Breaking News
Home / ಮೂಡಲಗಿ / ಶಹಾಪೂರ ಮತ್ತು ನಿರಾಣ ಗೆಲುವಿಗೆ ಶ್ರಮಿಸಿ : ಸುಭಾಸ ಪಾಟೀಲ

ಶಹಾಪೂರ ಮತ್ತು ನಿರಾಣ ಗೆಲುವಿಗೆ ಶ್ರಮಿಸಿ : ಸುಭಾಸ ಪಾಟೀಲ

Spread the love


ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು.
ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಅರುಣ ಶಹಾಪೂರ ಮತ್ತು ವಾಯುವ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಹಣಮಂತ ನಿರಾಣ ಅವರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕೆಂದು ಕೋರಿದರು.
ಈಗಾಗಲೇ ಎರಡನೇ ಬಾರಿ ಆಯ್ಕೆಯಾಗಿ ಮೂರನೇ ಬಾರಿಗೆ ಸ್ಪರ್ಧಿಸಿರುವ ಅರುಣ ಶಹಾಪೂರ ಅವರು ಶಿಕ್ಷಕರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಟ್ಟಿದ್ದಾರೆ. ಅದರಂತೆ ಎರಡನೇ ಬಾರಿಗೆ ಚುನಾವಣೆ ಕಣದಲ್ಲಿರುವ ಹಣಮಂತ ನಿರಾಣ ಪದವೀಧರರ ಧ್ವನಿಯಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದ್ದರಿಂದ ಇವರ ಗೆಲುವಿನಲ್ಲಿ ಕಾರ್ಯಕರ್ತರು ಮಹತ್ತರ ಪಾತ್ರ ವಹಿಸುವಂತೆ ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.
ವಿಧಾನ ಪರಿಷತ್ ಚುನಾವಣೆಯ ಅರಭಾವಿ ಮಂಡಲ ಪ್ರಭಾರಿ ಗುರುಪಾದ ಕಳ್ಳಿ ಮಾತನಾಡಿ, ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅರಭಾವಿ ಮಂಡಲದಿಂದ ಬಿಜೆಪಿಗೆ ಅತ್ಯಧಿಕ ಮತಗಳ ಮುನ್ನಡೆಯೊಂದಿಗೆ ವಿಧಾನ ಪರಿಷತ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಶಾಸಕರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ, ಜಿಲ್ಲಾ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭೀಮಶಿ ಮಾಳೇದವರ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಬಸವರಾಜ ಹಿಡಕಲ್, ಜಿಲ್ಲಾ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಓಬಿಸಿ ಮೋರ್ಚಾ ಅಧ್ಯಕ್ಷ ಸಂಗಣ್ಣ ಕಂಠಿಕಾರ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಯುವಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಕುದರಿ, ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಫೋಟೋ : ಸುಭಾಸ ಪಾಟೀಲ, ಜಿಲ್ಲಾ ಪ್ರಧಾನ ಪ್ರಧಾನ ಕಾರ್ಯದರ್ಶಿ.


Spread the love

About Ad9 Haberleri

Check Also

ಮೂಡಲಗಿಯಲ್ಲಿ 6.92 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love *ಮೂಡಲಗಿ*- ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಿದ್ದು, ಇದಕ್ಕಾಗಿ 6.92 ಕೋಟಿ ರೂ. …

Leave a Reply

Your email address will not be published. Required fields are marked *