Breaking News
Home / ಗೋಕಾಕ / ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ: ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ

ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ: ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ

Spread the love

ಗೋಕಾಕ್- ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಶುಕ್ರವಾರ ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ ಎಂದು ಹೇಳಿದರು.
ಮಕ್ಕಳಲ್ಲಿ ಐತಿಹಾಸಿಕ ಪ್ರಜ್ಞೆ ಮೂಡಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಜೊತೆಗೆ ಭೌಗೋಳಿಕತೆಗೆ ಪ್ರವಾಸಗಳು ಮಕ್ಕಳಿಗೆ ಸಹಕಾರಿಯಾಗುತ್ತದೆ. ಮಕ್ಕಳ ಉಜ್ವಲ ಭವಿಷ್ಯವನ್ನು ಮನಗಂಡು ಶಿಕ್ಷಣ ಇಲಾಖೆಯು ಪ್ರತಿ ವರ್ಷ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳ ಜ್ಞಾನಾಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.
ಸರ್ವೋತ್ತಮ ಜಾರಕಿಹೊಳಿ ಅವರು ಸಾರಿಗೆಯ ಬಸ್ಸಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭ‌ ಕೋರಿದರು.
ಮೂಡಲಗಿ ಬಿಇಓ ಅಜೀತ ಮನ್ನಿಕೇರಿ, ಅರಭಾವಿ ಶಾಸಕರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ, ಮೂಡಲಗಿ
ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ, ಸಾರಿಗೆ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Ad9 Haberleri

Check Also

ಅಂಬೇಡ್ಕರ್ ವಿಶ್ವರತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಗೋಕಾಕ್- ಅಸ್ಪೃಶ್ಯತೆ ನಿವಾರಣೆಗಾಗಿ ಮತ್ತು ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ಪುರುಷರು ಅಂಬೇಡ್ಕರ್ ಆಗಿದ್ದರು ಎಂದು …

Leave a Reply

Your email address will not be published. Required fields are marked *