ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೇ ಅದು ನಮ್ಮ ಬಿಜೆಪಿ ಸರ್ಕಾರ ಮಾತ್ರ. ನಾಗನೂರು ಪಟ್ಟಣದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಲ್ಲಿ ಮನವಿ ಮಾಡಿದರು. …
Read More »ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಮೂಡಲಗಿ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹೇಳಿದರು. ಅವರು ಮೂಡಲಗಿ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಶ್ರೀ ಭಗೀರಥ ಯುವತಿ ಮಂಡಲ ಹಳ್ಳೂರ ಹಾಗೂ ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ …
Read More »ಬಾಲಚಂದ್ರ ಜಾರಕಿಹೊಳಿ ಅವರಿಗೆ ರಾಜಾ ಹುಲಿ ಎಂದ ನಿರಾಣಿ
“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ. *ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ, ಕೆಎಮ್‌ಎಫ್ …
Read More »ಮಾರ್ಚ 15ರಂದು ಶ್ರೀಗಳು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೊ ಆ ನಿರ್ಧಾರಕ್ಕೆ ಇಡೀ ರಾಜ್ಯ ಪಂಚಮಸಾಲಿಗಳು ಬದ್ದ: ನಿಂಗಪ್ಪ ಪಿರೋಜಿ
ಮೂಡಲಗಿ : ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಚಾರವಾಗಿ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಂದ ಪ್ರತಿಭಟನೆಗೆ ಕರೆ ನೀಡಿದ ಹಿನ್ನಲೆ ನೂರಾರು ಪಂಚಮಸಾಲಿ ಸಮಾಜದ ಜನರು ಹಾಗೂ ತಾಲೂಕಿನ ವಿವಿಧ ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮೂಡಲಗಿ ಸಮೀಪದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯನ್ನು ಗುರ್ಲಾಪೂರ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪಂಚಮಸಾಲಿ ಸಮಾಜದ ಸಂಘಟನೆಯ ಬೆಳಗಾವಿ …
Read More »ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ 18 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅವರಾದಿ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ರಸ್ತೆಯನ್ನು ಅಭಿವೃದ್ದಿಪಡಿಸುತ್ತಿರುವುದಾಗಿ ತಿಳಿಸಿದರು. …
Read More »ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಕಾರ್ಯಕರ್ತರು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ …
Read More »ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಮನೆ ಮನೆಗೆ ನಲ್ಲಿ ನೀರಿನ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಹೇಳಿದರು. ಕ್ಷೇತ್ರದ ಎಲ್ಲ ಭಾಗಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು …
Read More »31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ಸಮೀಪದ ಮದಲಮಟ್ಟಿ(ಶಿವಾಪೂರ-ಹ) ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ 13.90 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …
Read More »16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ರಸ್ತೆಗಳ ಅಭಿವೃದ್ಧಿಗಾಗಿ ಆರ್‍ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಗೆ ಸಮೀಪದ ಗುರ್ಲಾಪೂರ ಕ್ರಾಸ್ ಹತ್ತಿರ 1.30 ಕೋಟಿ ರೂ. ವೆಚ್ಚದ ಗುರ್ಲಾಪೂರ-ಇಟ್ನಾಳ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಕಾಮಗಾರಿಗಳ …
Read More »ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ಹಡಪದ ಅಪ್ಪಣ್ಣನವರ ದೇವಸ್ಥಾನದ ಆವರಣದಲ್ಲಿ ಮೂಡಲಗಿ ತಾಲೂಕು ಮಟ್ಟದ ಹಡಪದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫೇಬ್ರುವರಿ 17ರಿಂದ ಬಜೆಟ್ ಅಧಿವೇಶನ ಮಂಡನೆಯಾಗುವುದರಿಂದ ಅದರ ಪೂರ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು. ಹಡಪದ …
Read More »