ಗೋಕಾಕ: ಕೋವಿಡ್ 19 ಮಹಾಮಾರಿಯಿಂದ ಅನೇಕ ನಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದೆವೆ. ಕೇಂದ್ರ ಸರಕಾರ ಮೃತ ಫಲಾನುಭವಿಗಳ ಖಾತೆಗೆ 50 ಸಾವಿರ ರೂಪಾಯಿ ಪರಿಹಾರ ಧನ ಈಗಾಗಲೇ ಜಮೆ ಮಾಡುತ್ತಿದ್ದು, ರಾಜ್ಯ ಸರಕಾರದಿಂದಲೂ ಒಂದು ಲಕ್ಷ ಪರಿಹಾರ ವಿತರಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಕೋವಿಡ್ 19 ವೈರಾಣು ಸೋಂಕಿನಿಂದ ಮೃತಪಟ್ಟ ಕುಟುಂಬದ ಸದಸ್ಯರಿಗೆ ರಾಜ್ಯಸರಕಾರದಿಂದ ನೀಡಲಾಗುತ್ತಿರುವ ಒಂದು ಲಕ್ಷ ರೂ ಪರಿಹಾರ ಧನ ಚೆಕಗಳನ್ನು ವಿತರಿಸಿ, ಮಾತನಾಡಿದರು.
ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ ಈಗಾಗಲೇ ಬಿಪಿಎಲ್ ಕಾರ್ಡ ಹೊಂದಿರುವ 23 ಫಲಾನುಭವಿಗಳ ಚೌಕಗಳನ್ನು ವಿತರಿಸಲಾಗಿದ್ದು, ಅತಿ ಶೀಘ್ರದಲ್ಲಿ ಇನ್ನುಳಿದ ಎಪಿಎಲ್ ಕಾರ್ಡ ಹೊಂದಿರುವ ಫಲಾನುಭವಿಗಳಿಹೆ ಪರಿಹಾರ ಧನ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶಿಲ್ದಾರ ಲಕ್ಷ್ಮಣ ಭೋವಿ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಕಾಂತು ಎತ್ತಿನಮನಿ, ಸುರೇಶ ಸನದಿ,
ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮ ಲೆಕ್ಕಾಧಿಕಾರಿಗಳಾದ ಬಿ ಎಸ್ ದೇಸಾಯಿ, ಮಲ್ಲಿಕಾರ್ಜುನ ಘಡಕರಿ, ಭಾಸ್ಕರ ಜೋಶಿ ಸೇರಿದಂತೆ ಅನೇಕರು ಇದ್ದರು.
Check Also
ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿದ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ
Spread the love ಗೋಕಾಕ- ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಭೇಟಿ ಮಾಡಿ ಸಂತ್ರಸ್ತರಿಗೆ …