ಧಾರವಾಡ :
ಕೊರೋನಾ ವೈರಸ್ ಹರಡದಂತೆ ಅರೋಗ್ಯ ಇಲಾಖೆಯಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಗಾಳಿಯಲ್ಲಿ ಔಷಧ ಸಿಂಪಡಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಇಂದು ರಾತ್ರಿ 10 ಗಂಟೆಯುಂದ ಬೆಳಿಗ್ಗೆ 5 ಗಂಟೆ ವರೆಗೆ ಗಾಳಿಯಲ್ಲಿ ಔಷಧ ಸಿಂಪಡಿಸಲಾಗುತ್ತಿದೆ.
ಹೀಗಾಗಿ ಸಾರ್ವಜನಿಕರು ಹೊರಗಡೆ ಬರಬಾರದು ಎಂಬುದು ಸುಳ್ಳು ಸುದ್ದಿ ಹರಿದಾಡುತ್ತಿದೆ. ಇಂತಹ ಊಹಾಪೋಹ ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದಿದ್ದಾರೆ.
ಆರೋಗ್ಯ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಇಂತಹ ಗಾಳಿ ಸುದ್ದಿಗಳು , ವದಂತಿಗಳನ್ನು ಯಾರೂ ನಂಬಬಾರದು ಮತ್ತು ಅನಗತ್ಯ ಭಯಭೀತರಾಗಬಾರದು. ಜಿಲ್ಲಾಡಳಿತದಿಂದ ನೀಡಲಾಗುವ ಅಧಿಕೃತ ಮಾಹಿತಿಯನ್ನು ಮಾತ್ರ ಸಾರ್ವಜನಿಕರು ಪರಿಗಣಿಸಬೇಕು ಎಂದು ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ಧಾರೆ.