Breaking News
Home / ರಾಜ್ಯ (page 4)

ರಾಜ್ಯ

ಸುಪ್ರಿಂ ಕೋರ್ಟ್, ಪ್ರಧಾನಿ ಮೋದಿ ಗಮನ ಸೆಳೆದಿದ್ದ ಅಪಘಾತ

ಹುಬ್ಬಳ್ಳಿ ಧಾರವಾಡ: ಈ ರಸ್ತೆಯನ್ನು 1999 ರಿಂದ 2024 ರವರೆಗೆ ಅಶೋಕ ಖೇಣಿ ಒಡೆತನದ ನಂದಿ ಹೈವೇ ಡೆವೆಲಪರ್ಸ್ ಲಿಮಿಟೆಡ್ ನಿರ್ವಹಿಸುತ್ತಿದ್ದು, ಒಪ್ಪಂದ 2024 ರ ಮೇ 25 ಕ್ಕೆ ಮುಕ್ತಾಯವಾಗಲಿದೆ. ಬೈಪಾಸ್‌ನಲ್ಲಿ 2021 ರ ಜ. 15 ರಂದು ದಾವಣಗೆರೆಯ ಟೆಂಪೋ ಟ್ರಾವೆಲರ್-ಮರಳು ತುಂಬಿದ್ದ ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿತ್ತು. ಇದೀಗ ಭೂಸ್ವಾಧೀನ ಪ್ರಕ್ರಿಯೆ ಆರಂಭದ ಜೊತೆಗೆ ರಸ್ತೆ ನಿರ್ಮಾಣದ ಟೆಂಡರ್ ಕರೆಯುವ ಪ್ರಕ್ರಿಯೆ ಕೂಡ ಆರಂಭವಾಗಿದೆ. …

Read More »

ವಿದರ್ಭ ಪ್ರಾಂತ್ಯದಲ್ಲಿ “ನಂದಿನಿ” ಸ್ವಾಗತಿಸಿದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನಾವಿಸ್ ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …

Read More »

ಸಮಾಜ ಸೇವೆಯ ಸಾದನೆಗೆ ಒಲಿದು ಬಂದ ಗೌರವ ಡಾಕ್ಟರೇಟ್ ಪದವಿ

ಬೆಂಗಳೂರು: ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ರಾಜಕೀಯ ಹಾಗೂ ಪ್ರಚಾರದ ಹಿನ್ನೆಲೆಯಲ್ಲಿ ಹಲವರು ಮಾಧ್ಯಮಗಳಲ್ಲಿ ಪ್ರಚಾರದ ಮೂಲಕ ಹಾಗೂ ವೇದಿಕೆಯ ಭರ್ಜರಿ ಭಾಷಣಗಳ ಮೂಲಕ ತಮ್ಮ ಹೆಸರು ಮತ್ತು ಪ್ರಸಿದ್ಧಿಯನ್ನು ವೃದ್ಧಿಸಿಕೊಳ್ಳುತ್ತಾರೆ. ಆದರೆ ರಾಜು ಕಿರಣಗಿ ಇದಕ್ಕೆ ಅಪವಾದ ವೆಂಬಂತೆ ‘ವನಸುಮದಂತೆ’ ತನ್ನಷ್ಟಕ್ಕೆ ತಾನು ಜನರ ಅಭಿವೃದ್ಧಿಗಾಗಿ ಸಹಾಯ ಮಾಡುತ್ತಾ, ತಮ್ಮ ಪ್ರಾಂಜಲ ಹಾಗೂ ಪ್ರಾಮಾಣಿಕ ಸೇವೆಯನ್ನು ತಳಮಟ್ಟದಿಂದ ಮಾಡುತ್ತಾ ವಿಕಸನಗೊಂಡಿದ್ದಾರೆ. ಬಡವರ ಸೇವೆಗಾಗಿ ಯಾವುದೇ ಸರ್ಕಾರಿ ನೌಕರಿಯ ಬೆನ್ನು …

Read More »

ರಾಜ್ಯ ಸರ್ಕಾರದಿಂದ ಇಂದು ಅನ್ ಲಾಕ್ 3.0 ಮಾರ್ಗಸೂಚಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಇಂದು ಅನ್ ಲಾಕ್ 3.0 ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಈ ಮಾರ್ಗಸೂಚಿ ಕ್ರಮದಂತೆ ರಾಜ್ಯದಲ್ಲಿ ಮತ್ತಷ್ಟು ಚಟುವಟಿಕೆಗಳಿಗೆ ಮತ್ತೆ ರಿಲ್ಯಾಕ್ಸ್ ನೀಡಲಾಗಿದೆ. ಈ ಮಾರ್ಗಸೂಚಿಯಂತೆ ದೇವಾಲಯ, ಮಾಲ್ ಸೇರಿದಂತೆ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಈ ಕುರಿತಂತೆ ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ: 05-07-2021 ರಂದು ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: …

Read More »

ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್

ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು. ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, ಮಂಡ್ಯ, …

Read More »

ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ತಡೆ ಹಿಡಿದ ಹೈಕೋರ್ಟ್

  ಕೊರೋನಾ ಕಾರಣಕ್ಕೆ ಪರೀಕ್ಷೆ ಇಲ್ಲದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮುಂದಾಗಿದ್ದ ಸರ್ಕಾರದ ನಡೆಗೆ ಹೈಕೋರ್ಟ್ ತಡೆ ನೀಡಿದೆ. ಸಾಮಾನ್ಯ ವಿದ್ಯಾರ್ಥಿಗಳಿಗೂ ಹಾಗೂ ರಿಪೀಟರ್ಸ್ ಗಳಿಗೂ ತಾರತಮ್ಯವೆಸಗಲಾಗುತ್ತಿದೆ.ರಿಪೀಟರ್ಸ್ ಗೂ ಪರೀಕ್ಷೆ ಇಲ್ಲದೇ ಪಾಸ್ ಮಾಡುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ತಾತ್ಕಾಲಿಕ ತಡೆ ನೀಡಿದೆ. ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ, ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಸರಿಯಲ್ಲ. …

Read More »

ಮಕ್ಕಳ ಮನೆಗೆ ಹಾಲಿನ ಪುಡಿ. ಸಿಎಂ ಯಡಿಯೂರಪ್ಪನವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ

  ಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಎರಡು ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಪೌಷ್ಠಿಕ ಹಾಲಿನ ಪುಡಿಯನ್ನು ಅವರ ಮನೆಗೆ ವಿತರಿಸಲು ಕೆಎಂಎಫ್ ಮಾಡಿಕೊಂಡ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರುವಾರ ರಾತ್ರಿ ಮುಖ್ಯಮಂತ್ರಿಗಳ ಗೃಹ ಕಛೇರಿಗೆ ತೆರಳಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಮಕ್ಕಳ …

Read More »

ಜೂ. 7 ಕ್ಕೆ ಲಾಕ್ ಡೌನ್ ಮುಗಿಯುವ ನಿರೀಕ್ಷಿಸಿದ್ದವರಿಗೆ ಬಿಗ್ ಶಾಕ್ ಜೂ. 30 ರವರೆಗೆ ಮನೆವಾಸ ಮುಂದುವರಿಕೆ ಸಾಧ್ಯತೆ?

ಬೆಂಗಳೂರು: ಜೂನ್ 30 ರವರೆಗೆ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕೆಂದು ಕೇಂದ್ರ ಗೃಹ ಇಲಾಖೆಯಿಂದ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ. ಕೇಂದ್ರ ಗೃಹ ಇಲಾಖೆ ಪತ್ರ ಬರೆದ ಹಿನ್ನೆಲೆಯಲ್ಲಿ ಜೂನ್ 7 ರ ನಂತರ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಚರ್ಚೆ ನಡೆಸಲಾಗುವುದು. ಈಗಾಗಲೇ ಲಾಕ್ಡೌನ್ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಸರ್ಕಾರ ಕೂಡ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿರುವ ಹಿನ್ನೆಲೆಯಲ್ಲಿ ಜೂನ್ 5 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು …

Read More »

ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಲಾಕ್ ಡೌನ್ : ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ …

Read More »

ಲಾಠಿ ಜಾರ್ಜ್ ಮಾಡದಂತೆ ಸೂಚನೆ ಕೊಟ್ಟ ಕಮಲ್ ಪಂತ್

ಬೆಂಗಳೂರು: ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಕರ್ನಾಟಕದಲ್ಲಿ ಸೋಮವಾರದಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಮೇ 24ರ ತನಕ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿ ಸಂಚಾರ ನಡೆಸುವ ಜನರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಲಾಕ್‌ಡೌನ್‌ ಲಾಠಿ ಹಿಡಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪೊಲೀಸರಿಗೆ ಸೂಚನೆಯೊಂದನ್ನು ನೀಡಿದ್ದಾರೆ. …

Read More »