*ಗೋಕಾಕ್*- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಭೀಮಪ್ಪ ಗಡಾದ ಅವರನ್ನು 74700 ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ಬಾಲಚಂದ್ರ ಜಾರಕಿಹೊಳಿಯವರು “ಡಬಲ್ ಹ್ಯಾಟ್ರಿಕ್” ಸಾಧನೆ ಮಾಡಿದ್ದಾರೆ. ಅಲ್ಲದೇ ಆಡಳಿತಾರೂಢ ಬಿಜೆಪಿಯಿಂದ ರಾಜ್ಯದಲ್ಲಿಯೇ ಅತೀ ಹೆಚ್ಚಿನ ಮತಗಳಿಂದ ಆಯ್ಕೆಯಾದ ಕೀರ್ತಿಗೆ …
Read More »ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ
——- *ಗೋಕಾಕ:* ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊಸಪೇಟ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ೩ ಮತಗಟ್ಟೆ ೧೩೧ ರಲ್ಲಿ ಬುಧವಾರ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬೊಮ್ಮಾಯಿ ಅವರು ಈಗಾಗಲೇ …
Read More »ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ರೈತ ಸಂಘದಿಂದ ಬೆಂಬಲ
*ಗೋಕಾಕ:* ಅರಭಾವಿ ಮತಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು, ರೈತರ ಪರವಾದ ಯೋಜನೆಗಳು ಸೇರಿದಂತೆ ರೈತರ ಬಹುಬೇಡಿಕೆಗಳ ಹೋರಾಟಕ್ಕೆ ಅವರ ಸ್ಪಂದನೆ ಮೆಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸಿದೆ. ರೈತರ ಮಹತ್ವಾಕಾಂಕ್ಷಿ ಯೋಜನೆಗಳಾದ ಕಲ್ಮಡಿ ಏತ ನೀರಾವರಿ, ರಾಮಲಿಂಗೇಶ್ವರ ಏತ ನೀರಾವರಿ ಜಾರಿಗೆ ತರುವಲ್ಲಿ ಬಾಲಚಂದ್ರ ಅವರ ಪಾತ್ರ ಬಹುದೊಡ್ಡದು. ಜತೆಗೆ ಘಟಪ್ರಭಾ ಎಡದಂಡೆ, …
Read More »ಅರಭಾವಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸಲು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದೇನೆ : ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ ಬಾರಿಗೆ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಅವರು …
Read More »ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ
ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಮಂಗಳವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ …
Read More »ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಗೋಕಾಕ* : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಬೇಸಿಗೆಯಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಬಳಕೆಗಾಗಿ ಮಾತ್ರ ನೀರನ್ನು ಬಿಡುಗಡೆ …
Read More »ಅರಭಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅರವಿಂದ್ ದಳವಾಯಿ ಗೆಲುವು ನಿಶ್ಚಿತ_ವಿ.ಪಿ. ನಾಯ್ಕ್.
ಕೌಜಲಗಿ: ಬುಧವಾರ ನಡೆದ ಕೌಜಲಗಿಯ ಕಾಂಗ್ರೆಸ್ ಕಚೇರಿಯಲ್ಲಿ ಅರಭಾವಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಯಶಸ್ವಿ ಯಾಗಿ ಜರುಗಿತು. ಈ ಸಭೆಯಲ್ಲಿ 2023ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅರವಿಂದ್ ದಳವಾಯಿ ಅವರ ಗೆಲುವು ನಿಶ್ಚಿತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ ಪಿ ನಾಯಕ್ ಹೇಳಿದರು. 2018ರವರೆಗೆ ಅರಭಾವಿಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಹೀನಾಯವಾಗಿತ್ತು. 2018 ರಲ್ಲಿ ಅರವಿಂದ ದಳವಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಅಲ್ಲಿಂದ …
Read More »ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಜರುಗಿದ ಅರಭಾವಿ ಕ್ಷೇತ್ರದ 281 ಮತಗಟ್ಟೆಗಳ ಪ್ರಮುಖರ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮತಗಟ್ಟೆಗಳ ಮೂಲಕ ಕೆಲಸ ನಿರ್ವಹಿಸಿದರೆ ನಮ್ಮ ಚುನಾವಣೆಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು. …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ
ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಬಾಲಚಂದ್ರ ಜಾರಕಿಹೊಳಿ ಅವರ ಜನಪರ …
Read More »ಅಂಕಲಗಿ ಪೂಜ್ಯರ ವಿಧಿವಶ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಗೋಕಾಕ್- ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಯಾಗಿದ್ದ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅಂಕಲಗಿ ಮಠವು ಬೆಳಗಾವಿ ನಾಡಿನಲ್ಲಿ ವಿಶಿಷ್ಟ ಇತಿಹಾಸ, ಭವ್ಯ ಪರಂಪರೆಯನ್ನು ಹೊಂದಿದೆ. ಮಠದ ಸರ್ವತೋಮುಖ ಬೆಳವಣಿಗೆಗಳಲ್ಲಿ ಶ್ರೀ ಗಳ ಪಾತ್ರ ಗಣನೀಯವಾಗಿತ್ತು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆಯನ್ನು ಸಲ್ಲಿಸಿದ್ದರು. ಭಕ್ತರ ಪಾಲಿಗೆ ಪೂಜ್ಯನೀಯವಾಗಿತ್ತು. …
Read More »