Breaking News
Home / Uncategorized / ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

*ಗೋಕಾಕ*: ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮೊಂದಿಗೆ ನಾವಿದ್ದೇವೆ. ಸಮಸ್ಯೆಗಳು ಎಲ್ಲರಿಗೂ ಸರ್ವೆ ಸಾಮಾನ್ಯ ಮನೆಯ ಯಜಮಾನ ಆತ್ಮಹತ್ಯೆ ಮಾಡಿಕೊಂಡರೇ ಇಡೀ ಕುಟುಂಬವು ಬೀದಿಗೆ ಬರುತ್ತದೆ. ಆತ್ಮಹತ್ಯೆಯಂತಹ ಕ್ರೂರ ಕೃತ್ಯಕ್ಕೆ ಬಲಿಯಾಗಬೇಡಿ. ಸರ್ಕಾರಗಳ ಎಲ್ಲ ಸೌಲಭ್ಯಗಳನ್ನು ಕ್ಷೇತ್ರದ ಎಲ್ಲ ರೈತರಿಗೆ ತಲುಪಿಸುವುದರೊಂದಿಗೆ ಅವರ ಸಮಸ್ಯೆಗಳಿಗೆ ಸದಾ ನಾವು ಸ್ಪಂದಿಸುತ್ತಿದ್ದೇವೆ ಎಂದು ತಿಳಿಸಿದರು.


ಇದೇ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅರಭಾವಿ ಕ್ಷೇತ್ರದ ನಲ್ಲಾನಟ್ಟಿ ಗ್ರಾಮದ ರಾಜೇಂದ್ರ ಕುಳ್ಳೂರ, ಕುಲಗೋಡ ಗ್ರಾಮದ ಸುಭಾಶ ದಾಸರೆಡ್ಡಿ, ದುರದುಂಡಿಯ ಸಿದ್ದಪ್ಪ ಅಂತರಗಟ್ಟಿ ಕುಟುಂಬಗಳಿಗೆ ತಲಾ 5ಲಕ್ಷದಂತೆ 15 ಲಕ್ಷರೂಗಳ ಮಂಜೂರಾತಿ ಆದೇಶ ಪತ್ರವನ್ನು ಶಾಸಕರು ವಿತರಿಸಿದರು.
ಈ ಸಂದರ್ಭದಲ್ಲಿ ಟಿಎಪಿಎಮ್‍ಎಸ್ ಅಧ್ಯಕ್ಷ ಅಶೋಕ ನಾಯಿಕ ಮುಖಂಡರುಗಳಾದ ಮುತ್ತೇಪ್ಪ ಕುಳ್ಳೂರ, ಸಿದ್ರಾಮ ಕುಳ್ಳೂರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಮ್.ಎಮ್.ನದಾಫ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Ad9 Haberleri

Check Also

ನಾಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ : ಮಹದೇವ ಶೆಕ್ಕಿ

Spread the love ಮೂಡಲಗಿ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ …

Leave a Reply

Your email address will not be published. Required fields are marked *