Breaking News
Home / ಗೋಕಾಕ (page 9)

ಗೋಕಾಕ

ಬಡಕುಂದ್ರಿ ಹೊಳೆಮ್ಮದೇವಿ ಆಶೀರ್ವಾದ ಪಡೆದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಸುಪ್ರಸಿದ್ಧ ಬಡಕುಂದ್ರಿ ಹೊಳೆಮ್ಮಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಿನ್ನೆ ಭಾನುವಾರ ಸಂಜೆ ದೇವಸ್ಥಾನಕ್ಕೆ ತೆರಳಿ‌ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸತ್ಕರಿಸಿದರು.

Read More »

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ.

ಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ ಉಣಬಡಿಸಿದ್ದರು. ಹಿನ್ನೆಲೆ ಗಾಯಕಿಯಾಗಿ ಬಾರತೀಯ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು. ಇವರ ಧ್ವನಿ …

Read More »

ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 34.53 ಕಿ.ಮೀ ರಸ್ತೆಗಳ ಸುಧಾರಣೆಗಾಗಿ 32 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ 35.30 …

Read More »

ನಗರೋತ್ಥಾನ ಯೋಜನೆಯಡಿ ಪಟ್ಟಣ ಪಂಚಾಯತಿ ಅಭಿವೃದ್ಧಿಗಾಗಿ ಹೆಚ್ಚಿನ ನೆರವು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕಲ್ಲೋಳಿ ಪಟ್ಟಣದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಗಮನ ನೀಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ ಪಪಂ ಸದಸ್ಯರಿಗೆ ಸಲಹೆ ನೀಡಿದರು. ಶುಕ್ರವಾರದಂದು ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಸದಸ್ಯರನ್ನು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸವನ್ನು …

Read More »

ಕಾರ್ಖಾನೆಯಿಂದ ತ್ಯಾಜ್ಯ ನೀರು ಬಿಡುತ್ತಿರುವ ಸಚಿವ ಕತ್ತಿ ರಾಜಿನಾಮೆಗೆ ರೈತರ ಆಗ್ರಹ.!

ಗೋಕಾಕ: ಆಹಾರ ಸಚಿವ ಉಮೇಶ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಯಿಂದ ರಾಸಾಯನಿಕ ತ್ಯಾಜ್ಯ ನೀರು ಹಳ್ಳಕ್ಕೆ ಬಿಡುತ್ತಿರುವದನ್ನು ಖಂಡಿಸಿ ಪಾಮಲದಿನ್ನಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸಚಿವ ಕತ್ತಿ ಒಡೆತನದ ವಿಶ್ವರಾಜ ಶುಗರ್ಸ್ ಸಕ್ಕರೆ ಕಾರ್ಖಾನೆಯಿಂದ ತಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುತ್ತಿರುವ ಬಗ್ಗೆ ಈಗಾಗಲೇ ತಹಶಿಲ್ದಾರ ಸೇರಿ ಜಿಲ್ಲಾಧಿಕಾರಿಗಳ ವರೆಗೆ ದೂರು ನೀಡಿದ್ದರು ಯಾವುದೇ ಕ್ರಮ ಜರಗಿಸಿಲ್ಲ. ಹಳ್ಳದಲ್ಲಿ ಜಾನುವಾರಗಳ ಮೈತೊಳೆದ ಹಿನ್ನಲೆ ಜಾನುವಾರುಗಳು ಚರ್ಮ ರೋಗ ಹಾಗೂ ಇನ್ನಿತರ …

Read More »

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ ಮೂಲಕ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವ ಸಂಕಲ್ಪ ಹೊಂದಿರುವುದಾಗಿ …

Read More »

ಕೋವಿಡನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ಧನ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಕೋವಿಡ್ 19 ಮಹಾಮಾರಿಯಿಂದ ಅನೇಕ ನಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದೆವೆ. ಕೇಂದ್ರ ಸರಕಾರ ಮೃತ ಫಲಾನುಭವಿಗಳ ಖಾತೆಗೆ 50 ಸಾವಿರ ರೂಪಾಯಿ ಪರಿಹಾರ ಧನ ಈಗಾಗಲೇ ಜಮೆ ಮಾಡುತ್ತಿದ್ದು, ರಾಜ್ಯ ಸರಕಾರದಿಂದಲೂ ಒಂದು ಲಕ್ಷ ಪರಿಹಾರ ವಿತರಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಕೋವಿಡ್ 19 ವೈರಾಣು ಸೋಂಕಿನಿಂದ ಮೃತಪಟ್ಟ ಕುಟುಂಬದ ಸದಸ್ಯರಿಗೆ ರಾಜ್ಯಸರಕಾರದಿಂದ ನೀಡಲಾಗುತ್ತಿರುವ ಒಂದು …

Read More »

ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರಂತಾ ಮಹಾನ್ ನಾಯಕರ ಪ್ರತಿಮೆಗಳಿಗೆ ಅವಮಾನ ಮಾಡಿರುವುದನ್ನುತೀವ್ರವಾಗಿ ಖಂಡಿಸುತ್ತೇನೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಗೋಕಾಕ : ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರಂತಾ ಮಹಾನ್ ನಾಯಕರ ಪ್ರತಿಮೆಗಳಿಗೆ ಅವಮಾನ ಮಾಡಿರುವುದನ್ನುತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಸುರಿದ ಪ್ರಕರಣದಿಂದ ಬೆಳಗಾವಿಯಲ್ಲಿ ಸಮಸ್ಯೆ ಉದ್ಭವವಾಗಿದೆ. ರಾಯಣ್ಣ ಪ್ರತಿಮೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದರು. ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ನಡೆದ ಎರಡು ಘಟನೆಗಳಿಂದ ಗಲಾಟೆ …

Read More »

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಲಖನ್ ಜಾರಕಿಹೊಳಿ ಅವರಿಗೆ ಸ್ಪರ್ಧಿಸಲು ಪಕ್ಷವು …

Read More »

ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

 ಘಟಪ್ರಭಾ :  ನಗರದಲ್ಲಿ ತನಗೆ ಸಿ.ಎ (Chartered Accountants) ಮಾಡಲು ಮನಸಿಲ್ಲ ಎಂದು ಹೇಳಿ ಕಳೆದ ನಾಲ್ಕು ದಿನಗಳ ಹಿಂದೆ ತನ್ನ ಮನೆಗೆ ಬಂದಿದ್ದ ಯುವತಿ ಗುರುವಾರ ಸಾಯಂಕಾಲ ಮನೆಯಲ್ಲಿ ಫ್ಯಾನ ಒಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನಡೆದಿದೆ. ಮೃತ ದುರ್ದೈವಿ ಯುವತಿಯನ್ನು ಶೆರ್ಲಿ ದನಂಪಾಲ ಕುರಪಾಟಿ (19) ಎಂದು ಹೇಳಲಾಗುತ್ತಿದೆ. ಯುವತಿ ತಂದೆ-ತಾಯಿಯೊಂದಿಗೆ ಪಟ್ಟಣದ ರೇಲ್ವೆ ಕ್ವಾಟರ್ಸ್ …

Read More »