Breaking News
Home / ಮೂಡಲಗಿ (page 14)

ಮೂಡಲಗಿ

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ವ್ಯಾಪ್ತಿಯಲ್ಲಿ ಬರುವ ರಸ್ತೆ ನಿರ್ಮಾಣ ಮತ್ತು ಒಳಚರಂಡಿ ಕಾಮಗಾರಿಗಳು ಆದಷ್ಟು ಬೇಗನೇ ಪೂರ್ಣ ಮಾಡುವಂತೆ ಸೂಚಿಸಿದರು. ಕಲ್ಲೋಳಿ ಪಟ್ಟಣದ ನಾಗರೀಕರಿಗೆ …

Read More »

ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ (ರಿ) ಮೂಡಲಗಿ ಘಟಕದಿಂದ ತಹಶೀಲ್ದಾರ್ ಅವರಿಗೆ ಮನವಿ

ಮೂಡಲಗಿ  : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಿದರ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ರವರು ಸುಳ್ಳು ಹೇಳಿಕೆ ನೀಡಿ ನಮ್ಮ ಸಂಘದ ಹೆಸರಿಗೆ ಕಪ್ಪು ಮಸಿ ಬಳೆಯಲು ಪ್ರಯತ್ನಿಸಿದ್ದು ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವ ಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಮೂಡಲಗಿ ತಾಲೂಕಾ ಘಟಕದ ಅದ್ಯಕ್ಷ ಭಗವಂತ ಉಪ್ಪಾರ ಆಗ್ರಹಿಸಿದರು. ಮಂಗಳವಾರದಂದು ಪಟ್ಟಣದ ತಹಶೀಲ್ದಾರ ರವರಿಗೆ ಮನವಿ ಸಲ್ಲಿಸಿ ಮಾತನಾಡಿದ …

Read More »

ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತೋತ್ಸವ

ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ  ದಾರ್ಶನಿಕ ಕವಿ ಮಹಾಯೋಗಿ ಶ್ರೀ ವೇಮನರ 611ನೇಯ ಮೂಡಲಗಿ ತಾಲೂಕಾ ಮಟ್ಟದ ಜಯಂತೋತ್ಸವವನ್ನು ಜ.25 ರಂದು ಬಸವ ರಂಗ ಮಂಟಪದಲ್ಲಿ ಮೂಡಲಗಿ ರಡ್ಡಿ ಬಂದುಗಳಿಂದ  ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ  ವಿಜಯಕುಮಾರ ಸೋನವಾಲ್ಕರ ಮತ್ತು ಪ್ರದೀಪ ಲಂಕೆಪ್ಪನವರ ತಿಳಿಸಿದರು.     ಸೋಮವಾರದಂದು ಪಟ್ಟಣದಲ್ಲಿನ ಪತ್ರಿಕಾ ಕಾರ್ಯಲಯದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು ಜ.25 ರಂದು ಮುಂಜಾನೆ 10ಕ್ಕೆ ಮೂಡಲಗಿ ಶಿಕ್ಷಣ ಸಂಸ್ಥೆಯ  ಹತ್ತಿರದಿಂದ ಬೃಹತ …

Read More »

ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಪರೀಕ್ಷೆಗೆ ಹಾಜರಾಗಿರುವದು ಸರ್ವಕಾಲಿಕ ದಾಖಲೆ

ಮೂಡಲಗಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಕೌಶಲಗಳನ್ನು ರೂಪಿಸುವ ನಿಟ್ಟಿನಲ್ಲಿ ಶಿಷ್ಯವೇತನಕ್ಕಾಗಿ ನಡೆಯುವ ನ್ಯಾಶನಲ್ ಮೀನ್ಸ್ ಕಮ್ ಮೇರಿಟ್ ಸ್ಕಾಲರಶೀಫ್ (ಎನ್‌ಎಮ್‌ಎಮ್‌ಎಸ್) ಸ್ಪರ್ಧಾತ್ಮಕ ಪರೀಕ್ಷೆಗಳು ಮನೊಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಹಾಯಕವಾಗುತ್ತವೆ ಎಂದು ಚಿಕ್ಕೋಡಿ ಡೈಟ್ ಪ್ರಾಚಾರ್ಯ ಮೋಹನ ಜೀರಗ್ಯಾಳ ಹೇಳಿದರು. ಅವರು ರವಿವಾರ ಪಟ್ಟಣದಲ್ಲಿ ಜರುಗಿದ ಎನ್‌ಎಮ್‌ಎಮ್‌ಎಸ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಭಿಪ್ರಾಯ ವ್ಯಕ್ತಪಡಿಸಿ, ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಪರೀಕ್ಷೆಗೆ ಹಾಜರಾಗಿರುವದು ಸರ್ವಕಾಲಿಕ ದಾಖಲೆಯಾಗಿರುತ್ತದೆ. ಇಲ್ಲಿಯ …

Read More »

ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮತದಾರರಿಗೆ ಮುಟ್ಟಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ

ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಶನಿವಾರದಂದು ಬಿಜೆಪಿ ಅರಭಾವಿ ಮಂಡಲ ಏರ್ಪಡಿಸಿದ್ದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ …

Read More »

ಕನ್ನಡ ಭಾಷೆಯ ಮಕ್ಕಳಿಗೆ ಹೆಚ್ಚು ಪ್ರಾಶಸ್ತ್ಯ ಸಿಕ್ಕಂತಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ(ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆ): ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ ರಾಜ್ಯದ ಅಭ್ಯರ್ಥಿಗಳಿಗೆ ಉದ್ಯೋಗಗಳು ಸೃಷ್ಠಿಯಾಗಲಿವೆ. ಜೊತೆಗೆ ಕನ್ನಡ ಭಾಷೆಯ ಮಕ್ಕಳಿಗೆ ಹೆಚ್ಚು ಪ್ರಾಶಸ್ತ್ಯ ಸಿಕ್ಕಂತಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ ತಾಲೂಕು …

Read More »

ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್

ಮೂಡಲಗಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವದ ವೀರ ಜ್ಯೋತಿಯು ಇಂದು ಮಧ್ಯಾಹ್ನ 2:30ಕ್ಕೆ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತದೆ ಎಂದು ತಹಶೀಲ್ದಾರ್ ಡಿ ಜೆ ಮಹಾತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೀರ ಜ್ಯೋತಿಯು ಕಂಕಣವಾಡಿ ಗುರ್ಲಾಪೂರ ಮಾರ್ಗವಾಗಿ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತಿರುವುದರಿಂದ ವೀರ ಜ್ಯೋತಿಗೆ ಗೌರವಪೂರಕವಾಗಿ ಬರಮಾಡಿಕೊಂಡು ಪೂಜೆ ಸಲ್ಲಿಸಿ, ಪಟ್ಟಣದೊಳಗೆ ಬರಮಾಡಿಕೊಳ್ಳಲಾಗುವುದೆಂದು ತಿಳಿಸಿದ್ದಾರೆ. ತಾಲೂಕಿನ ಸಮುದಾಯ ಬಂದುಗಳು, ತಾಲೂಕ ಮಟ್ಟದ ಅಧಿಕಾರಿಗಳು, ತಾಲೂಕಿನ ಕನ್ನಡಪರ ಹಾಗೂ …

Read More »

ಜಾನಪದ ಕಲಾ ಸಂಭ್ರಮ ಕಾರ್ಯಕ್ರಮವನ್ನು ಡೋಳ್ಳು ಬಾರಿಸುವ ಮೂಲಕ ಉದ್ಘಾಟಿಸಿದ ಸರ್ವೋತ್ತಮ ಜಾರಕಿಹೊಳಿ.

ಮೂಡಲಗಿ: ಗ್ರಾಮೀಣ ಭಾಗಗಳಲ್ಲಿ ಜಾನಪದ ಕಲೆಗಳು ಕಲಾಸಕ್ತರಿಂದ ಪೋಷಿಸಲ್ಪಟ್ಟು ಉಳಿಸಿಕೊಂಡಿವೆ. ಯಾವ ಕಾಲಘಟ್ಟದಲ್ಲೂ ಜಾನಪದ ಕಲೆಗಳು ನಾಶವಾಗಿಲ್ಲ. ಆದರೆ ಅವುಗಳ ಸಂರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶನಿವಾರದಂದು ತಾಲೂಕಿನ ಜೋಕಾನಟ್ಟಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು, ಶ್ರೀ ಶಿವಾನಂದ ಭಾರತಿಸ್ವಾಮಿ ಜಾನಪದ ಕಲಾ ಯುವ ಸಂಘ, ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ, …

Read More »

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …

Read More »

ಉಪ್ಪಾರ ಅಂತರಾಷ್ಟ್ರೀಯ ವಧು ವರರ ಸಮಾವೇಶ ಅರ್ಜಿ ಆಹ್ವಾನ

ಮೂಡಲಗಿ : ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ಜ 8 ರಂದು ಭಾನುವಾರ ಬೆಳಗಾವಿಯ ಪ್ರತಿಷ್ಠಿತ ಹೋಟೆಲ್ ಸಂಕಮ್ ರೆಸಿಡೆನ್ಸಿನಲ್ಲಿ ಅಂತರ ರಾಷ್ಟ್ರಮಟ್ಟದ ಉಪ್ಪಾರರ ವಧು-ವರ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಉಪ್ಪಾರ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳು …

Read More »