ಮೂಡಲಗಿ: ಜ್ಞಾನದ ಹಸಿವು ಇದ್ದವರು ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ, ಗ್ರಾಮೀಣ ಪ್ರದೇಶದ, ಅದರಲ್ಲೂ ರೈತನ ಮಕ್ಕಳು ಪಿ.ಎಸ್.ಆಯ್ ಹುದ್ದೆಗೆ ಆಯ್ಕೆಯಾಗುವ ಮೂಲಕ ಒಳ್ಳೆಯ ಸಾಧನೆ ಮಾಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ರವಿವಾರ ರಂದು ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಸಕ್ರೆಪ್ಪಗೋಳ ತೋಟದಲ್ಲಿ ಇಟನಾಳ ಗ್ರಾಮದ ಶಿವಾನಂದ ಬೆನ್ನಳ್ಳಿ ಮತ್ತು ಕಿರಿಯ ಸಹೋದರ ಪ್ರಶಾಂತ ಬೆನ್ನಳ್ಳಿ ಸಹೋದರರಿಬ್ಬರು ಸನ್ಮಾನಿಸಿ ಮಾತನಾಡಿದ …
Read More »ಮೂಡಲಗಿ ಶ್ರೀ ಶಿವಬೋಧರಂಗ ಮಠದಲ್ಲಿ ದತ್ತಾತ್ರೇಯಬೋಧ ಮತ್ತು ಶ್ರೀಧರಬೋಧರ ಪೀಠಾರೋಹಣ
ಮೂಡಲಗಿ: ಮೂಡಲಗಿಯ ಶ್ರೀ ಶಿವಬೋಧರಂಗ ಸ್ವಾಮಿ ಸಂಸ್ಥಾನಮಠದಲ್ಲಿ ಶುಕ್ರವಾರ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀಧರಬೋಧ ಸ್ವಾಮೀಜಿ ಅವರಿಗೆ ಶ್ರೀಕ್ಷೇತ್ರ ನೃಸಿಂಹವಾಡಿಯ ವೇದಮೂರ್ತಿ ಶ್ರೀಅವಧೂತ ಬೋರಗಾಂವಕರ ಅವರ ನೇತೃತ್ವದಲ್ಲಿ ಪೀಠಾರೋಹಣ ಧೀಕ್ಷಾ ಕಾರ್ಯಕ್ರಮವು ವಿಧಿವತ್ತಾಗಿ ನೆರವೇರಿತು. ಬೆಳಿಗ್ಗೆ ಕೆಳಗಿನಮಠದಲ್ಲಿ ಸನ್ನಿಧಿಗೆ ವಿಶೇಷ ಪೂಜೆಗಳು ನೆರವೇರಿದ ನಂತರ ಮೇಲಿನಮಠದಲ್ಲಿ ಸೌರಯಾಗ ಹೋಮದೊಂದಿಗೆÉ ಶ್ರೀಮಠದ ಸಂಪ್ರದಾಯದಂತೆ ಮತ್ತು ವಿವಿಧ ವಿಧಿವಿಧಾನಗಳೊಂದಿಗೆ ಉಭಯ ಶ್ರೀಗಳಿಗೆ ಧೀಕ್ಷೆಯನ್ನು ಪ್ರಧಾನ ಮಾಡಿದರು. ಧೀಕ್ಷೆ ಸ್ವೀಕರಿಸಿದ ಶ್ರೀಗಳು ಮೇಲಿನ ಮಠದಿಂದ …
Read More »ಎಮ್ಈಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಮೂಡಲಗಿ : ಭಾಷಾ ಗೊಂದಲದಲ್ಲಿ ಬಸವಣ್ಣ, ರಾಯಣ್ಣನಂಥವರಿಗೆ ಅವಮಾನ ಮಾಡಿರುವ ಎಮ್ ಇಉಎಸ್ ಪುಂಡರ ಹುಟ್ಟಡಗಿಸಬೇಕು. ಕರ್ನಾಟಕದಲ್ಲಿ ಶಿವಸೇನೆ ಮತ್ತು ಎಮ್ಈಎಸ್ ಸಂಘಟನೆಗಳ ಮೇಲೆ ನಿಷೇಧ ಹೇರಲೇಬೇಕು ಎಂದು ನಿವೃತ್ತ ಶಿಕ್ಷಕ ಬಿ ಆರ್ ತರಕಾರ ಹೇಳಿದರು. ವಿಶ್ವಗುರು ಬಸವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಕನ್ನಡ ಧ್ವಜಕ್ಕೆ ಅವಮಾನ ಮಾಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಎಂಬ ಪುಂಡರ ಗುಂಪನ್ನು ಕರ್ನಾಟಕದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ಲಿಂಗಾಯತ ಪಂಚಮಸಾಲಿ …
Read More »ಜಂಬೂ ಸವಾರಿಗೆ ಮೆರಗು ನೀಡಿದ ತಾಲೂಕಿನ ವಿವಿಧ ಕಲಾತಂಡಗಳು
ಮೂಡಲಗಿ: ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದ ಉತ್ಸವ ಹಾಗೂ ಭವ್ಯ ಮೆರವಣಿಗೆಗೆ ಸೋಮವಾರ ಸಂಜೆ ಜರುಗಿತು. ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯನ್ನು ಹೊತ್ತಿರುವ ಆನೆಯ ಅಂಬಾರಿಗೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ಮಲ್ಲಿಕಾರ್ಜುನ ಯಕ್ಷಂಬಿ, ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಪಟ್ಟಣದ ಅಯ್ಯಪ್ಪ …
Read More »ಪ್ರಥಮ ಪ್ರಾಶಸ್ತ್ಯದಲ್ಲಿಯೇ ಕವಟಗಿಮಠ ಗೆಲುವು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ವಿಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಪ್ರಥಮ ಪ್ರಾಶಸ್ತ್ಯದಲ್ಲಿಯೇ ಜಯ ಗಳಿಸಲಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರದಂದು ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮತ ಚಲಾಯಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಗೆಲುವಿನಿಂದ ಅರಭಾವಿ ಕ್ಷೇತ್ರವೂ ಸೇರಿದಂತೆ ಇಡೀ ಜಿಲ್ಲೆಯೂ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು. ಇದೇ ಮೊದಲ ಬಾರಿಗೆ ವಿಧಾನ ಪರಿಷತ್ …
Read More »ಪುನೀತ ರಾಜಕುಮಾರ ಕ್ರಾಸ್ ನಾಮಫಲಕ ಉದ್ಘಾಟನೆ
ಮೂಡಲಗಿ : ಕರುನಾಡಿನ ಯುವರಾಜ ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ ಅಕಾಲಿಕವಾಗಿ ಕಾಣದಂತೆ ಮಾಯವಾಗಿ ಕೈಲಾಸ ಸೇರಿಕೊಂಡ ಘಟನೆ ನಮ್ಮೆಲ್ಲರನ್ನೂ ಸ್ತಂಭೀಭೂತರನ್ನಾಗಿಸಿದೆ ಎಂದು ಉಪನ್ಯಾಸಕ ವಾಯ್ ಬಿ ಕಳ್ಳಗುದ್ದಿ ಹೇಳಿದರು. ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಗ್ರಾಮದ ನವನಗರ ಕ್ರಾಸ್‌ವನ್ನು “ಪುನೀತ್ ರಾಜಕುಮಾರ ಕ್ರಾಸ್” ವೆಂದು ಮರುನಾಮಕರಣದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ ಅವರ ಅಗಲಿಕೆಯ ನೋವು, ಸ್ಮರಣೆ, ನೆನಪು ಮಾತ್ರ ನಿರಂತರವಾಗಿ ಸಾಗಿದೆ. …
Read More »ಮಠಗಳಿಗೆ ಭಕ್ತರೇ ನಿಜವಾದ ಆಸ್ತಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು ಮರೆತು …
Read More »ಸಿಡಿಲು ಬಡಿದು ಸ್ಥಳದಲ್ಲೇ ಸಾವು
ಮೂಡಲಗಿ : ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಭೀಮಶಪ್ಪ ಸಾಸಪ್ಪ ಗೋಣಿ (64) ಎಂಬುವರು ಹೊಲದಲ್ಲಿ ಬದನೆಕಾಯಿ ಹರಿವ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
Read More »ನದಿ ತೀರದ ಗ್ರಾಮಗಳ ಸಂತ್ರಸ್ಥ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಪ್ರವಾಹ ಹಾಗೂ ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಡಾಟಾ ಎಂಟ್ರಿ ಆದ ಸಂತ್ರಸ್ತ ಕುಟುಂಬಸ್ಥರಿಗೆ ಆದಷ್ಟು ಬೇಗನೇ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಕಳೆದ ಸೋಮವಾರದಂದು ಮೂಡಲಗಿ ಹಾಗೂ ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂತ್ರಸ್ಥ ಕುಟುಂಬಸ್ಥರಿಗೆ ಯಾವುದೇ ತೊಂದರೆಯಾಗದಂತೆ ಕರ್ತವ್ಯ …
Read More »ಶಾಸ್ತ್ರೀಯ ಭಾಷೆಯಾದ ಕನ್ನಡ ನಾಡಿನ ಹಿರಿಮೆ ವಿಶ್ವವ್ಯಾಪಿಯಾಗಿ ಪಸರಿಸಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ‘ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನದ ಬದ್ಧತೆ ಇರಬೇಕು’ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಸೋಮವಾರದಂದು ಕನ್ನಡಪರ ಸಂಘಟನೆಗಳ ಆಶ್ರಯದೊಂದಿಗೆ ಜರುಗಿದ ಕನ್ನಡ ರಾಜ್ಯೋತ್ಸವದ ಮೆರವಣ ಗೆ ನಿಮಿತ್ಯ ತಾಯಿ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಅತ್ಯಂತ ಪ್ರಾಚೀನ ಮತ್ತು ಶಾಸ್ತ್ರೀಯ ಭಾಷೆಯಾಗಿರುವ ಕನ್ನಡ ನಾಡಿನ ಹಿರಿಮೆಯು ವಿಶ್ವವ್ಯಾಪ್ತಿಯಾಗಿ ಬೆಳೆದಿದೆ …
Read More »