Breaking News

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

Spread the love

*ಗೋಕಾಕ* : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ಶಿಕ್ಷಕರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 29 ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸ್ಮರಣಿಕೆ ಹಾಗೂ ತಮ್ಮ ಅಭಿನಂದನಾ ಪತ್ರ ವಿತರಿಸಿ ಮಾತನಾಡಿದರು.
ಸನ್ 2021-22ನೇ ಶೈಕ್ಷಣಿಕ ವರ್ಷದಲ್ಲಿ ಮೂಡಲಗಿ ವಲಯದ ಸರಕಾರಿ, ಅನುದಾನಿತ, ಅನುದಾನ ರಹಿತ ಮತ್ತು ವಸತಿ ಶಾಲೆಗಳ 29 ಪ್ರೌಢ ಶಾಲೆಗಳು ಶೇ 100ರಷ್ಟು ಸಾಧನೆ ಮಾಡಿವೆ. 2022-23ರಲ್ಲಿ ನಡೆದಿರುವ ಪರೀಕ್ಷೆಯ ಸಾಧನೆಗಳಲ್ಲಿಯೂ ಇನ್ನೂ ಸ್ಮರಣಿಕೆ ಬರಬೇಕಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಸಾಧನೆ ಗೈದಿರುವ ಶಾಲೆಗಳನ್ನು ಗುರುತಿಸಿ ಸ್ಮರಣಿಕೆ ಫಲಕಗಳನ್ನು ನೀಡುತ್ತ ಬರುತ್ತಿದ್ದಾರೆ ಎಂದು ಹೇಳಿದರು.
ಮೂಡಲಗಿ ವಲಯವು ಶಿಕ್ಷಕರ ಪ್ರಯತ್ನದಿಂದ ಪ್ರತಿ ವರ್ಷವೂ ರಾಜ್ಯದಲ್ಲಿ ಉತ್ತಮ ರ್ಯಾಂಕಗಳನ್ನು ವಿದ್ಯಾರ್ಥಿಗಳು ಗಳಿಸಿ ವಲಯಕ್ಕೆ ಉತ್ತಮ ಹೆಸರನ್ನು ತರುತ್ತಿರುವುದು ಸಂತಸದ ಸಂಗತಿಯಾಗಿದೆ. ಈ ಹಿಂದೆ ಮಾಡಿದ ಸಾಧನೆಯನ್ನು ಮುಂದಿನ ವರ್ಷದಲ್ಲಿ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಮಹತ್ತರ ಸಾಧನೆ ಮಾಡಿ ಶಾಲೆಗೆ ಮತ್ತು ವಲಯಕ್ಕೆ ಕೀರ್ತಿ ತರುವ ಕೆಲಸ ಮಾಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ರಾಜ್ಯದಲ್ಲಿಯೇ ಮೂಡಲಗಿ ವಲಯವು ಸರ್ಕಾರಿ ಶಾಲೆಗಳಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದಾರೆ. ಇದು ರಾಜ್ಯದಲ್ಲಿಯೇ 3ನೇ ದೊಡ್ಡ ವಲಯ ಮೂಡಲಗಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು 29 ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸ್ಮರಣಿಕೆ ಹಾಗೂ ಅಭಿನಂದನಾ ಪತ್ರಗಳನ್ನು ವಿತರಿಸಿದರು. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸತ್ಕರಿಸಿದರು.
ಮೂಡಲಗಿ ವಲಯದ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ, ಮಧ್ಯಾಹ್ನದ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕ ಎ.ಡಿ. ಮಲಬನ್ನವರ, ವಲಯದ ಪರೀಕ್ಷಾ ನೋಡಲ್ ಅಧಿಕಾರಿ ಸತೀಶ ಬಿ.ಎಸ್, ವಲಯದ ಬಿಆರ್‍ಪಿ, ಸಿಆರ್‍ಪಿ, ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

 


Spread the love

About Ad9 News

Check Also

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷ! ವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ

Spread the love ಗೋಕಾಕ ಮಾ 3 : ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ …

Leave a Reply

Your email address will not be published. Required fields are marked *