ಹಾವೇರಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತ್ರ ಜೈಲಿಗೆ ಹೋಗಲ್ಲ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಕೂಡ ಜೈಲಿಗೆ ಹೋಗಲಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ..
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ದೈಬೈ, ಮಾರಿಷ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಆಸ್ತಿ ಹೊಂದಿದ್ದಾರೆ. ಅದಕ್ಕೆ ಆಗಾಗ ದುಬೈ, ಮಾರಿಷ್ ಗೆ ಅವರು ಹೋಗೋದು ಎಂದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಉಮೇಶ್ ಮನೆಯಲ್ಲಿ ಸಿಕ್ಕ 10 ಕೋಟಿ ಹಣ ಬಿಎಸ್ ಯಡಿಯೂರಪ್ಪ, ಬಿ.ವೈ ವಿಜಯೇಂದ್ರಗೆ ಸೇರಿದ್ದಾಗಿದೆ. ಈ ಪ್ರಕರಣದಲ್ಲಿಯೇ ಅವರು ಜೈಲಿಗೆ ಹೋಗಲಿದ್ದಾರೆ ಎಂಬುದಾಗಿ ಹೇಳಿದರು.
ಇದೇ ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಇಲ್ಲವೇ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂಬರುವ ಚುನಾವಣೆ ಎದುರಿಸಲಾಗುತ್ತದೆ. ಸಿಎಂ ಬದಲಾವಣೆ ಎಂಬುದು ಸುಳ್ಳು ಎಂದರು.
Ad9 News Latest News In Kannada