Breaking News
Home / ರಾಜ್ಯ / ನವೆಂಬರ್ 23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ನವೆಂಬರ್ 23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

Spread the love

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನವೆಂಬರ್ 23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ,ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನವೆಂಬರ್ 22 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ..

ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಉತ್ತರ ಕರ್ನಾಟಕದ ಧಾರವಾಡ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


Spread the love

About Ad9 Haberleri

Check Also

ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್

Spread the love   ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ …