Breaking News

ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

Spread the love

ಗೋಕಾಕ- ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.
ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ‌ಸಮಾಜಸೇವೆಯಲ್ಲಿಯೂ ಹೆಸರುವಾಸಿಯಾಗಿದ್ದರು.
ಡಾ.ಲೀಲಾವತಿಯವರ ಆತ್ಮಕ್ಕೆ ದೇವರು ಚಿರಶಾಂತಿಯನ್ನೀಡಲೆಂದು ಪ್ರಾರ್ಥಿಸಿರುವ ಅವರು, ದಿವಂಗತರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ್ದಾರೆ.


Spread the love

About Ad9 News

Check Also

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷ! ವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ

Spread the love ಗೋಕಾಕ ಮಾ 3 : ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ …

Leave a Reply

Your email address will not be published. Required fields are marked *