಗಳು ಬರುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ದಿನಕ್ಕೊಂದರಂತೆ ವಂಚನೆಯ ಮೆಸೇಜ್‌ಗಳು ವಾಟ್ಸ್‌ಆಯಪ್​ನಲ್ಲಿ ಹರಿದಾಡುತ್ತಿರುತ್ತದೆ. ಅನ್‌ಲಿಮಿಟೆಡ್ ಡೇಟಾ, ಉಚಿತ ರೀಚಾರ್ಜ್, ಫ್ರೀ …

Read More »

ಮಕ್ಕಳು ಹೆಲ್ಮೆಟ್ ಧರಿಸುವುದು ಕಡ್ಡಾಯ

ನವದೆಹಲಿ: ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವಾಗ ಮಕ್ಕಳಿಗೆ ಹೆಲ್ಮೆಟ್ ಬಳಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್‌ಗಳನ್ನು ತಯಾರಿಸುವಂತೆ ಹೆಲ್ಮೆಟ್ ತಯಾರಕರಿಗೆ ಸರ್ಕಾರ ಸೂಚಿಸಿದೆ. ಅಲ್ಲದೆ, ಹೊಂದಾಣಿಕೆ ಮಾಡಬಹುದಾದ ಸುರಕ್ಷತಾ ಸರಂಜಾಮುಗಳನ್ನು ಮಕ್ಕಳು ತಮ್ಮ ಸುರಕ್ಷತೆಗಾಗಿ ಧರಿಸಬೇಕು. ಹೊಸ ನಿಯಮದ ಪ್ರಕಾರ, ಯಾವುದೇ ಉಲ್ಲಂಘನೆಗೆ 1,000 ರೂ. ದಂಡ ಮತ್ತು ಮೂರು ತಿಂಗಳ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ. ಹೊಸ ನಿಯಮಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮಗಳು, 1989 ರ …

Read More »

ಯೂಟ್ಯೂಬ್ ವೀಡಿಯೊ ನೋಡಿ ಹೆರಿಗೆ

ಮಲಪ್ಪುರಂ : ಕೇರಳದ ಮಲಪ್ಪುರಂನ ಕೊಟ್ಟಕ್ಕಲ್ ನಲ್ಲಿ 17 ವರ್ಷದ ಬಾಲಕಿಯೊಬ್ಬಳು ಅಕ್ಟೋಬರ್ 20 ರಂದು ತನ್ನ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು, ಆದರೆ ಇತರರ ಸಹಾಯ ಅಥವಾ ಜ್ಞಾನವಿಲ್ಲದೆ ಯೂಟ್ಯೂಬ್ ನಲ್ಲಿ ಡೆಲಿವರಿ (watched delivery video on youtube) ಮಾಡುವ ವೀಡಿಯೊಗಳನ್ನು ನೋಡುವ ಮೂಲಕ ಸ್ವಯಂ ಹೆರಿಗೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಯೂಟ್ಯೂಬ್ ವೀಡಿಯೊಗಳ ಸಹಾಯದಿಂದ 17 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿಯೇ ಮಗುವನ್ನು …

Read More »

ಸಾಲ ಮರುಪಾತಿಗೆ ಬಿಡಿಗಾಸೂ ಇಲ್ಲ ಎಂದಿದ್ದ ಅಂಭಾನಿಗೆ ವಿದೇಶದಲ್ಲಿ 18 ಕಂಪನಿ!!

ನವದೆಹಲಿ(ಅ.05): ತೆರಿಗೆ ವಂಚಕರ ಕುರಿತು 2016ರಲ್ಲಿ ಬಿಡುಗಡೆಯಾಗಿದ್ದ ಪನಾಮಾ ಪೇಪ​ರ್‍(Panama Papers)ಸ್ ರೀತಿಯಲ್ಲಿ ಇದೀಗ 1.2 ಕೋಟಿ ಫೈಲ್‌ಗಳನ್ನು ಒಳಗೊಂಡ ‘ಪಂಡೋರಾ ಪೇಪ​ರ್‍ಸ್'(Pandora Papers) ಎಂಬ ರಹಸ್ಯ ಹಣಕಾಸು ಮಾಹಿತಿ ಬಿಡುಗಡೆಯಾಗಿದೆ. ಇದರಲ್ಲಿ 300 ಭಾರತೀಯರೂ ಸೇರಿದಂತೆ ವಿಶ್ವದಾದ್ಯಂತ ಸಾವಿರಾರು ಶ್ರೀಮಂತರು ‘ತೆರಿಗೆ ವಂಚ​ಕರ ಸ್ವರ್ಗ’ ಎನ್ನಿಸಿಕೊಂಡ ದೇಶಗಳಲ್ಲಿ ಹೇಗೆ ಕಂಪನಿಗಳನ್ನು ಆರಂಭಿಸಿ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಬೆಳಕು ಚೆಲ್ಲಲಾ​ಗಿ​ದೆ. ಈ ವಿಚಾರವು ಭಾರತವು ಸೇರಿದಂತೆ ವಿಶ್ವಾದ್ಯಂತ …

Read More »

FIR ಇಲ್ಲದೇ ನಿಮ್ಮ ಸರರ್ಕಾರ ನನ್ನನ್ನು 28 ಗಂಟೆಗಳಿಂದ ಬಂಧನ: ಪ್ರದಾನಿ ಮೋದಿಗೆ ಪ್ರಿಯಂಕಾ ಗಾಂಧಿ ಟ್ವಿಟ್

ಲಖ್ನೊ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನುದ್ದೇಶಿಸಿ ಟ್ವೀಟ್ (Tweet) ಮಾಡಿ, ತಮ್ಮ ಸರ್ಕಾರ ಯಾವುದೇ ಆದೇಶ ಅಥವಾ FIR ಇಲ್ಲದೆ ಕಳೆದ 28 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿರಿಸಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ, (social media) ಆದಾಗ್ಯೂ, ರೈತರ ಮೇಲೆ ದಾಳಿ ನಡೆಸಿದವರನ್ನು ಇನ್ನೂ ಏಕೆ ಬಂಧಿಸಲಾಗಿಲ್ಲ ಎಂದು ಅವರು ಕೇಳಿದರು. ಟ್ವೀಟ್ ಜೊತೆಗೆ, ಗಾಂಧಿ ಒಂದು ವೀಡಿಯೊವನ್ನು ಪೋಸ್ಟ್ …

Read More »

ಲಸಿಕೆ ಹಾಕಿಸಿಕೊಂಡ, ಸರ್ಟಿಫಿಕೇಟ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದರೆ ನಿಮ್ಮ ಕಥೆ ಅಷ್ಟೇ?

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಲಸಿಕೆ ಪಡೆದುಕೊಂಡ ಪ್ರಮಾಣಪತ್ರವನ್ನು ಪೋಸ್ಟ್ ಮಾಡಬೇಡಿ. ಹೀಗೆಂದು ಕೇಂದ್ರ ಗೃಹ ಸಚಿವಾಲಯ ನಿರ್ವಹಿಸುತ್ತಿರುವ ‘ಸೈಬರ್ ದೋಸ್ತ್’ ಟ್ವಿಟರ್ ಹ್ಯಾಂಡಲ್ ನಿಂದ ಎಚ್ಚರಿಕೆ ನೀಡಲಾಗಿದೆ. ಅನೇಕರು ತಾವು ಲಸಿಕೆ ಹಾಕಿಸಿಕೊಂಡ ಫೋಟೋ, ಸರ್ಟಿಫಿಕೇಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಈ ರೀತಿ ಲಸಿಕೆ ಪಡೆದ ಸರ್ಟಿಫಿಕೇಟ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಚ್ಚಿಕೊಳ್ಳಬಾರದು. ಸರ್ಟಿಫಿಕೇಟ್ ನಲ್ಲಿ ಲಸಿಕೆ ಹಾಕಿಸಿಕೊಂಡವರ ಹೆಸರು, ಆಧಾರ್ ಮಾಹಿತಿ ಸೇರಿದಂತೆ ವೈಯಕ್ತಿಕ ವಿವರಗಳು …

Read More »

ವಾರದ ಎಲ್ಲಾ ದಿನಗಳಲ್ಲೂ ನ್ಯಾಯಬೆಲೆ ಅಂಗಡಿ ತೆರೆಯುವಂತೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಪಡಿತರ ಚೀಟಿದಾರರಿಗೆ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ವಾರದ ಎಲ್ಲ ದಿನವೂ ಪಡಿತರ ಅಂಗಡಿಗಳನ್ನು ತೆರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ವಾರದ ಎಲ್ಲಾ ದಿನಗಳಲ್ಲೂ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಬೇಕು ಮತ್ತು ಹೆಚ್ಚು ಅವಧಿ ಅಂಗಡಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ರಾಜ್ಯಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ ನೀಡಲಾಗಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮೇ ಮತ್ತು ಜೂನ್ ತಿಂಗಳಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಹೆಚ್ಚುವರಿ ಅಕ್ಕಿ …

Read More »