*ಗೋಕಾಕ್*- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಭೀಮಪ್ಪ ಗಡಾದ ಅವರನ್ನು 74700 ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ಬಾಲಚಂದ್ರ ಜಾರಕಿಹೊಳಿಯವರು “ಡಬಲ್ ಹ್ಯಾಟ್ರಿಕ್” ಸಾಧನೆ ಮಾಡಿದ್ದಾರೆ.
ಅಲ್ಲದೇ ಆಡಳಿತಾರೂಢ ಬಿಜೆಪಿಯಿಂದ ರಾಜ್ಯದಲ್ಲಿಯೇ ಅತೀ ಹೆಚ್ಚಿನ ಮತಗಳಿಂದ ಆಯ್ಕೆಯಾದ ಕೀರ್ತಿಗೆ ಬಾಲಚಂದ್ರ ಜಾರಕಿಹೊಳಿಯವರು ಭಾಜನರಾಗಿದ್ದಾರೆ.
ಬಾಲಚಂದ್ರ ಜಾರಕಿಹೊಳಿಯವರು 2004 ರಿಂದ ಸತತವಾಗಿ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬರುತ್ತಿದ್ದಾರೆ.
ಮೇ.10 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿಯನ್ನು ಹೊರತುಪಡಿಸಿದರೆ ಕ್ಷೇತ್ರದ ಯಾವೊಂದು ಗ್ರಾಮಗಳಿಗೆ ತೆರಳದೇ ಕೆಎಂಎಫ್ ಕಾರ್ಯದೊತ್ತಡದಿಂದ ಚುನಾವಣಾ ಪ್ರಚಾರದ ಹೊಣೆಯನ್ನು ಕಛೇರಿಯ ಸಹಾಯಕರು ಮತ್ತು ಕಾರ್ಯಕರ್ತರಿಗೆ ನೀಡಿದ್ದರು ಎಂಬುದು ವಿಶೇಷವಾಗಿದೆ. ಒಂದು ವೇಳೆ ಸ್ವತಃ ಬಾಲಚಂದ್ರ ಜಾರಕಿಹೊಳಿ ಅವರು ಪ್ರಚಾರದ ಅಖಾಡಕ್ಕೆ ಇಳಿದಿದ್ದರೆ ಗೆಲುವಿನ ಅಂತರ ಈ ಬಾರಿ ಒಂದು ಲಕ್ಷ ಮತಗಳನ್ನು ಮೀರುತ್ತಿತ್ತು ಎಂಬುದು ಕ್ಷೇತ್ರದ ಮುಖಂಡರ ಅನಿಸಿಕೆಯಾಗಿದೆ.
26 ಸುತ್ತಿನ ಮತ ಎಣಿಕೆ ಮುಗಿದಾಗ ಬಾಲಚಂದ್ರ ಜಾರಕಿಹೊಳಿ ಅವರು 1,16,304 ಮತಗಳನ್ನು ಪಡೆದರೆ, ಅವರ ಎದುರಾಳಿ ಭೀಮಪ್ಪ ಗಡಾದ ಅವರು 43856 ಮತಗಳನ್ನಷ್ಟೇ ಪಡೆಯಲು ಶಕ್ತರಾದರು.
ಕಾಂಗ್ರೆಸ್ ನ ಅಭ್ಯರ್ಥಿ ಅರವಿಂದ ದಳವಾಯಿ ಅವರು ಕೇವಲ 23,820 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಮುನ್ಯಾಳ ಮತ್ತು ದುರದುಂಡಿ ಗ್ರಾಮದ ಮತಗಟ್ಟೆಗಳ ಫಲಿತಾಂಶವು ತಾಂತ್ರಿಕ ಕಾರಣಗಳಿಂದ ಬಾಕಿ ಉಳಿದಿದ್ದು, ಈ ಫಲಿತಾಂಶವು ಇದುವರೆಗೂ ಪ್ರಕಟ ಮಾಡಿಲ್ಲ. ಇನ್ನೂ ಮುಂದುವರೆದಿದೆ. ಬಾಲಚಂದ್ರ ಜಾರಕಿಹೊಳಿ ಅವರ ಮುನ್ನೆಡೆಯ ಮತಗಳು ಇನ್ನೂ ಅಧಿಕವಾಗಲಿದೆ. ಇನ್ನೂ ಒಂದರಿಂದ 2000 ತನಕ ಗೆಲುವಿನ ಅಂತರ ಏರಿಕೆಯಾಗುವ ಲಕ್ಷಣವಿದೆ ಎಂದು ಹೇಳಲಾಗುತ್ತಿದೆ. ಬಾಲಚಂದ್ರ ಜಾರಕಿಹೊಳಿ ಅವರಿಗೆ 74,700 ಮತಗಳ ಮುನ್ನಡೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.
ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು 74,700 ಮತಗಳ ಮುನ್ನಡೆಯೊಂದಿಗೆ 6ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಬಾಲಚಂದ್ರ ಜಾರಕಿಹೊಳಿಯವರ ಗೆಲುವು ಪ್ರಕಟವಾಗುತ್ತಿದ್ದಂತೆಯೇ ಕಾರ್ಯಕರ್ತರ ಹರ್ಷ ಮುಗಿಲು ಮುಟ್ಟಿತು.
ಕಾರ್ಯಕರ್ತರು ಪರಸ್ಪರ ಗುಲಾಲು ಎರಚಿ, ಪಟಾಕಿ ಸಿಡಿಸಿ ತಮ್ಮ ಸಂಭ್ರಮವನ್ನು ಹಂಚಿಕೊಂಡರು.
ಶಾಸಕರ ಗೃಹ ಕಛೇರಿಯಲ್ಲಿ ಸಾರ್ವಜನಿಕರಿಗಾಗಿ ಟಿವಿ ವೀಕ್ಷಿಸಲು ದೊಡ್ಡದಾದ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು.
*ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ*
ಈ ಚುನಾವಣೆಯಲ್ಲಿ ಬಿಜೆಪಿಯಿಂದ ಅತೀ ಹೆಚ್ಚಿನ ಲೀಡ್ ದೊರಕಿಸಿಕೊಟ್ಟಿರುವ ಅರಭಾವಿ ಕ್ಷೇತ್ರದ ಮತದಾರರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಜನರು ನನ್ನ ಮೇಲೆ ಪ್ರೀತಿ, ವಿಶ್ವಾಸವನ್ನು ಇಟ್ಟುಕೊಂಡು ಮತ್ತೊಂದು ಅವಧಿಗೆ ಆಯ್ಕೆ ಮಾಡಿದ್ದಾರೆ. ಈ ಮೂಲಕ ಮತ್ತಷ್ಟು ಜವಾಬ್ದಾರಿ ಹೊರಿಸಿದ್ದಾರೆ. ಜನರ ಪ್ರೀತಿಗೆ ಸದಾ ಆಭಾರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದರು.
ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ ಪರ ತೀರ್ಪು ನೀಡಿದ್ದಾರೆ. ಜನರ ತೀರ್ಪನ್ನು ಗೌರವಿಸುತ್ತೇವೆ. ವಿರೋಧಿ ಪಕ್ಷದಲ್ಲಿ ಕುಳಿತುಕೊಳ್ಳುತ್ತೇವೆ. ನಾವೆಂದಿಗೂ ಅಭಿವೃದ್ಧಿ ಪರ ಚಿಂತನೆಗಳನ್ನು ಮಾಡುತ್ತೇವೆ ಎಂದು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ.
ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ
ಗಡಾದ ಅವರನ್ನು 71,540 ಮತಗಳಿಂದ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ.
ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ
ಗೋಕಾಕ್- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಭೀಮಪ್ಪ ಗಡಾದ ಅವರನ್ನು 71540 ಮತಗಳಿಂದ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ಬಾಲಚಂದ್ರ ಜಾರಕಿಹೊಳಿಯವರು “ಡಬಲ್ ಹ್ಯಾಟ್ರಿಕ್” ಸಾಧನೆ ಮಾಡಿದ್ದಾರೆ.
ಅಲ್ಲದೇ ಆಡಳಿತಾರೂಢ ಬಿಜೆಪಿಯಿಂದ ರಾಜ್ಯದಲ್ಲಿಯೇ ಅತೀ ಹೆಚ್ಚಿನ ಮತಗಳಿಂದ ಆಯ್ಕೆಯಾದ ಕೀರ್ತಿಗೆ ಬಾಲಚಂದ್ರ ಜಾರಕಿಹೊಳಿಯವರು ಭಾಜನರಾಗಿದ್ದಾರೆ.
ಬಾಲಚಂದ್ರ ಜಾರಕಿಹೊಳಿಯವರು 2004 ರಿಂದ ಸತತವಾಗಿ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬರುತ್ತಿದ್ದಾರೆ.
ಮೇ.10 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿಯನ್ನು ಹೊರತುಪಡಿಸಿದರೆ ಕ್ಷೇತ್ರದ ಯಾವೊಂದು ಗ್ರಾಮಗಳಿಗೆ ತೆರಳದೇ ಕೆಎಂಎಫ್ ಕಾರ್ಯದೊತ್ತಡದಿಂದ ಚುನಾವಣಾ ಪ್ರಚಾರದ ಹೊಣೆಯನ್ನು ಕಛೇರಿಯ ಸಹಾಯಕರು ಮತ್ತು ಕಾರ್ಯಕರ್ತರಿಗೆ ನೀಡಿದ್ದರು ಎಂಬುದು ವಿಶೇಷವಾಗಿದೆ. ಒಂದು ವೇಳೆ ಸ್ವತಃ ಬಾಲಚಂದ್ರ ಜಾರಕಿಹೊಳಿ ಅವರು ಪ್ರಚಾರದ ಅಖಾಡಕ್ಕೆ ಇಳಿದಿದ್ದರೆ ಗೆಲುವಿನ ಅಂತರ ಈ ಬಾರಿ ಒಂದು ಲಕ್ಷ ಮತಗಳನ್ನು ಮೀರುತ್ತಿತ್ತು ಎಂಬುದು ಕ್ಷೇತ್ರದ ಮುಖಂಡರ ಅನಿಸಿಕೆಯಾಗಿದೆ.
26 ಸುತ್ತಿನ ಮತ ಎಣಿಕೆ ಮುಗಿದಾಗ ಬಾಲಚಂದ್ರ ಜಾರಕಿಹೊಳಿ ಅವರು 1,15,402 ಮತಗಳನ್ನು ಪಡೆದರೆ, ಅವರ ಎದುರಾಳಿ ಭೀಮಪ್ಪ ಗಡಾದ ಅವರು 43862 ಮತಗಳನ್ನಷ್ಟೇ ಪಡೆಯಲು ಶಕ್ತರಾದರು.
ಕಾಂಗ್ರೆಸ್ ನ ಅಭ್ಯರ್ಥಿ ಅರವಿಂದ ದಳವಾಯಿ ಅವರು ಕೇವಲ 23,956 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು 71540 ಮತಗಳ ಮುನ್ನಡೆಯೊಂದಿಗೆ ಸತತವಾಗಿ 6ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಬಾಲಚಂದ್ರ ಜಾರಕಿಹೊಳಿಯವರ ಗೆಲುವು ಪ್ರಕಟವಾಗುತ್ತಿದ್ದಂತೆಯೇ ಕಾರ್ಯಕರ್ತರ ಹರ್ಷ ಮುಗಿಲು ಮುಟ್ಟಿತು.
ಕಾರ್ಯಕರ್ತರು ಪರಸ್ಪರ ಗುಲಾಲು ಎರಚಿ, ಪಟಾಕಿ ಸಿಡಿಸಿ ತಮ್ಮ ಸಂಭ್ರಮವನ್ನು ಹಂಚಿಕೊಂಡರು.
ಶಾಸಕರ ಗೃಹ ಕಛೇರಿಯಲ್ಲಿ ಸಾರ್ವಜನಿಕರಿಗಾಗಿ ಟಿವಿ ವೀಕ್ಷಿಸಲು ದೊಡ್ಡದಾದ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು.
ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ- ಈ ಚುನಾವಣೆಯಲ್ಲಿ ಬಿಜೆಪಿಯಿಂದ ಅತೀ ಹೆಚ್ಚಿನ ಲೀಡ್ ದೊರಕಿಸಿಕೊಟ್ಟಿರುವ ಅರಭಾವಿ ಕ್ಷೇತ್ರದ ಮತದಾರರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.