Breaking News

ಗೋಕಾಕ

ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ ತಾಲೂಕಿನ …

Read More »

ರೈತರಿಗೆ ಕೂಡಲೇ ರಸಗೊಬ್ಬರ ಪೂರೈಸಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ ಬಿತ್ತನೆಯಾಗಿದ್ದು, …

Read More »

ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಮಗೂ ಪ್ರವಾಹ ಭೀತಿ …

Read More »

ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈಜೋಡಿಸಿ, ಪ್ರಗತಿಪಥದತ್ತ ಸಾಗಲು ನೆರವಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಮಂಗಳವಾರ ರಾತ್ರಿ ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ಕಾರ್ಖಾನೆಯ ಆಡಳಿತ ಮಂಡಳಿಯ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯ ಹಿತದೃಷ್ಟಿಯಿಂದ ಈ ಕ್ರಮವನ್ನು …

Read More »

ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ

  ಕಾರ್ಖಾನೆಗೆ ರೈತರೇ ಜೀವಾಳ : ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೊಡದಿರಿ. ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, …

Read More »

ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್‍ಡಿಪಿಆರ್ ಇಲಾಖೆಯ 25 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೆಳವಂಕಿ ಗ್ರಾಮ ಪಂಚಾಯತಿ …

Read More »

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ ನಾವು …

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, …

Read More »