ಮೂಡಲಗಿ: ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಮಾ. 14 ರವಿವಾರದಂದು ಮೂಡಲಗಿ ಪಟ್ಟಣದಲ್ಲಿ ಮಾಡುವ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಕೊಂಡಿದ್ದಾರೆ. ನಾಡಿನ ಹಿರಿಯ ಸಾಹಿತಿ ಪ್ರೋ. ಸಂಗಮೇಶ ಗುಜಗೊಂಡ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತೆಂದು ಕ.ಸಾ.ಪ. ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
