ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. …
Read More »“ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೋರೋನಾ ಸೋಂಕು ದೃಢಪಟ್ಟಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಚಾರಕ್ಕೆ ಆಗಮಿಸಿದ್ದ …
Read More »ಕರ್ನಾಟಕದೆಲ್ಲೆಡೆ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಮಾರ್ಗಸುಚಿ
ಅಥಣಿ :ಕೊರೋನಾ ಎರಡನೆ ಅಲೆ ಹೋಡೆತಕ್ಕೆ ಕರ್ನಾಟಕದೆಲ್ಲೆಡೆ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಮಾರ್ಗಸುಚಿ ಅನುಸರಿಸುವಂತೆ ಅಥಣಿ ಪಟ್ಟಣದ ತರಕಾರಿ ವ್ಯಾಪಾರಸ್ಥರಿಗೆ ಶಂಕರ ನಗರದ ಉದ್ಯಾನ ವನದಲ್ಲಿ ಪ್ರತ್ಯೆಕ ಸ್ಥಳ ನಿಗದಿಪಡಿಸಿದ ಅಥಣಿ ಪುರಸಭೆ,ಹಾಗೂ ತಾಲೂಕು ಆಡಳಿತದ ಕ್ರಮಕ್ಕೆ ತರಕಾರಿ ವ್ಯಾಪರಸ್ಥರು ಆಕ್ರೋಶ ವ್ಯಕ್ತಪಡಿಸಿದರು ಹಳೆಯ ತರಕಾರಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ನಾವು ವ್ಯಾಪಾರ ಮಾಡುತ್ತಿದ್ದು ಶಂಕರ ನಗರದಲ್ಲಿ ನಿಗದಿಪಡಿಸಿದ …
Read More »ಸಂಜೆ 7 ರವರಗೆ ಮತದಾನದ ಸಮಯ ಹೆಚ್ಚಿಸಿದ ಚುನಾವಣೆ ಆಯೋಗ
ಗೋಕಾಕ: 02-ಬೆಳಗಾವಿ ಲೋಕಸಭಾ ಕ್ಷೇತ್ರ ಉಪ ಚುನಾವಣೆ 2021ರ ಕುರಿತು ಗೋಕಾಕದ ತಹಸಿಲ್ದಾರ ಕಚೇರಿಯಲ್ಲಿ ಕರೆದ ಪತ್ರಿಕಾಗೊಷ್ಟಿಯಲ್ಲಿ ಮಾನ್ಯ ಭಾರತ ಚುನಾವಣಾ ಆಯೋಗ ನವದೆಹಲಿ ಇವರು ವೇಳಾಪಟ್ಟಿಯನ್ನು ನಿಗದಿಪಡಿಸಿರುವ ಪ್ರಕಾರ 09-ಗೋಕಾಕ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 288 ಮೂಲ ಮತಗಟ್ಟೆಗಳು ಹಾಗೂ 68 ಹೆಚ್ಚುವರಿಯಂತೆ ಒಟ್ಟು 356 ಮತಗಟ್ಟೆಗಳನ್ನು ಸ್ಥಾಪಿಸಲಾಗಿರುತ್ತದೆ. ಸದರಿ ಮತಗಟ್ಟೆಗಳ ಪೈಕಿ 109 ಮತಗಟ್ಟೆಗಳನ್ನು Crtical ಹಾಗೂ 27 ಮತಗಟ್ಟೆಗಳನ್ನು Vulnerable ಅಂತಾ ಗುರುತಿಸಲಾಗಿರುತ್ತದೆ. ಒಟ್ಟು …
Read More »ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಪರ ಶಾಸಕ, ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮತಯಾಚನೆ
ಮೂಡಲಗಿ: ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕಳೆದ ಮೂರ್ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಕಾರ್ಯದಲ್ಲಿ ತೊಡಗಿರುವದರಿಂದ ಬಿಜೆಪಿಗೆ ಆನೆ ಬಲ ಬಂದಿದ್ದು, ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿಯವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವಿಶ್ವಾಸ ವ್ಯಕ್ತಪಡಿಸಿದರು. ಬುಧವಾರ ಸಂಜೆ ಪಟ್ಟಣದ ಬಸವ ಮಂಟಪದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥವಾಗಿ ನಡೆದ ಸಾರ್ವಜನಿಕ …
Read More »ಕನ್ಪ್ಯೂಸ್ ಮಾಡ್ಕೋಬೇಡಿ. ತಪ್ಪು ದಾರಿ ಹಿಡಿಬೇಡಿ. ಮಂಗಳಾ ಅಂಗಡಿ ಬೆಂಬಲಿಸಿ-ಕಮಲ ಅರಳಿಸಿ
ಗೋಕಾಕ: ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. ಕಾರ್ಯಕರ್ತರು ಏ-17 ರಂದು ನಡೆಯುವ ಈ ಉಪಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೇ ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕೆನ್ನುವ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಊಹಾ-ಪೋಹಗಳಿಗೆ ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೆರೆ ಎಳೆದರು. ಸೋಮವಾರದಂದು ಸಂಜೆ ನಗರದ ಹೊರವಲಯದಲ್ಲಿರುವ …
Read More »ಮಂಗಳಾ ಅಂಗಡಿ ಅವರನ್ನು ಬೆಂಬಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.
ಗೋಕಾಕ: ದೇಶದಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಷ್ಟ್ರದ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಬೆಳಗಾವಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಕೋರಿದರು. ಮಂಗಳವಾರದಂದು ಸಂಜೆ ಇಲ್ಲಿಗೆ ಸಮೀಪದ ಮೆಳವಂಕಿ ಗೌಡನ ಕ್ರಾಸ್) …
Read More »ಬಿಜೆಪಿ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೇಸ್ಸಿಗಿಲ್ಲ, ನಮ್ಮದು ದೇಶ ಪ್ರೇಮಿ ಪಕ್ಷ ಬಿಜೆಪಿ – ಸಚಿವ ಈಶ್ವರಪ್ಪ
ಘಟಪ್ರಭಾ: ಈ ಚುನಾವಣೆ ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಪಕ್ಷಗಳ ಮಧ್ಯ ನಡೆಯುತ್ತಿರುವ ಉಪ ಚುನಾವಣೆ. ಇಡೀ ವಿಶ್ವವೇ ಪ್ರಧಾನಿ ನರೇಂದ್ರ ಮೋದಿಯವರ ಪಾರದರ್ಶಕ ಆಡಳಿತವನ್ನು ಮೆಚ್ಚಿ ಕೊಂಡಾಡುತ್ತಿರುವ ಸಮಯದಲ್ಲಿ ಮೋದಿಯವರ ಬಗ್ಗೆ ಏಕ ವಚನದಲ್ಲಿ ಮಾತನಾಡುತ್ತಿರುವ ಮಾಜಿ ಸಿಎಂ ಸಿದ್ಧರಾಮಯ್ಯನವರ ನೈತಿಕತೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು. ಸೋಮವಾರದಂದು ಸಮೀಪದ ರಾಜಾಪೂರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಪರ ಮತಯಾಚಿಸಿ ಮಾತನಾಡಿದ ಅವರು, ದೇಶಪ್ರೇಮ …
Read More »ಸಚಿವ ಉಮೇಶ್ ಕತ್ತಿ, ಸಂಸದ ಈರಣ್ಣ ಕಡಾಡಿ ಮನೆ-ಮನೆಗೆ ತೆರಳಿ ಮಂಗಳಾ ಅಂಗಡಿ ಪರ ಪ್ರಚಾರ
ಗೋಕಾಕ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನೋಪಯೋಗಿ ಕಾರ್ಯಕ್ರಮಗಳನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಮತದಾರರಲ್ಲಿ ಮನವಿ ಮಾಡಿದರು. ರವಿವಾರದಂದು ಅರಭಾವಿ ಮತಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ ಗ್ರಾಮಗಳಿಗೆ ತೆರಳಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ …
Read More »ಈ ಕಚೇರಿಯಲ್ಲಿ ಅಂಬೇಡ್ಕರ ಭಾವಚಿತ್ರ ಹಾಕಲಿಕ್ಕೆ ಸ್ಥಳವಿಲ್ಲವಂತೆ,,,
ಗೋಕಾಕ:ನಮ್ಮ ದೇಶಕ್ಕೆ ಸಂವಿಧಾನ ನೀಡಿದ ಭಾಬಾ ಸಾಹೇಬ ಅಂಬೇಡ್ಕರ ಅವರನ್ನು ವಿಶ್ವದಾದ್ಯಂತ ಜ್ಞಾನಿಯೆಂದು ಹೊಗುಳಿ ಅವರಿಗೆ ಗೌರವ ನೀಡುತ್ತಲಿವೆ. ಆದರೆ ಅಂತಹ ಮಹಾನ ವ್ಯಕ್ತಿಗೆ ನಮ್ಮ ದೇಶದಲ್ಲಿ ಅವರ ಭಾವ ಚಿತ್ರ ಹಾಕಲಿಕ್ಕೆ ಸ್ಥಳವಿಲ್ಲದೆ ಹಳೆಯ ದಾಖಲಾತಿಗಳ ಮದ್ಯೆ ಇಟ್ಟು ಅವಮಾನ ಮಾಡಿದ ಘಟನೆ ಗೋಕಾಕಿನ ತಹಸಿಲ್ದಾರ ಕಚೇರಿಯಲ್ಲಿರುವ ಹಿರಿಯ ನೊಂದಣಿ ಕಚೇರಿಯಲ್ಲಿ ಕಂಡು ಬಂದಿದೆ. ಸಂವಿಧಾನದ ಆದಾರದ ಮೇಲೆ ಸರಕಾರಿ ಕೆಲಸ ಮಾಡುತ್ತಿರುವ ಗೋಕಾಕ ಹಿರಿಯ ನೊಂದಣಿ ಅಧಿಕಾರಿಗೆ …
Read More »