Breaking News

ಮೂಡಲಗಿ ಪಟ್ಟಣಕ್ಕೆ 3ಸಾವಿರ ಕನ್ನಡ ಬಾವುಟ ವಿತರಿಸಿದ ಶಾಸಕ ಬಾಲಚಂದ್ರಜಾರಕಿಹೊಳಿ

Spread the love

ಗೋಕಾಕ : 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು.
ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ
ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂಘಟನೆಗಳ ಕಾರ್ಯಕರ್ತರಿಗೆ ಕನ್ನಡ ಬಾವುಟಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೂಡಲಗಿ ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಅದ್ದೂರಿಯಾಗಿ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ  ಮರೆಪ್ಪ ಮರೆಪ್ಪಗೋಳ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About Ad9 News

Check Also

ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ. ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

Spread the love ಗೋಕಾಕ್- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಅನುದಾನದ ಮಹಾಪೂರವೇ ಹರಿದು …

Leave a Reply

Your email address will not be published. Required fields are marked *