ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ .
ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ಮೂರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ.ರಾಜ್ಯದ ಲಾಕ್ ಡೌನ್ ಭವಿಷ್ಯ, ಲಸಿಕೆಗೆ ಶುಲ್ಕ ನಿಗದಿ ತೀರ್ಮಾನದ ಜೊತೆಗೆ ಶಿಕ್ಷಕರ ವರ್ಗಾವಣೆಗೆ ಸಮಸ್ಯೆಗೆ ಪರಿಹಾರ ಏನೆಂಬ ಪ್ರಶ್ನೆಗೆ ಇಂದು ಉತ್ತತರ ಸಿಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ 2 ವಾರ ನಗರವನ್ನು ಲಾಕ್ ಡೌನ್ ಮಾಡುವುದು ಅನಿವಾರ್ಯ ಎಂದು ತಜ್ಞರು ಸಲಹೆ ನೀಡಿರುವುದರಿಂದ ಇಂದಿನ ಸಭೆ ಮೇಲೆ ರಾಜ್ಯದ ಜನರ ದೃಷ್ಟಿ ನೆಟ್ಟಿದೆ. ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಲಾಕ್ ಡೌನ್ ಮಾಡುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಈ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎನ್ನಲಾಗಿದೆ.
ರಾಜ್ಯಾದ್ಯಂತ ಮುಂದಿನ 15 ದಿನ ಲಾಕ್ ಡೌನ್ ಮಾಡುವ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದ್ದು. ವಾರಾಂತ್ಯದ ಕರ್ಪ್ಯೂ ಅಥವಾ ಲಾಕ್ ಡೌನ್ ಮಾಡುವ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಸಹೋದ್ಯೋಗಿಗಳ ಜೊತೆ ಚರ್ಚಿಸಿದ್ದಾರೆ. ಬಹುತೇಕ ಸಚಿವರು ವಾರಂತ್ಯದ ಕರ್ಪ್ಯೂ ಮುಂದುವರಿಸಲು ಒಲವು ತೋರಿದ್ದಾರೆ. ಆದರೆ ತಜ್ಞರು ಲಾಕ್ ಡೌನ್ ಗೆ ಸಲಹೆ ನೀಡಿದರೆ ಅದನ್ನು ಒಪ್ಪುವುದು ಸೂಕ್ತ ಎಂದು ಕೆಲವರು ಹೇಳಿದ್ದಾರೆ ಎನ್ನಲಾಗಿದೆ.